ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷ ಕಾರು ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಅಪಘಾತಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರು ಕಾರು ಅತಿವೇಗವಾಗಿ ಚಲಿಸುತ್ತಿದದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.

ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷ ಕಾರು ಅಪಘಾತ: ಓರ್ವ ಸ್ಥಳದಲ್ಲೇ ಸಾವು
ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷ ಕಾರು ಅಪಘಾತ: ಓರ್ವ ಸ್ಥಳದಲ್ಲೇ ಸಾವು
Follow us
TV9 Web
| Updated By: ಆಯೇಷಾ ಬಾನು

Updated on:Aug 17, 2022 | 6:00 PM

ಕೋಲಾರ: ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ತೆರಳುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿಯಾದ ಹಿನ್ನೆಲೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರದಿಂದ ಚಿಂತಾಮಣಿ ಮುಖ್ಯ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಪಾತಪಲ್ಲಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಪಾತಪಲ್ಲಿ ಗ್ರಾಮದ 50 ವರ್ಷದ ರಾಜಣ್ಣ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕೋಲಾರ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿರುವ ಡಾಕ್ಟರ್ ವೇಣುಗೋಪಾಲ್ ಅವರು ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಧಿಕೃತ ಅಭ್ಯರ್ಥಿ ಸಹ ಆಗಿದ್ರು. ಅಪಘಾತಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರು ಕಾರು ಅತಿವೇಗವಾಗಿ ಚಲಿಸುತ್ತಿದದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ. ಘಟನೆ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರ ಜಿಲ್ಲೆಯ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಆಂಧ್ರ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ ದಂಪತಿ ಸಾವು; 15 ಜನರಿಗೆ ಗಾಯ

ಕೋಲಾರ: ಆಂಧ್ರ ಸಾರಿಗೆ (Andhra State Transport) ಸಂಸ್ಥೆ ಬಸ್​​ ಪಲ್ಟಿಯಾಗಿ ದಂಪತಿ ಸಾವನ್ನಪ್ಪಿರುವ ಘಟನೆ ಮುಳಬಾಗಿಲು ತಾಲೂಕಿನ ವಿರುಪಾಕ್ಷಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ. ವಿಜಯವಾಡದ ಷರೀಫ್, ಮೈಮುನ್ನಿಸಾ ಮೃತ ದುರ್ದೈವಿಗಳು. ಬಸ್​​ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಆಂಧ್ರದ ಗುಂಟೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅವಘಡ ಸಂಭವಿಸಿದೆ. ಅಪಘಾತ ಬಳಿಕ ಬಸ್ ಚಾಲಕ, ಕಂಡಕ್ಟರ್ ಪರಾರಿಯಾಗಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 5:59 pm, Wed, 17 August 22