AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಮಲ ತಂದೆ ತಾಯಿಗೆ ತಲಾಖ್ ನೀಡಿದ್ದರಿಂದ ಮನನೊಂದು ಮಗ ಆತ್ಮಹತ್ಯೆ

ತ್ರಿವಳಿ ತಲಾಖ್​​ ಹೇಳುವ ಮೂಲಕ ವಿವಾಹ ವಿಚ್ಛೇದನ ನೀಡುವ ಪದ್ಧತಿಗೆ ಕೇಂದ್ರ ಸರ್ಕಾರ ತಡೆನೀಡಿದೆ. ಆದರೂ ಕೂಡ ಕೆಲವೆಡೆ ಈ ಪದ್ಧತಿ ಇನ್ನು ಜಾರಿಯಲ್ಲಿದೆ. ಇದೀಗ ಇದಕ್ಕೆ ಸಾಕ್ಷಿಯೆಂಬಂತೆ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಇಂತಹದೇ ಒಂದು ಘಟನೆ ನಡೆದಿದ್ದು, ಅಮಾಯಕ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೋಲಾರ: ಮಲ ತಂದೆ ತಾಯಿಗೆ ತಲಾಖ್ ನೀಡಿದ್ದರಿಂದ ಮನನೊಂದು ಮಗ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 10, 2025 | 7:26 PM

Share

ಕೋಲಾರ, ಡಿಸೆಂಬರ್​ 10: ತಾಯಿಗೆ ಮಲ ತಂದೆ ವಿಚ್ಛೇದನ (Divorce) ನೀಡಿದ್ದಕ್ಕೆ ನೊಂದು ಮಗ ಆತ್ಮಹತ್ಯೆಗೆ (suicide) ಶರಣಾಗಿರುವಂತಹ ಘಟನೆ ಜಿಲ್ಲೆಯ ಮುಳಬಾಗಿಲು ನಗರದ ರೆಹಮತ್ ನಗರದಲ್ಲಿ ನಡೆದಿದೆ. ಅಫ್ನಾನ್ (25) ಮನೆಯಲ್ಲೇ ನೇಣಿಗೆ ಶರಣಾದ ಮಗ. ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತಾಯಿ ಜಬೀನ್ ತಾಜ್‌ಗೆ ಮಲ ತಂದೆ ಅಕ್ಬರ್ ಆಲಿ ತಲಾಖ್ ಕೊಟ್ಟು ಬೇರೆ ಮದುವೆ ಮಾಡಿಕೊಂಡಿದ್ದಾರೆ. ಈ ವಿಚಾರವಾಗಿ ಅಫ್ನಾನ್​​ ಸಂಬಂಧಿಕರೊಂದಿಗೆ ಗಲಾಟೆ ಮಾಡಿಕೊಂಡಿದ್ದ. ಇದರಿಂದ ಮನನೊಂದು ಮನೆಯಲ್ಲೇ ಅಫ್ನಾನ್​ ನೇಣಿಗೆ ಶರಣಾಗಿದ್ದಾರೆ.

ಜಲ್ಲಿ ಕ್ರಷರ್​​ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

ಚಿಕ್ಕಬಳ್ಳಾಪುರ ತಾಲ್ಲೂಕಿನ ಯಲಗಲಹಳ್ಳಿ ಬಳಿ ಇರುವ ಪ್ರತಿಷ್ಠಿತ ಬೆಸ್ಟೋ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಜಲ್ಲಿ ಕ್ರಷರ್ ಯಂತ್ರಕ್ಕೆ ಸಿಲುಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಇದನ್ನೂ ಓದಿ: ಉದ್ಯಮಿ ಕಿಡ್ನ್ಯಾಪ್: 1 ಕೋಟಿ ರೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ಆರೋಪಿಗಳ ಕೈಗೆ ಸಿಕ್ಕಿದ್ದು ಚಿಪ್ಪು

ಪಶ್ಷಿಮ ಬಂಗಾಳದ ಬಿಸ್ವಜಿತ್ ಬಗಡಿ (21) ಮೃತ ಕಾರ್ಮಿಕ. ಕ್ರಷರ್ ಯಂತ್ರ ಆಪರೇಟ್ ಮಾಡುವಾಗ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೆರೇಸಂದ್ರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಲಾರಿ: ಓರ್ವ ಸಾವು, ಇಬ್ಬರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಟೈಲ್ಸ್ ತುಂಬಿದ್ದ ಲಾರಿ ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಬ್ಬೇಘಟ್ಟ ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ಬಡವಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ: ಬೈಕ್​​ ಸವಾರನಿಗೆ ಗಾಯ

ಘಟನೆಯಲ್ಲಿ ಬಸವನಹಳ್ಳಿಯ ರಂಗನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಗಸರಹೊಳೆಯ ಗಂಗಣ್ಣ ಹಾಗೂ ರಂಗನಾಥ್​ಗೆ ಗಂಭೀರ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನ ಮಧುಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:12 pm, Wed, 10 December 25

ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಸಂಸತ್​​ನಲ್ಲಿ ಇ-ಸಿಗರೇಟ್ ಬಳಕೆ ವಿರೋಧಿಸಿದ ಸಚಿವ ಅನುರಾಗ್ ಠಾಕೂರ್
ಸಂಸತ್​​ನಲ್ಲಿ ಇ-ಸಿಗರೇಟ್ ಬಳಕೆ ವಿರೋಧಿಸಿದ ಸಚಿವ ಅನುರಾಗ್ ಠಾಕೂರ್
‘ದಿ ಡೆವಿಲ್’ ಸಿನಿಮಾ: 15 ದಿನಗಳಿಂದ ಮನೆಗೆ ಹೋಗಿಲ್ಲ ದರ್ಶನ್ ಫ್ಯಾನ್ಸ್
‘ದಿ ಡೆವಿಲ್’ ಸಿನಿಮಾ: 15 ದಿನಗಳಿಂದ ಮನೆಗೆ ಹೋಗಿಲ್ಲ ದರ್ಶನ್ ಫ್ಯಾನ್ಸ್
ಅರ್ಷದೀಪ್ ಮೇಲೆ ಉಗ್ರರೂಪ ತಾಳಿದ ಗಂಭೀರ್; ವಿಡಿಯೋ
ಅರ್ಷದೀಪ್ ಮೇಲೆ ಉಗ್ರರೂಪ ತಾಳಿದ ಗಂಭೀರ್; ವಿಡಿಯೋ
ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ IPS:ಅಲೋಕ್ ಕುಮಾರ್ ಗತ್ತು ನೋಡಿ
ಸರ್ಕಾರದ ವಿರುದ್ಧ ತೊಡೆತಟ್ಟಿ ಗೆದ್ದ IPS:ಅಲೋಕ್ ಕುಮಾರ್ ಗತ್ತು ನೋಡಿ
Bigg Boss: ಬಿಗ್​​ಬಾಸ್ ಟಾಸ್ಕ್: ಕಾವ್ಯಾಗೆ ಇದೆಂಥ ಶಿಕ್ಷೆ?
Bigg Boss: ಬಿಗ್​​ಬಾಸ್ ಟಾಸ್ಕ್: ಕಾವ್ಯಾಗೆ ಇದೆಂಥ ಶಿಕ್ಷೆ?
ಭೀಕರ ಬೈಕ್​​ ಅಪಘಾತ: ಎದೆ ಝಲ್​​ ಎನಿಸುವಂತಿದೆ ದೃಶ್ಯ
ಭೀಕರ ಬೈಕ್​​ ಅಪಘಾತ: ಎದೆ ಝಲ್​​ ಎನಿಸುವಂತಿದೆ ದೃಶ್ಯ
ದರ್ಶನ್ ರಾಜಕೀಯಕ್ಕೆ ಬರಬೇಕಾ ಬೇಡವಾ ಅನ್ನೋದು ಫ್ಯಾನ್ಸ್ ನಿರ್ಧಾರ: ದಿನಕರ್
ದರ್ಶನ್ ರಾಜಕೀಯಕ್ಕೆ ಬರಬೇಕಾ ಬೇಡವಾ ಅನ್ನೋದು ಫ್ಯಾನ್ಸ್ ನಿರ್ಧಾರ: ದಿನಕರ್
ಹೊಸ ಲುಕ್​​ನಲ್ಲಿ ಪ್ರಧಾನಿ; ಧುರಂಧರ್ ಸ್ಟೈಲ್​ನ ಮೋದಿ ಮಾಂಟೇಜ್ ವೈರಲ್
ಹೊಸ ಲುಕ್​​ನಲ್ಲಿ ಪ್ರಧಾನಿ; ಧುರಂಧರ್ ಸ್ಟೈಲ್​ನ ಮೋದಿ ಮಾಂಟೇಜ್ ವೈರಲ್
ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಡಿಕೆ ಶಿವಕುಮಾರ್ ಆಪ್ತ
ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಡಿಕೆ ಶಿವಕುಮಾರ್ ಆಪ್ತ