AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಕೃಷಿ ಹೊಂಡದಲ್ಲಿ ಬಿದ್ದು ತಾಯಿ-ಮಗು ದುರ್ಮರಣ

ಕೃಷಿ ಹೊಂಡದಲ್ಲಿ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ತಾಯಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮತ್ತೊಂದು ಘಟನೆಯಲ್ಲಿ, ವಿದ್ಯುತ್ ಸ್ಪರ್ಶದಿಂದ 17 ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಘಟನೆಗಳ ಬಗ್ಗೆ ಕೋಲಾರ ಗ್ರಾಮಾಂತರ ಹಾಗೂ ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರತ್ಯೇಕ ಪ್ರಕರನಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕೋಲಾರ: ಕೃಷಿ ಹೊಂಡದಲ್ಲಿ ಬಿದ್ದು ತಾಯಿ-ಮಗು ದುರ್ಮರಣ
ಕೃಷಿ ಹೊಂಡದಲ್ಲಿ ಬಿದ್ದು ತಾಯಿ-ಮಗು ದುರ್ಮರಣ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 02, 2025 | 12:18 PM

Share

ಕೋಲಾರ, ನವೆಂಬರ್ 2: ಕೋಲಾರ (Kolar) ತಾಲ್ಲೂಕಿನ ಹೊಗರಿಗೊಲ್ಲಹಳ್ಳಿ ಗ್ರಾಮದಲ್ಲಿ ತಾಯಿ–ಮಗುವಿನ (Mother and Son Death) ದಾರುಣ ಮರಣ ಘಟನೆಯೊಂದು ಸಂಭವಿಸಿದೆ. ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದ ತನ್ನ ಮಗುವನ್ನು ಕಾಪಾಡಲು ಹೋಗಿ ತಾಯಿಯೂ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗನನ್ನು ಉಳಿಸಲು ಹೋಗಿ ತಾಯಿಯ ಸಾವು

ಮಾಲಾ (30) ಹಾಗೂ ಆಕೆಯ ಮಗ ಚಕ್ರವರ್ತಿ (6) ಕೃಷಿ ಹೊಂಡದಲ್ಲಿ ಬಿದ್ದು ಪ್ರಾಣ ಕಳೆದುಕೊಂಡ ದುರ್ದೈವಿಗಳು. ತಾಯಿ ಜಾನುವಾರುಗಳಿಗೆ ಮೇವು ತರಲು ಹೊಲಕ್ಕೆ ತೆರಳಿದ್ದರು. ಜೊತೆಗೆ ಮಗ  ಚಕ್ರವರ್ತಿಯನ್ನೂ ಕರೆದೊಯ್ದಿದ್ದರು. ಈ  ವೇಳೆ  ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮೊದಲು ಕಾಲು ಜಾರಿ ಮಗ ಚಕ್ರವರ್ತಿ ಹೊಂಡದಲ್ಲಿ ಬಿದ್ದಿದ್ದು, ಮಗನನ್ನು ರಕ್ಷಿಸಲು ಧಾವಿಸಿದ ತಾಯಿ ಮಾಲಾ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳೀಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ವಿಫಲರಾಗಿದ್ದಾರೆ. ಈ ಬಗ್ಗೆ  ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ ಕೋಲಾರ: ನಾಪತ್ತೆಯಾಗಿದ್ದ ಶಿಕ್ಷಕಿ ಕೆರೆಯಲ್ಲಿ ಶವವಾಗಿ ಪತ್ತೆ; ಗಣತಿ ಒತ್ತಡದಿಂದ ಆತ್ಮಹತ್ಯೆ ಶಂಕೆ?

ವಿದ್ಯುತ್​ ಪ್ರವಹಿಸಿ ಬಾಲಕನ ದುರ್ಮರಣ

ಕೋಲಾರ ತಾಲೂಕಿನ ದೊಡ್ಡವಲ್ಲಭಿ ಗ್ರಾಮದಲ್ಲಿ 17  ವಿದ್ಯಾರ್ಥಿ ವಿದ್ಯುತ್ ಸ್ಪರ್ಶದಿಂದ ಮೃತ ಪಟ್ಟಿದ್ದಾನೆ. ಮೃತಪಟ್ಟ ಬಾಲಕನನ್ನು ದಿಲೀಪ್ ಎಂದು ಗುರುತಿಸಲಾಗಿದ್ದು, ಆತ  ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನೆಂದು ತಿಳಿದು ಬಂದಿದೆ.  ಭಾನುವಾರ ಬೆಳಗ್ಗೆ ತೋಟಕ್ಕೆ ನೀರು ಹಾಯಿಸಲು ದಿಲೀಪ್ ಮೋಟಾರ್ ಸ್ವಿಚ್ ಆನ್ ಮಾಡಲು ತೆರಳಿದ್ದನು. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಯನ್ನು ಸ್ಪರ್ಷಿಸಿದ್ದು, ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ