ಸಂಜೆ ಹೆಣ್ಣುಮಗುವಿಗೆ ಜನ್ಮ, ಮಧ್ಯರಾತ್ರಿ ಇಂಜೆಕ್ಷನ್ ನೀಡಿದ್ದ ಕೆಲವೇ ಕ್ಷಣದಲ್ಲೇ ಬಾಣಂತಿ ಸಾವು

ರಾಜ್ಯದಲ್ಲಿ ಆಗಾಗ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಕೇಳಿ ಬರುತ್ತಿರುತ್ತದೆ. ಅದರಂತೆ ಇದೀಗ ಕೋಲಾರ ಜಿಲ್ಲಾಸ್ಪತ್ರೆ(Kolar District Hospital)ಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ಕೋಲಾರ ಜಿಲ್ಲಾಸ್ಪತ್ರೆ ವೈದ್ಯೆ ಡಾ.ಶಾಂತಾ ವಿರುದ್ಧ ಕೋಲಾರ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನನ್ನ ಪತ್ನಿ ಸಾವಿಗೆ ನ್ಯಾಯ ಬೇಕು ಎಂದು ಪತಿ ಗೋಪಾಲ್ ಸೇರಿದಂತೆ ಮೃತಳ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಸಂಜೆ ಹೆಣ್ಣುಮಗುವಿಗೆ ಜನ್ಮ, ಮಧ್ಯರಾತ್ರಿ ಇಂಜೆಕ್ಷನ್ ನೀಡಿದ್ದ ಕೆಲವೇ ಕ್ಷಣದಲ್ಲೇ ಬಾಣಂತಿ ಸಾವು
ಕೋಲಾರ ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 05, 2024 | 3:16 PM

ಕೋಲಾರ, ,ಮಾ.05: ಕೋಲಾರ ಜಿಲ್ಲಾಸ್ಪತ್ರೆ(Kolar District Hospital)ಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿದ ಘಟನೆ ನಡೆದಿದೆ. ಕೋಲಾರ ತಾಲೂಕಿನ ಜಂಗಾಲಹಳ್ಳಿಯ ಭವಾನಿ(26) ಮೃತ ಮಹಿಳೆ. ಸೋಮವಾರ(ಮಾ.04) ಬೆಳಗ್ಗೆ ಹೆರಿಗೆಗೆಂದು ಆಸ್ಪತ್ರೆಗೆ ಭವಾನಿ ಅವರು ದಾಖಲಾಗಿದ್ದರು. ಸೋಮವಾರ ಸಂಜೆ ವೇಳೆಗೆ ಹೆಣ್ಣುಮಗುವಿಗೆ ಜನ್ಮ ಕೂಡ ನೀಡಿದ್ದರು. ಎಲ್ಲವೂ ಸರಿಯಾಗಿತ್ತು. ಆದರೆ, ಮಧ್ಯರಾತ್ರಿ ಬಾಣಂತಿ ನೋವು ಎಂದು ಹೇಳಿದ್ದಾರೆ. ಈ ಹಿನ್ನಲೆ ವೈದ್ಯರು ಇಂಜೆಕ್ಷನ್ ನೀಡಿದ್ದಾರೆ. ಇದಾದ ನಂತರ ಮಹಿಳೆಯ ಆರೋಗ್ಯ ಏರುಪೇರಾಗಿತ್ತು.

ವೈದ್ಯರ ವಿರುದ್ಧ ಕೋಲಾರ ಟೌನ್ ಪೊಲೀಸ್ ಠಾಣೆಗೆ ದೂರು

ಇನ್ನು ತೀವ್ರ ನೋವಿನಿಂದ ಬಳಲುತ್ತಿದ್ದ ಬಾಣಂತಿಗೆ ಇಂಜೆಕ್ಷನ್​ ನೀಡಲಾಗಿತ್ತು. ಆದರೆ, ವೈದ್ಯರು ಇಂಜೆಕ್ಷನ್ ನೀಡಿದ ಕೆಲ ಕ್ಷಣದಲ್ಲೇ ಬಾಣಂತಿ ಭವಾನಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಕೋಲಾರ ಜಿಲ್ಲಾಸ್ಪತ್ರೆ ವೈದ್ಯೆ ಡಾ.ಶಾಂತಾ ವಿರುದ್ಧ ಕೋಲಾರ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನನ್ನ ಪತ್ನಿ ಸಾವಿಗೆ ನ್ಯಾಯ ಬೇಕು ಎಂದು ಪತಿ ಗೋಪಾಲ್ ಸೇರಿದಂತೆ ಮೃತಳ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಚಿಕ್ಕೋಡಿ: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ, ಕುಟುಂಬಸ್ಥರಿಂದ ಠಾಣೆ ಎದುರು ಧರಣಿ

ಶಿವಮೊಗ್ಗದಲ್ಲಿ ಇಬ್ಬರು ಅಪರಿಚಿತರಿಂದ ಯುವಕನಿಗೆ ಚಾಕು ಇರಿತ

ಶಿವಮೊಗ್ಗ: ಶಿವಮೊಗ್ಗದ ದ ರಾಯಲ್ ಆರ್ಕೇಡ್ ಹಿಂಭಾಗ ರಸ್ತೆಯಲ್ಲಿ ಕಾರ್ತಿಕ್​ ಎಂಬಾತನಿಗೆ ಇಬ್ಬರು ಅಪರಿಚಿತರು ಚಾಕು ಇರಿದು ಪರಾರಿಯಾಗಿದ್ದಾರೆ. ಇದರಿಂದ ಗಾಯಗೊಂಡು ಕಾರ್ತಿಕ್​ನನ್ನು ಕೂಡಲೇ ಶಿವಮೊಗ್ಗದ ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ನಗರದ ಮಿಳಘಟ್ಟ ಬಡಾವಣೆಯ ಕಾರ್ತಿಕ್ ಸ್ಥಿತಿ ಗಂಭೀರವಾಗಿದ್ದು, ಇತನ ಮೇಲಿನ ದಾಳಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್