AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಬೆನ್ನಿಗೆ ಚೂರಿ ಹಾಕಿದ್ರು: ಸಚಿವ ಕೆ.ಎಚ್. ಮುನಿಯಪ್ಪ ವಿರುದ್ಧ ಕಿಡಿಕಾರಿದ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ

ಕೋಲಾರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಮ್ಮ ಬೆನ್ನಿಗೆ ಚೂರಿ ಹಾಕಿದ್ದಾರೆಂದು ನೇರ ಆರೋಪಿಸಿದ್ದಾರೆ. ಸಿಎಂ ಕಾರ್ಯಕ್ರಮದಲ್ಲಿ ಮುನಿಯಪ್ಪ ಅವರನ್ನು ಅತಿಯಾಗಿ ಹೊಗಳಿದ್ದಕ್ಕೆ ನಾರಾಯಣಸ್ವಾಮಿ ಬೇಸರಗೊಂಡಿದ್ದಾರೆ. ಬಲಗೈ ಸಮುದಾಯದ ಮತಗಳ ಮಹತ್ವದ ಬಗ್ಗೆಯೂ ಪ್ರಶ್ನಿಸಿದ್ದು, ಮುಂದಿನ ನಡೆ ಕುತೂಹಲ ಮೂಡಿಸಿದೆ.

ನನ್ನ ಬೆನ್ನಿಗೆ ಚೂರಿ ಹಾಕಿದ್ರು: ಸಚಿವ ಕೆ.ಎಚ್. ಮುನಿಯಪ್ಪ ವಿರುದ್ಧ ಕಿಡಿಕಾರಿದ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ
ಸಾಂದರ್ಭಿಕ ಚಿತ್ರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Aug 11, 2026 | 5:28 PM

Share

ಕೋಲಾರ, ಆ.11: ಸಚಿವ ಸ್ಥಾನ ಕೈತಪ್ಪಿದ ವಿಚಾರವಾಗಿ ಬಂಗಾರಪೇಟೆ ಕ್ಷೇತ್ರದ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರು ಮತ್ತೊಮ್ಮೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋಲಾರದಲ್ಲಿ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ನಾರಾಯಣಸ್ವಾಮಿ, “ಮುನಿಯಪ್ಪ ನಮ್ಮ ಬೆನ್ನಿಗೆ ಚೂರಿ ಹಾಕಿದ್ದಾರೆ” ಎಂದು ನೇರ ಆರೋಪ ಮಾಡಿದ್ದಾರೆ.

ನಿನ್ನೆ ನಡೆದ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ತಾನು ಗೈರು ಹಾಜರಾಗಿದ್ದರ ಬಗ್ಗೆ ಸ್ಪಷ್ಟನೆ ನೀಡಿರುವ ನಾರಾಯಣಸ್ವಾಮಿ, “ನಾನು ಸಿಎಂ ಕಾರ್ಯಕ್ರಮದಲ್ಲಿ ಗರಂ ಆಗಿರಲಿಲ್ಲ. ಆದರೆ, ನನ್ನ ಬೆನ್ನಿಗೆ ಚೂರಿ ಹಾಕಿದ ಸಚಿವ ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳು ನಿನ್ನೆ ಅತಿಯಾಗಿ ಹೊಗಳಿದರು. ಜಿಲ್ಲೆಯ ಪ್ರಮುಖ ನಾಯಕ, 7 ಬಾರಿ ಗೆದ್ದಿದ್ದಾರೆ ಎಂದು ಮುನಿಯಪ್ಪನವರನ್ನು ಹೊಗಳಿದ್ದು ನನಗೆ ನೋವು ತಂದಿದೆ,” ಎಂದು ಅಸಮಾಧಾನ ಹೊರಹಾಕಿದ್ದಾರೆ.

ಬಲಗೈ ಸಮುದಾಯದ ಮತ ಇಲ್ಲದಿದ್ದರೆ ನೀವು ಗೆಲ್ಲುತ್ತಿದ್ರಾ?

ಸಚಿವ ಮುನಿಯಪ್ಪ ಅವರ ರಾಜಕೀಯ ವರ್ಚಸ್ಸಿನ ಬಗ್ಗೆ ಪ್ರಶ್ನಿಸಿರುವ ನಾರಾಯಣಸ್ವಾಮಿ, “ಬಲಗೈ ಸಮುದಾಯ ಮತ ಹಾಕಿಲ್ಲ ಅಂದ್ರೆ ನೀವು ಎಲ್ಲಿ ಗೆಲ್ಲುತ್ತಿದ್ರಿ ಸ್ವಾಮಿ? 2019ರಲ್ಲಿ ಬಲಗೈ ಸಮುದಾಯದವರು ಸ್ವಲ್ಪ ಮುನಿಸಿಕೊಂಡಿದಕ್ಕೆ ನೀವು ಸೋತಿದ್ದನ್ನು ಮರೆತಿದ್ದೀರಾ?” ಎಂದು ಪ್ರಶ್ನಿಸಿದ್ದಾರೆ. ಜಿಲ್ಲೆಯಲ್ಲಿ ಬಲಗೈ ಸಮುದಾಯದ ಮತಗಳನ್ನು ಪಡೆದು, ನಂತರ ಅವರನ್ನು ಪರಿಗಣನೆಗೆ ತೆಗೆದುಕೊಳ್ಳದಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಜಿಲ್ಲೆಯಲ್ಲಿ ನಾನು ಮಾತ್ರ ಇರಬೇಕು, ಬೇರೆ ಯಾರೂ ಗೆಲ್ಲಬಾರದು ಎಂಬುದು ಅವರ (ಮುನಿಯಪ್ಪ) ಉದ್ದೇಶ. ಅವರು ಸಂಸದರಾಗಿದ್ದಾಗಲೂ ಇದೇ ಪ್ರಯತ್ನ ಮಾಡಿದ್ದರು. ಅವರು ಎಲ್ಲೆಲ್ಲಿ ಯಾರ್ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬುದು ಇಡೀ ಜಿಲ್ಲೆಗೆ ಜಗಜ್ಜಾಹೀರಾಗಿದೆ,” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ನೂತನ ಸಚಿವರ ಖಾತೆ ಕ್ಯಾತೆಗೆ ತೆರೆ ಎಳೆದ ಡಿಕೆ ಶಿವಕುಮಾರ್, ಯಾರಿಗೆ ಯಾವ ಇಲಾಖೆ?

ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಮಾತನಾಡಿರುವ ಶಾಸಕರು, “ನನ್ನ ಅಸಮಾಧಾನದ ಬಗ್ಗೆ ಇನ್ನೂ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಆಗಿಲ್ಲ. ಆ ಚರ್ಚೆ ನಡೆಯುವವರೆಗೂ ನಾನು ಅಂತರ ಕಾಯ್ದುಕೊಳ್ಳುತ್ತೇನೆ. ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಹಾಗೂ ಕುಣಿಗಲ್ ಶಾಸಕ ಹೆಚ್.ಡಿ. ರಂಗನಾಥ್ ನನ್ನ ಜೊತೆ ಮಾತನಾಡಿದ್ದಾರೆ. ಸಿಎಂ ಜೊತೆ ಒನ್-ಟು-ಒನ್ ಮಾತನಾಡಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ನಾವಿನ್ನೂ ಕತ್ತಲಲ್ಲಿದ್ದೇವೆ, ಬೆಳಕು ಬರುವವರೆಗೂ ಕಾಯುತ್ತೇವೆ,” ಎಂದು ತಿಳಿಸಿದ್ದಾರೆ. ಒಟ್ಟಾರೆಯಾಗಿ, ಕೋಲಾರ ಕಾಂಗ್ರೆಸ್ ರಾಜಕೀಯದಲ್ಲಿನ ಈ ಆಂತರಿಕ ಕಚ್ಚಾಟ, ಮುಂಬರುವ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:33 pm, Tue, 11 August 26

Follow Us
ಮಂಗಳ ಮಿಲನ್ ಸಭೆಯಲ್ಲಿ ತ್ರಿವರ್ಣ ಧ್ವಜ ಬೀಸುತ್ತಾ ಪ್ರಧಾನಿ ಮೋದಿಗೆ ಸ್ವಾಗತ
ಮಂಗಳ ಮಿಲನ್ ಸಭೆಯಲ್ಲಿ ತ್ರಿವರ್ಣ ಧ್ವಜ ಬೀಸುತ್ತಾ ಪ್ರಧಾನಿ ಮೋದಿಗೆ ಸ್ವಾಗತ
ನೂತನ ಸಚಿವರ ಖಾತೆ ಕ್ಯಾತೆಗೆ ತೆರೆ ಎಳೆದ ಡಿಕೆ ಶಿವಕುಮಾರ್
ನೂತನ ಸಚಿವರ ಖಾತೆ ಕ್ಯಾತೆಗೆ ತೆರೆ ಎಳೆದ ಡಿಕೆ ಶಿವಕುಮಾರ್
ಕಾವೇರಿ ನೀರು ವಿವಾದ: ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರದ ತೀರ್ಮಾನ
ಕಾವೇರಿ ನೀರು ವಿವಾದ: ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರದ ತೀರ್ಮಾನ
ಮೈಸೂರಿನಲ್ಲಿ ಛಿದ್ರವಾಯ್ತಾ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ?
ಮೈಸೂರಿನಲ್ಲಿ ಛಿದ್ರವಾಯ್ತಾ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ?
ಬರ ವೀಕ್ಷಣೆ ವೇಳೆ ಅಧಿಕಾರಿಗಳಿಗೆ ಡಿಸಿಎಂ‌ ಪರಮೇಶ್ವರ್ ಕ್ಲಾಸ್!
ಬರ ವೀಕ್ಷಣೆ ವೇಳೆ ಅಧಿಕಾರಿಗಳಿಗೆ ಡಿಸಿಎಂ‌ ಪರಮೇಶ್ವರ್ ಕ್ಲಾಸ್!
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು