ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ; ಘಟನೆ ಖಂಡಿಸಿ ನವೆಂಬರ್ 18 ರಂದು ಕೋಲಾರ ಬಂದ್
Kolar Bandh: ಇದಕ್ಕೂ ಮೊದಲು ಪ್ರತಿಭಟನೆ ಮಾಡಿ ಅರೋಪಿಗಳನ್ನು ಬಂಧಿಸುವಂತೆ ಮಾಲಾಧಾರಿಗಳು ಮನವಿ ಮಾಡಿದ್ದರು. ಸದ್ಯ 10 ಜನರನ್ನು ಬಂಧಿಸಿ ಕೋಲಾರ ನಗರ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಕೋಲಾರ: ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ ಪ್ರಕರಣ ಘಟನೆ ಖಂಡಿಸಿ ನವೆಂಬರ್ 18 ರಂದು ಕೋಲಾರ ಬಂದ್ಗೆ ಕರೆ ನೀಡಲಾಗಿದೆ. ಕೋಲಾರ ಹಿಂದೂಗಳ ಒಕ್ಕೂಟದಿಂದ ಬಂದ್ಗೆ ಕರೆ ನೀಡಲಾಗಿದೆ. ನವೆಂಬರ್ 13 ರಂದು ಬಸ್ ಮೇಲೆ ದುಷ್ಕರ್ಮಿಗಳು ಕಲ್ಲೆಸೆದಿದ್ದರು. ಕೋಲಾರದ ಕ್ಲಾಕ್ ಟವರ್ ಬಳಿ ಕಲ್ಲು ತೂರಾಟ ನಡೆದಿತ್ತು. ಈ ಘಟನೆ ಖಂಡಿಸಿ ಬಂದ್ಗೆ ಕರೆ ನೀಡಲಾಗಿದೆ. ಇದಕ್ಕೂ ಮೊದಲು ಪ್ರತಿಭಟನೆ ಮಾಡಿ ಅರೋಪಿಗಳನ್ನು ಬಂಧಿಸುವಂತೆ ಮಾಲಾಧಾರಿಗಳು ಮನವಿ ಮಾಡಿದ್ದರು. ಸದ್ಯ 10 ಜನರನ್ನು ಬಂಧಿಸಿ ಕೋಲಾರ ನಗರ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು: ನಾಪತ್ತೆಯಾಗಿದ್ದ ಬಾಲಕಿಯರಿಬ್ಬರನ್ನು ರಕ್ಷಿಸಿದ ಪೊಲೀಸರು ನಾಪತ್ತೆಯಾಗಿದ್ದ ಬಾಲಕಿಯರಿಬ್ಬರನ್ನು ಬೆಂಗಳೂರು ಪೊಲೀಸರು ರಕ್ಷಿಸಿದ್ದಾರೆ. ಬೆಂಗಳೂರಿನ ಯಶವಂತಪುರ ಠಾಣೆ ಪೊಲೀಸರಿಂದ ಬಾಲಕಿಯರು ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಬಾಲಕಿಯರ ಜೊತೆಯಲ್ಲಿದ್ದ ಇಬ್ಬರು ಯುವಕರನ್ನು ಬಂಧಿಸಲಾಗಿದೆ. ನವೆಂಬರ್ 5 ರಂದು ಸುಬೇದಾರ್ ಪಾಳ್ಯದಿಂದ ಬಾಲಕಿಯರು ತೆರಳಿದ್ದರು. ಯಶವಂತಪುರ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದರು.
ಬೆಂಗಳೂರು: ವಂಚನೆ ಆರೋಪ ಬಿಡಿಎ ಅಧಿಕಾರಿಗಳ ವಿರುದ್ಧ ಎಫ್ಐಆರ್ ಹಣಕಾಸಿನ ವಿಚಾರದಲ್ಲಿ ವಂಚನೆ ಮಾಡಿರುವ ಆರೋಪದಲ್ಲಿ ಬಿಡಿಎ ಅಧಿಕಾರಿಗಳಾದ ಮಹೇಶ್ ಕುಮಾರ್, ಶಿವರಾಜ್, ಬಿಡಿಎ ಬ್ರೋಕರ್ ಮೋಹನ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಬೆಂಗಳೂರಿನ ಆರ್.ಟಿ. ನಗರ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಹೇಮಾ ರಾಜು ನೀಡಿದ್ದ ದೂರಿನಂತೆ ಎಫ್ಐಆರ್ ದಾಖಲು ಮಾಡಲಾಗಿದೆ.
ಹಾಸನ: ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಎಸಿಬಿ ಬಲೆಗೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ 50,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಡಿಸಿ ಕಚೇರಿ ಆಪ್ತ ಶಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಭೂಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಂಜೀವ್ ಎಂಬಾತನನ್ನು ಖಾಸಗಿ ಹೋಟೆಲ್ನಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಬಂಧನ ಮಾಡಲಾಗಿದೆ. ಲಂಚ ಸ್ವೀಕರಿಸುತ್ತಿದ್ದ ಸಂಜೀವ್ ಕುಮಾರ್ ಎಸಿಬಿ ಬಲೆಗೆ ಬಿದ್ದಿದ್ದಾನೆ. ಎಸಿಬಿ ಡಿವೈಎಸ್ಪಿ ಸತೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಇದನ್ನೂ ಓದಿ: ಡಿ ಗ್ರೂಪ್ ನೌಕರರ ಸಂಘದ ಅಧ್ಯಕ್ಷನಿಂದ ಸೈಟ್ ವಂಚನೆ; ಒಂದೇ ನಿವೇಶನ ಹಲವರಿಗೆ ಮಾರಾಟ!
ಇದನ್ನೂ ಓದಿ: ಬೆಂಗಳೂರು: ಕಳ್ಳಸಾಗಣೆ ಮಾಡುತ್ತಿದ್ದ 170 ನಕ್ಷತ್ರ ಆಮೆಗಳ ರಕ್ಷಣೆ
Published On - 8:33 pm, Tue, 16 November 21