
ಕೋಲಾರ, ನವೆಂಬರ್ 2: ಕೋಲಾರ (Kolar) ತಾಲ್ಲೂಕಿನ ಹೊಗರಿಗೊಲ್ಲಹಳ್ಳಿ ಗ್ರಾಮದಲ್ಲಿ ತಾಯಿ–ಮಗುವಿನ (Mother and Son Death) ದಾರುಣ ಮರಣ ಘಟನೆಯೊಂದು ಸಂಭವಿಸಿದೆ. ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದ ತನ್ನ ಮಗುವನ್ನು ಕಾಪಾಡಲು ಹೋಗಿ ತಾಯಿಯೂ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಲಾ (30) ಹಾಗೂ ಆಕೆಯ ಮಗ ಚಕ್ರವರ್ತಿ (6) ಕೃಷಿ ಹೊಂಡದಲ್ಲಿ ಬಿದ್ದು ಪ್ರಾಣ ಕಳೆದುಕೊಂಡ ದುರ್ದೈವಿಗಳು. ತಾಯಿ ಜಾನುವಾರುಗಳಿಗೆ ಮೇವು ತರಲು ಹೊಲಕ್ಕೆ ತೆರಳಿದ್ದರು. ಜೊತೆಗೆ ಮಗ ಚಕ್ರವರ್ತಿಯನ್ನೂ ಕರೆದೊಯ್ದಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮೊದಲು ಕಾಲು ಜಾರಿ ಮಗ ಚಕ್ರವರ್ತಿ ಹೊಂಡದಲ್ಲಿ ಬಿದ್ದಿದ್ದು, ಮಗನನ್ನು ರಕ್ಷಿಸಲು ಧಾವಿಸಿದ ತಾಯಿ ಮಾಲಾ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳೀಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ವಿಫಲರಾಗಿದ್ದಾರೆ. ಈ ಬಗ್ಗೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ಕೋಲಾರ: ನಾಪತ್ತೆಯಾಗಿದ್ದ ಶಿಕ್ಷಕಿ ಕೆರೆಯಲ್ಲಿ ಶವವಾಗಿ ಪತ್ತೆ; ಗಣತಿ ಒತ್ತಡದಿಂದ ಆತ್ಮಹತ್ಯೆ ಶಂಕೆ?
ಕೋಲಾರ ತಾಲೂಕಿನ ದೊಡ್ಡವಲ್ಲಭಿ ಗ್ರಾಮದಲ್ಲಿ 17 ವಿದ್ಯಾರ್ಥಿ ವಿದ್ಯುತ್ ಸ್ಪರ್ಶದಿಂದ ಮೃತ ಪಟ್ಟಿದ್ದಾನೆ. ಮೃತಪಟ್ಟ ಬಾಲಕನನ್ನು ದಿಲೀಪ್ ಎಂದು ಗುರುತಿಸಲಾಗಿದ್ದು, ಆತ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನೆಂದು ತಿಳಿದು ಬಂದಿದೆ. ಭಾನುವಾರ ಬೆಳಗ್ಗೆ ತೋಟಕ್ಕೆ ನೀರು ಹಾಯಿಸಲು ದಿಲೀಪ್ ಮೋಟಾರ್ ಸ್ವಿಚ್ ಆನ್ ಮಾಡಲು ತೆರಳಿದ್ದನು. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಯನ್ನು ಸ್ಪರ್ಷಿಸಿದ್ದು, ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.