
ಕೋಲಾರ, ಮಾರ್ಚ್ 01: ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಯಲ್ಲಿ 201ಕ್ಕೂ ಹೆಚ್ಚು ಇರಾನಿಯನ್ನರು ಸಾವನ್ನಪ್ಪಿದ್ದಾರೆ. ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮನೈ ಕೂಡ ಹತ್ಯೆವಾಗಿದ್ದಾರೆ. ಮಧ್ಯ ಪ್ರಾಚ್ಯ ದೇಶಗಳಲ್ಲಿ (Middle East Conflict) ಯುದ್ಧದ ವಾತಾವರಣ ಹಿನ್ನೆಲೆ ಹೊರದೇಶಗಳಲ್ಲಿ ಸಿಲುಕಿರುವವರ ರಕ್ಷಣೆಗೆ ಸಹಾಯವಾಣಿ ಪ್ರಕಟಿಸಲಾಗಿದೆ. ಈ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾಹಿತಿ ನೀಡಿದ್ದಾರೆ.
ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧದ ವಾತಾವರಣ ಹಿನ್ನೆಲೆ ಎಲ್ಲೆಡೆ ವಿಮಾನ ಹಾರಾಟ ರದ್ದು ಮಾಡಲಾಗಿದೆ. ಪರಿಣಾಮ ದುಬೈ ಸೇರಿದಂತೆ ಹಲವೆಡೆ ಕನ್ನಡಿಗರು ಸೇರಿದಂತೆ ಭಾರತೀಯರು ಸಿಲುಕಿಕೊಂಡಿದ್ದಾರೆ. ಹಾಗಾಗಿ ಹೊರದೇಶಗಳಲ್ಲಿ ಸಿಲುಕಿರುವವರ ರಕ್ಷಣೆಗೆ ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧದ ವಾತಾವರಣ ಹಿನ್ನೆಲೆ ಹೊರದೇಶಗಳಲ್ಲಿ ಸಿಲುಕಿರುವವರ ರಕ್ಷಣೆಗೆ ಸಹಾಯವಾಣಿ ಪ್ರಕಟಿಸಲಾಗಿದೆ. ಈ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾಹಿತಿ ನೀಡಿದ್ದಾರೆ. ಕೋಲಾರ ಜಿಲ್ಲಾಡಳಿತ ಸಹಾಯವಾಣಿ ಪ್ರಕಟಿಸಿದೆ.
ಇನ್ನು ಕೋಲಾರ ಜಿಲ್ಲೆಯಲ್ಲೂ ವಿಪತ್ತು ನಿರ್ವಹಣಾ ಕೇಂದ್ರ ಆರಂಭಿಸಲಾಗಿದ್ದು, 9740050061 ಅಥವಾ 9606241449 ನಂಬರ್ಗೆ ಕರೆ ಮಾಡಬಹುದು ಎಂದು ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಮಾಹಿತಿ ನೀಡಿದ್ದಾರೆ.
ಯುದ್ಧದ ಕಾರ್ಮೋಡ ಹಿನ್ನೆಲೆ ದುಬೈನಲ್ಲಿ ಬಳ್ಳಾರಿ ಜಿಲ್ಲೆಯ 50ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದಾರೆ. ಸದ್ಯ ಇವರ ನೆರವಿಗೆ ಮಾಜಿ ಸಚಿವ ಬಿ ನಾಗೇಂದ್ರ ಮುಂದಾಗಿದ್ದಾರೆ. ದುಬೈನಲ್ಲಿರುವ ಸ್ನೇಹಿತ ನಜೀಬ್ ಮೂಲಕ ಬಿ.ನಾಗೇಂದ್ರ ನೆರವಿಗೆ ಮುಂದಾಗಿದ್ದು, ಕನ್ನಡಿಗರಿಗೆ ಊಟ ಮತ್ತು ಅಗತ್ಯ ಸೌಲಭ್ಯ ಕಲ್ಪಿಸಿದ್ದಾರೆ. ವಿಡಿಯೋ ಕಾಲ್ನಲ್ಲಿ ಬಳ್ಳಾರಿ ಜನರ ಜತೆ ಸಿಎಂ ಸಿದ್ದರಾಮಯ್ಯ ಮತ್ತು ಬಿ. ನಾಗೇಂದ್ರ ಮಾತನಾಡಿದ್ದಾರೆ.
ದುಬೈನಲ್ಲಿ ಇರುವ ಕನ್ನಡಿಗರ ರಕ್ಷಣೆಗೆ ದುಬೈ ಒಕ್ಕಲಿಗರ ಸಂಘ ಮುಂದಾಗಿದೆ. ಏನೇ ಸಹಾಯ ಬೇಕಿದ್ದರು ಸಂಪರ್ಕ ಮಾಡುವಂತೆ ದುಬೈ ಒಕ್ಕಲಿಗರ ಸಂಘದ ಅಧ್ಯಕ್ಷ ತಿಳಿಸಿದ್ದಾರೆ. ಊಟ, ವಸತಿ, ವಿಮಾನ ಟಿಕೆಟ್ ಏನೇ ಬೇಕಾದರೂ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು +971555114205 ಈ ನಂಬರ್ಗೆ ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:31 pm, Sun, 1 March 26