AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಆರೋಪ: ಕೋಲಾರದ ಬಾಲಕ ಅರೆಸ್ಟ್​

ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದ್ಯಾವರಹಳ್ಳಿ ಗ್ರಾಮದ ಬಾಲಕನನ್ನು ಆಂತರಿಕ ಭದ್ರತಾ ಮತ್ತು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಬಾಲಕನು ಉಗ್ರವಾದಿ ಸಂಘಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪದೇ ಪದೇ ಹುಡುಕಾಟ ನಡೆಸುತ್ತಿದ್ದನೆಂದು ತಿಳಿದುಬಂದಿದೆ. ಅವನನ್ನು ವಿಚಾರಣೆ ನಡೆಸಿದ ನಂತರ ಬೇತಮಂಗಲ ಪೊಲೀಸರಿಗೆ ಒಪ್ಪಿಸಲಾಗಿದೆ ಮತ್ತು ದೇಶದ್ರೋಹದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಆರೋಪ: ಕೋಲಾರದ ಬಾಲಕ ಅರೆಸ್ಟ್​
ಬೇತಮಂಗಲ ಪೊಲೀಸ್ ಠಾಣೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ವಿವೇಕ ಬಿರಾದಾರ|

Updated on:Jul 26, 2025 | 7:10 PM

Share

ಕೋಲಾರ, ಜುಲೈ 26: ದೇಶ ವಿರೋಧಿ (Anti National) ಚಟುವಟಿಕೆಗಳಲ್ಲಿ ತೊಡಗಿದ ಹಾಗೂ ಉಗ್ರವಾದಿ ಸಂಘಟನೆಗಳ (Terrorist Organization) ಕುರಿತು ಪೋಸ್ಟ್​ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಆರೋಪದಡಿ ಕೆಜಿಎಫ್ (KGF) ತಾಲೂಕಿನ ದ್ಯಾವರಹಳ್ಳಿ ಗ್ರಾಮದ ಓರ್ವ ಬಾಲಕನನ್ನು ಆಂತರಿಕ ಭದ್ರತಾ ಅಧಿಕಾರಿಗಳು ಮತ್ತು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕು ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬಾಲಕ ಉಗ್ರಗಾಮಿ ಸಂಘಟನೆಗೆ ಸಂಬಂಧಿಸಿದಂತೆ ಕೆಲವೊಂದು ಪೋಸ್ಟ್​ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದನು. ಅಲ್ಲದೆ, ಪದೇ ಪದೇ ಉಗ್ರಗಾಮಿ ಸಂಘಟನೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹುಡುಕಾಡುತ್ತಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇಡೀ ದಿನ ಆತನನ್ನು ವಿಚಾರಣೆ ನಡೆಸಿ, ನಂತರ ಆತನನ್ನು ಬೇತಮಂಗಲ ಪೊಲೀಸರ ವಶಕ್ಕೆ ನೀಡಿದರು.

ಬಾಲಕ ಮೂಲತಃ ಆಂದ್ರ ಪ್ರದೇಶದ ಮುಸ್ಲಿಂ ಕುಟುಂಬಕ್ಕೆ ಸೇರಿದವನು. ಬಾಲಕನ ಕುಟುಂಬ ಹಲವು ವರ್ಷಗಳ ಹಿಂದೆ ಆಂದ್ರ ಪ್ರದೇಶದ ರಾಮಕುಪ್ಪಂ ತೊರೆದು ಕೋಲಾರ ಜಿಲ್ಲೆಯ ಕೆಜಿಎಫ್​ ತಾಲೂಕಿನ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ದ್ಯಾವರಹಳ್ಳಿ ಗ್ರಾಮದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ
Image
ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ ತನಿಖೆ ಚುರುಕು: ಆರೋಪಿಗಳು NIA ವಶಕ್ಕೆ
Image
ಭಯೋತ್ಪಾದನೆ ವಿರುದ್ಧ ಸಮರ, ಕಾಶ್ಮೀರದಲ್ಲಿ 32 ಕಡೆ ಎನ್​ಐಎ ದಾಳಿ
Image
ಪ್ರವೀಣ್ ನೆಟ್ಟಾರು ಹತ್ಯೆ: ಆರೋಪಿಗಳ ಸಹಚರರ ಸ್ಥಳಗಳ ಮೇಲೆ NIA ದಾಳಿ
Image
ಹನಿಟ್ರ್ಯಾಪ್ ಮಾಡಿ ಯುವಕರನ್ನ ಐಸಿಸ್​ಗೆ ಸೇರಿಸಿದ್ದ ದೀಪ್ತಿ ಮಾರ್ಲ, ವಿಚಾರಣೆ ವೇಳೆ ಸ್ಫೋಟಕ ರಹಸ್ಯ ಬಯಲು

ಇದನ್ನೂ ಓದಿ: ಬೆಂಗಳೂರು, ಕೋಲಾರದಲ್ಲಿ NIA ದಾಳಿ: ಒಟ್ಟು ಮೂವರು ಶಂಕಿತ ಉಗ್ರರ ಬಂಧನ..!

ಬಾಲಕ ಮೇಡಹಳ್ಳಿ ಬಳಿ ಚಿಕನ್​ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಈತನ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದ ಆತಂಕರಿ ಭದ್ರತಾ ಅಧಿಕಾರಿಗಳು ಹಾಗೂ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸದ್ಯ ಬಾಲಕನ ವಿರುದ್ಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ದೇಶದ್ರೋಹ ಹಾಗೂ ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಆರೋಪಿ ಬಾಲಕನ್ನು ಪೊಲೀಸರು ಬಂಧಿಸಿ ಕೆಜಿಎಫ್​ ಬಾಲ ಮಂದಿರದಲ್ಲಿ ಇರಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:09 pm, Sat, 26 July 25