
ಕೋಲಾರ, ಫೆಬ್ರವರಿ 08: ಬೊಲೆರೊ ಪಲ್ಟಿಯಾಗಿ (Bolero Overturns) ಮೂವರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಲೋನಿ ಗೇಟ್ ಬಳಿ ನಡೆದಿದೆ. ಆಂಧ್ರದ ಮುನಿಯಮ್ಮ, ವೆಂಕಟಪ್ಪ ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ. ಹುಣಸೆಹಣ್ಣು ಬಿಡಿಸುವ ಕೆಲಸ ಮುಗಿಸಿಕೊಂಡು ಹೋಗುವಾಗ ದುರಂತ ಸಂಭವಿಸಿದೆ. ದುರಂತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಶ್ರೀನಿವಾಸಪುರ ಮತ್ತು ಆಂಧ್ರದ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ಗೆ ಹಿಂದಿನಿಂದ ಬಂದು ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಬಾಗಲೂರು ಗ್ರಾಮದ ಗುಂಡಪ್ಪ ಕ್ರಾಸ್ನಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ವೀರೆನಹಳ್ಳೀ ನಿವಾಸಿ ಮಾನಸಾ (29) ಭೀಕರ ಅಪಘಾತದಲ್ಲಿ ಸಾವನ್ನಪಿದ ನಾಲ್ಕು ತಿಂಗಳ ಗರ್ಭಿಣಿ.
ಇದನ್ನೂ ಓದಿ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರಸ್ತೆ ಅಪಘಾತ: ಒಂದೇ ದಿನ 8 ಜನ ಬಲಿ, ಹಲವರಿಗೆ ಗಾಯ
ಇಂದು ಬೆಳಗ್ಗೆ ಸಿಇಟಿ ಪರೀಕ್ಷೆ ಬರೆಯುವುದಕ್ಕೆ ಅಂತ ಮಾನಸಾ ಮನೆಯಿಂದ ಸ್ಕೂಟಿಯಲ್ಲಿ ಯಲಹಂಕದ ಕಡೆ ಬಾಗಲೂರು ಮೂಲಕ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಸಿಮೆಂಟ್ ಮಿಕ್ಸರ್ ಲಾರಿ, ಬೈಕ್ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಹಾಗೆ ಮುಂದಕ್ಕೆ ಸಾಗಿದ್ದು ಚಕ್ರದ ಅಡಿಗೆ ಸಿಲುಕಿ ಮಾನಸಾ ಸಾವನ್ನಪಿದ್ದಾರೆ.
ಇದನ್ನೂ ಓದಿ: ಕೈಕೊಟ್ಟ 3 ವರ್ಷ ಪ್ರೀತಿಸಿದ ಪ್ರೇಯಸಿ: ನೊಂದ ಬಾಡಿಬಿಲ್ಡರ್ ತೆಗೆದುಕೊಂಡಿದ್ದು ದುಡುಕಿನ ನಿರ್ಧಾರ
ಇನ್ನು ಇತ್ತೀಚೆಗೆ ಲಾರಿ ಚಾಲಕರ ಅತಿವೇಗ, ಅಜಾಗರೂಕತೆಯಿಂದ ಈ ರೀತಿ ಅಪಘಾತಗಳು ಸಂಭವಿಸುತ್ತಿದ್ದು ಯಮಸ್ವರೂಪಿ ಲಾರಿಗಳಿಗೆ ಬ್ರೇಕ್ ಹಾಕುವಂತೆ ಸ್ಥಳಿಯರು ಒತ್ತಾಯಿಸಿದ್ದಾರೆ. ಈ ಕುರಿತು ಚಿಕ್ಕಜಾಲ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಲಾರಿ ಸಮೇತ ಚಾಲಕನನ್ನ ವಶಕ್ಕೆ ಪಡೆದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:31 pm, Sun, 8 February 26