AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಬೊಲೆರೊ ಪಲ್ಟಿಯಾಗಿ ಮೂವರು ಸಾವು; 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯ

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಬೊಲೆರೊ ಪಲ್ಟಿಯಾಗಿ ಭೀಕರ ದುರಂತ ಸಂಭವಿಸಿದೆ. ಹುಣಸೆಹಣ್ಣು ಬಿಡಿಸುವ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ಆಂಧ್ರ ಮೂಲದ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಶ್ರೀನಿವಾಸಪುರ ಮತ್ತು ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಲಾರ: ಬೊಲೆರೊ ಪಲ್ಟಿಯಾಗಿ ಮೂವರು ಸಾವು; 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯ
ಪಲ್ಟಿಯಾಗಿರುವ ಬೊಲೆರೊ Image Credit source: tv9 kannada
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Feb 08, 2026 | 9:41 PM

Share

ಕೋಲಾರ, ಫೆಬ್ರವರಿ 08: ಬೊಲೆರೊ ಪಲ್ಟಿಯಾಗಿ (Bolero Overturns) ಮೂವರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ  ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಲೋನಿ ಗೇಟ್​​ ಬಳಿ ನಡೆದಿದೆ. ಆಂಧ್ರದ ಮುನಿಯಮ್ಮ, ವೆಂಕಟಪ್ಪ ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ. ಹುಣಸೆಹಣ್ಣು ಬಿಡಿಸುವ ಕೆಲಸ ಮುಗಿಸಿಕೊಂಡು ಹೋಗುವಾಗ ದುರಂತ ಸಂಭವಿಸಿದೆ. ದುರಂತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಶ್ರೀನಿವಾಸಪುರ ಮತ್ತು ಆಂಧ್ರದ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ: ಗರ್ಭಿಣಿ ಸಾವು

ಬೈಕ್​ಗೆ ಹಿಂದಿನಿಂದ ಬಂದು ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಬಾಗಲೂರು ಗ್ರಾಮದ ಗುಂಡಪ್ಪ ಕ್ರಾಸ್​ನಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ವೀರೆನಹಳ್ಳೀ ನಿವಾಸಿ ಮಾನಸಾ (29) ಭೀಕರ ಅಪಘಾತದಲ್ಲಿ ಸಾವನ್ನಪಿದ ನಾಲ್ಕು ತಿಂಗಳ ಗರ್ಭಿಣಿ.

ಇದನ್ನೂ ಓದಿ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರಸ್ತೆ ಅಪಘಾತ: ಒಂದೇ ದಿನ 8 ಜನ ಬಲಿ, ಹಲವರಿಗೆ ಗಾಯ

ಇಂದು ಬೆಳಗ್ಗೆ ಸಿಇಟಿ ಪರೀಕ್ಷೆ ಬರೆಯುವುದಕ್ಕೆ ಅಂತ ಮಾನಸಾ ಮನೆಯಿಂದ ಸ್ಕೂಟಿಯಲ್ಲಿ ಯಲಹಂಕದ ಕಡೆ ಬಾಗಲೂರು ಮೂಲಕ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಸಿಮೆಂಟ್ ಮಿಕ್ಸರ್ ಲಾರಿ, ಬೈಕ್​ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಹಾಗೆ ಮುಂದಕ್ಕೆ ಸಾಗಿದ್ದು ಚಕ್ರದ ಅಡಿಗೆ ಸಿಲುಕಿ ಮಾನಸಾ ಸಾವನ್ನಪಿದ್ದಾರೆ.

ಇದನ್ನೂ ಓದಿ: ಕೈಕೊಟ್ಟ 3 ವರ್ಷ ಪ್ರೀತಿಸಿದ ಪ್ರೇಯಸಿ: ನೊಂದ ಬಾಡಿಬಿಲ್ಡರ್​​ ತೆಗೆದುಕೊಂಡಿದ್ದು ದುಡುಕಿನ ನಿರ್ಧಾರ

ಇನ್ನು ಇತ್ತೀಚೆಗೆ ಲಾರಿ ಚಾಲಕರ ಅತಿವೇಗ, ಅಜಾಗರೂಕತೆಯಿಂದ ಈ ರೀತಿ ಅಪಘಾತಗಳು ಸಂಭವಿಸುತ್ತಿದ್ದು ಯಮಸ್ವರೂಪಿ ಲಾರಿಗಳಿಗೆ ಬ್ರೇಕ್ ಹಾಕುವಂತೆ ಸ್ಥಳಿಯರು ಒತ್ತಾಯಿಸಿದ್ದಾರೆ. ಈ ಕುರಿತು ಚಿಕ್ಕಜಾಲ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಲಾರಿ ಸಮೇತ ಚಾಲಕನನ್ನ ವಶಕ್ಕೆ ಪಡೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:31 pm, Sun, 8 February 26

ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​