AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ ಸಿಬ್ಬಂದಿಯ ಲವ್ವಿಡವ್ವಿ, ಫೋಟೋ ವೈರಲ್

ಇಡೀ ಕರ್ನಾಟಕದಾದ್ಯಂತ ಮಾತ್ರವಲ್ಲದೇ ರಾಷ್ಟ್ರಮಟ್ಟದಲ್ಲೂ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ವಿಡಿಯೋಗಳನ್ನು, ಫೋಟೋಗಳನ್ನು ಟ್ರೋಲ್ ಮಾಡಲಾಗುತ್ತಿದೆ. ಇದರ ಇದರ ಮಧ್ಯ ಇತ್ತ ಕೋಲಾರದ ಜಿಲ್ಲೆಯ ಗ್ರಾಮ ಪಂಚಾಯಿತಿ ಸಿಬ್ಬಂದಿಯ ಲವ್ವಿ-ಡವ್ವಿ ಫೋಟೋಗಳು ವೈರಲ್ ಆಗಿದ್ದು, ಜಿಲ್ಲೆಯಲ್ಲಿ ಹಲ್​ಚಲ್​ ಎದ್ದಿದೆ.

ಕೋಲಾರ: ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ ಸಿಬ್ಬಂದಿಯ ಲವ್ವಿಡವ್ವಿ, ಫೋಟೋ ವೈರಲ್
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ರಮೇಶ್ ಬಿ. ಜವಳಗೇರಾ|

Updated on: May 14, 2024 | 5:49 PM

Share

ಕೋಲಾರ (ಮೇ 14): ಕೋಲಾರ (kolar) ಜಿಲ್ಲೆ ಕೆಜಿಎಫ್ ತಾಲೂಕಿನ ರಾಮಸಾಗರ ಗ್ರಾಮ ಪಂಚಾಯತಿ ಸಿಬ್ಬಂದಿಯ (gram panchayat  Staff) ಕಿಸ್ಸಿಂಗ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಕೆಲಸ ಮಾಡುವ ಸ್ಥಳ ದೇವಸ್ಥಾನದಂತೆ ಎಂಬ ನಂಬಿಕೆಯಿದ್ದರೂ ಇಲ್ಲಿನ ಸಿಬ್ಬಂದಿ ಮಾತ್ರ ತಾವು ಕೆಲಸ ಮಾಡುವ ಗ್ರಾಮ ಪಂಚಾಯತಿ ಸಿಬ್ಬಂದಿ ಮಾತ್ರ ಕಾಮಚೇಷ್ಟೆ ಕುಟೀರ ಮಾಡಿಕೊಂಡಿದ್ದಾರೆ. ಪಂಚಾಯಿತಿ ಕಾರ್ಯಾಲಯದಲ್ಲಿಯೇ ಖುಲ್ಲಂ ಖುಲ್ಲಾ ಕಿಸ್‌ ಮಾಡುತ್ತಾ ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ಈಗ ಈ ಫೋಟೋಗಳು ವೈರಲ್ ಆಗಿದ್ದು, ಮಹಿಳೆಯಿಂದ ಲೈಂಗಿಕ ಕಿರಿಕುಳದ ಕೇಸ್ ದಾಖಲಾಗಿದೆ.

ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ರಾಮಸಾಗರ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ಮಹಿಳಾ ಉದ್ಯೋಗಿ ಜೊತೆಗಿರುವ ಖಾಸಗಿ ಫೋಟೋಗಳು ವೈರಲ್ ಆಗಿದ್ದು, ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಫೋಟೋಗಳು ಸಾಮಾಜಿಕ ಜಾಲ ತಾಣಗಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಮಹಿಳಾ ಸಿಬ್ಬಂದಿ ನನ್ನ ಮೇಲೆ ದೌರ್ಜನ್ಯವೆಸಗಲಾಗುತ್ತಿದೆ ಎಂದು ದೂರು ನೀಡಿದ್ದಾರೆ. ಮತ್ತೊಂದೆಡೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Viral Video:ಬಸ್ಸಿನಲ್ಲೇ ಪ್ರೇಮಿಗಳ ರೊಮ್ಯಾನ್ಸ್; ಲವ್ ಬರ್ಡ್ಸ್ ಹುಚ್ಚಾಟಕ್ಕೆ ಛಿ ಛೀ ಎಂದ ನೆಟ್ಟಿಗರು

ಮಹಿಳೆ ನೀಡಿದ ದೂರಿನಲ್ಲೇನಿದೆ?

ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ಅವರ ವಿರುದ್ಧ ಲೈಂಕಿಗ ಕಿರುಕುಳ, ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಗೆ ಮುಜುಗರ, ಖಾಸಗಿ ಕ್ಷಣಗಳ ಫೋಟೋ ಹಂಚಿಕೆ ಹಾಗೂ ಬೆದರಿಕೆ ಒಡ್ಡಿದ್ದಾರೆಂದು ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ. ಅರ್ಜುನ್ ಹರಿಕೃಷ್ಣ ಗ್ರಾಮ ಪಂಚಾಯಿತಿ ಕಾರ್ಯಾರಲಯದ ಮೊದಲ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯ ಬಳಿ ಹೋಗಿ ಕಾಮಚೇಷ್ಟೆ ಮಾಡಿದ್ದಾರಂತೆ. ಅದನ್ನು ವಿರೋಧ ಮಾಡಿದ್ದಕ್ಕೆ ನಿನ್ನ ಗಂಡನಿಗೆ ಗ್ರಾಮ ಪಂಚಾಯಿತಿಯಲ್ಲಿ ಜಲಗಾರ ಕೆಲಸ ಕೊಡಿಸುತ್ತೇನೆ. ಜೊತೆಗೆ, ನಿಮಗೆ ವಾಸಕ್ಕೆಂದು ಪಂಚಾಯಿತಿಯಿಂದ ಉಚಿತ ಸರ್ಕಾರಿ ಮನೆ ಕಟ್ಟಿಸಿಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾನೆ.

ಆಗ ತನಗೆ ಮುತ್ತಿಡುವುದಕ್ಕೆ ಬಲವಂತವಾಗಿ ಪ್ರೇರೇಪಿಸಿ ಅದನ್ನು ತನ್ನ ಮೊಬೈಲ್‌ನಲ್ಲಿ ಸೆಲ್ಫಿ ಫೋಟೋ ತೆಗೆದುಕೊಂಡಿದ್ದಾನೆ. ನಂತರದ ದಿನಗಳಲ್ಲಿ ತನ್ನೊಂದಿಗೆ ನೀವು ಲೈಂಗಿಕವಾಗಿ ಸಹಕರಿಸಬೇಕು ಎಂದು ಬೆದರಿಕೆ ಹಾಕಿದ್ದಾನೆ. ಇದಕ್ಕೆ ಒಪ್ಪದಿದ್ದಾಗ ನಿಮ್ಮನ್ನು ಕೆಲಸದಿಂದ ತೆಗೆದು ಹಾಕುತ್ತೇನೆ. ಜೊತೆಗೆ, ನೀನು ಮುತ್ತು ಕೊಡುವುದು ಹಾಗೂ ನನ್ನೊಂದಿಗೆ ಖಾಸಗಿಯಾಗಿ ಕಳೆದ ಕ್ಷಣಗಳ ಫೋಟೋ ವೈರಲ್ ಮಾಡುತ್ತೇನೆ ಎಂದು ಬೆದರಿಸಿದ್ದಾನೆ. ಆತನ ಕಿರುಕುಳದಿಂದ ನನ್ನ ಸಂಸಾರ ಹಾಗೂ ಜೀವನಕ್ಕೆ ಮುಳುವಾಗಿದೆ. ಈಗ ಒಂದು ಹೆಜ್ಜೆ ಮುಂದೆ ಹೋಗಿ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಸದ್ಯ ಬೇತಮಂಗಲ ಪೊಲೀಸರು ಆರೋಪಿ ಅರ್ಜುನ ಹರಿಕೃಷ್ಣನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.