AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ–ಚಿಕ್ಕಬಳ್ಳಾಪುರ ಶಾಸಕರ ಪ್ರತ್ಯೇಕ ಸಭೆ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ, ಮುಂದಿನ ನಡೆ ಬಗ್ಗೆ ಚರ್ಚೆ

ಸಚಿವ ಸಂಪುಟ ವಿಸ್ತರಣೆಯಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕರ ಪ್ರತ್ಯೇಕ ಸಭೆ ನಡೆಯಲಿದೆ. ಸಾಮೂಹಿಕ ರಾಜೀನಾಮೆ ಅಥವಾ ಹೈಕಮಾಂಡ್ ಮನವೊಲಿಕೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದ್ದು, ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋಲಾರ–ಚಿಕ್ಕಬಳ್ಳಾಪುರ ಶಾಸಕರ ಪ್ರತ್ಯೇಕ ಸಭೆ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ, ಮುಂದಿನ ನಡೆ ಬಗ್ಗೆ ಚರ್ಚೆ
ನಾರಾಯಣಸ್ವಾಮಿImage Credit source: tv9
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Aug 04, 2026 | 8:21 AM

Share

ಮುಖ್ಯಾಂಶಗಳು

  • ಕೋಲಾರ ಚಿಕ್ಕಬಳ್ಳಾಪುರ ಶಾಸಕರ ಪ್ರತ್ಯೇಕ ಸಭೆ
  • ಸಚಿವ ಸ್ಥಾನ ಸಿಗದೆ ಶಾಸಕರಲ್ಲಿ ಅಸಮಾಧಾನ
  • ಸಾಮೂಹಿಕ ರಾಜೀನಾಮೆ ಕುರಿತು ಚರ್ಚೆ ಸಾಧ್ಯತೆ

ಕೋಲಾರ, ಆಗಸ್ಟ್ 4: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ (Karnataka Cabinet Expansion) ಕೋಲಾರ (Kolar) ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಯಾವುದೇ ಶಾಸಕರಿಗೂ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಬೆಂಗಳೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿ, ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಲು ಮುಂದಾಗಿದ್ದಾರೆ. ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಮಾಲೂರು ಶಾಸಕ ಕೆ.ವೈ. ನಂಜೇಗೌಡ, ಚಿಂತಾಮಣಿ ಶಾಸಕ ಎಂ.ಸಿ. ಸುಧಾಕರ್, ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಸೇರಿದಂತೆ ಏಳು ಶಾಸಕರು ಭಾಗವಹಿಸುವ ಸಾಧ್ಯತೆ ಇದೆ. ವಿಧಾನಪರಿಷತ್ ಸದಸ್ಯರಾದ ಎಂ.ಎಲ್. ಅನಿಲ್ ಕುಮಾರ್ ಹಾಗೂ ನಜೀರ್ ಅಹಮದ್ ಬಾಗಿ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ಕೆಜಿಎಫ್ ಶಾಸಕಿ ರೂಪಕಲಾ ಅವರು ಸಭೆಯಿಂದ ದೂರ ಉಳಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಎರಡು ಜಿಲ್ಲೆಗಳ ಏಳು ಶಾಸಕರ ಪೈಕಿ ಯಾರಿಗೂ ಸಚಿವ ಸ್ಥಾನ ಸಿಗದಿರುವ ಹಿನ್ನೆಲೆಯಲ್ಲಿ, ಪಕ್ಷದೊಳಗೆ ತಮ್ಮ ಮುಂದಿನ ನಡೆ ಏನಾಗಬೇಕು ಎಂಬುದರ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ

ಕಾಂಗ್ರೆಸ್ ಹೈಕಮಾಂಡ್ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಕಡೆಗಣಿಸಿದೆ ಎಂಬ ಅಸಮಾಧಾನ ಶಾಸಕರಲ್ಲಿ ವ್ಯಕ್ತವಾಗಿದೆ. ಸರ್ಕಾರದ ಮೊದಲ ಅವಧಿಯಲ್ಲಿ ಚಿಂತಾಮಣಿ ಶಾಸಕ ಎಂ.ಸಿ. ಸುಧಾಕರ್ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಎರಡನೇ ಅವಧಿಯಲ್ಲಿ ಕೋಲಾರ ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಸಚಿವ ಸ್ಥಾನ ನೀಡುವ ಭರವಸೆ ಇತ್ತು ಎನ್ನಲಾಗಿತ್ತು. ಆದರೆ ಸಂಪುಟ ವಿಸ್ತರಣೆಯಲ್ಲಿ ಎರಡೂ ಜಿಲ್ಲೆಗಳಿಂದ ಯಾರಿಗೂ ಸ್ಥಾನ ಸಿಗದಿರುವುದು ಶಾಸಕರಿಗೆ ನಿರಾಸೆ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ ಸಾಮೂಹಿಕ ರಾಜೀನಾಮೆ ನೀಡಬೇಕೇ ಅಥವಾ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಚಿವ ಸ್ಥಾನ ನೀಡುವಂತೆ ಮನವೊಲಿಸಬೇಕೇ ಎಂಬ ವಿಚಾರವೂ ಸಭೆಯಲ್ಲಿ ಚರ್ಚೆಗೆ ಬರಲಿದೆ ಎನ್ನಲಾಗಿದೆ.

ಕೆ.ಎಚ್. ಮುನಿಯಪ್ಪ ವಿರುದ್ಧ ನಾರಾಯಣಸ್ವಾಮಿ ಆರೋಪ

ಸಚಿವ ಸ್ಥಾನ ಕೈತಪ್ಪಲು ಸಚಿವ ಕೆ.ಎಚ್. ಮುನಿಯಪ್ಪ ಅವರೇ ಕಾರಣ ಎಂಬ ಗಂಭೀರ ಆರೋಪವನ್ನು ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮಾಡಿದ್ದಾರೆ. ಕೊನೆಯ ಕ್ಷಣದವರೆಗೂ ತಮಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು ಎಂದು ಹೇಳಿರುವ ಅವರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಆಯ್ಕೆಯಾಗಿರುವ ಏಕೈಕ ಬಲಗೈ ಸಮುದಾಯದ ಶಾಸಕ ತಾವು ಎಂದು ಉಲ್ಲೇಖಿಸಿದ್ದಾರೆ.

ಸತತವಾಗಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿತ್ತು. ಆದರೆ ತಮ್ಮ ನಿರೀಕ್ಷೆ ಹುಸಿಯಾಗಿದೆ ಎಂದು ನಾರಾಯಣಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ರಾಜೀನಾಮೆ ಎಚ್ಚರಿಕೆ, ಬೆಂಬಲಿಗರ ಪ್ರತಿಭಟನೆ

ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಮೋಸ ಮಾಡಿದ್ದಾರೆ ಎಂದು ನಾರಾಯಣಸ್ವಾಮಿ ನೇರ ಆರೋಪ ಮಾಡಿದ್ದು, ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನೊಳಗಿನ ಅಸಮಾಧಾನ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು