AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಮೃತ್ಯುಕೂಪವಾದ ಕೃಷಿ ಹೊಂಡಗಳು: 15 ದಿನದಲ್ಲಿ 7 ಮಂದಿ ಸಾವು

ಕೋಲಾರ ಜಿಲ್ಲೆಯಲ್ಲಿ ಕೃಷಿ ಹೊಂಡಗಳು ಮೃತ್ಯಕೂಪಗಳಾಗುತ್ತಿವೆ. ಕಳೆದ 15 ದಿನಗಳಲ್ಲಿ ಕೃಷಿ ಹೊಂಡಗಳಿಗೆ ಬಿದ್ದು 7 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಆರ್. ರವಿ ಅವರು, ವಾರದೊಳಗೆ ಎಲ್ಲಾ ಕೃಷಿ ಹೊಂಡಗಳಿಗೆ ತಂತಿ ಬೇಲಿ ಹಾಕದಿದ್ದರೆ ಹೊಂಡಗಳನ್ನೇ ಮುಚ್ಚುವಂತೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ಕೋಲಾರದಲ್ಲಿ ಮೃತ್ಯುಕೂಪವಾದ ಕೃಷಿ ಹೊಂಡಗಳು: 15 ದಿನದಲ್ಲಿ 7 ಮಂದಿ ಸಾವು
ಮಾಲೂರು ತಾಲೂಕಿನ ನಕ್ಕನಹಳ್ಳಿ ಗ್ರಾಮದ ಕೃಷಿ ಹೊಂಡ (ಸಾಂದರ್ಭಿಕ ಚಿತ್ರ)Image Credit source: tv9
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:May 18, 2026 | 9:21 AM

Share

ಕೋಲಾರ, ಮೇ 18: ಕೋಲಾರ (Kolar) ಜಿಲ್ಲೆಯಲ್ಲಿ ಕೃಷಿ ಹೊಂಡಗಳು ಸರಣಿ ಸಾವಿನ ಮೃತ್ಯುಕೂಪಗಳಾಗಿ ಪರಿಣಮಿಸಿದ್ದು, ಕಳೆದ ಕೇವಲ ಹದಿನೈದು ದಿನಗಳ ಅವಧಿಯಲ್ಲಿ ಏಳು ಜನ ಈ ಹೊಂಡಗಳಲ್ಲಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಈ ಆಘಾತಕಾರಿ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೋಲಾರ ಜಿಲ್ಲಾಧಿಕಾರಿ (DC) ಎಂ.ಆರ್. ರವಿ ಅವರು ತಕ್ಷಣವೇ ವಿಶೇಷ ಸಭೆ ಕರೆದು ಮಹತ್ವದ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ಕೃಷಿ ಹೊಂಡಗಳಿಗೆ ಏಳು ದಿನಗಳ ಒಳಗಾಗಿ ಕಡ್ಡಾಯವಾಗಿ ತಂತಿ ಬೇಲಿ ಅಳವಡಿಸಿ ಸುರಕ್ಷತೆ ಕಾಯ್ದುಕೊಳ್ಳಬೇಕು, ಇಲ್ಲದಿದ್ದರೆ ಅಂತಹ ಕೃಷಿ ಹೊಂಡಗಳನ್ನು ಮುಚ್ಚಲಾಗುವುದು ಎಂದು ಅಧಿಕಾರಿಗಳಿಗೆ ಮತ್ತು ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಾಂಶಗಳು

  • ಕೋಲಾರ ಜಿಲ್ಲೆಯ ವಿವಿಧೆಡೆಗಳಲ್ಲಿ 15 ದಿನದಲ್ಲಿ 7 ಜನ ಸಾವು.
  • ಸುರಕ್ಷತಾ ಕ್ರಮಗಳಿಲ್ಲದ ಕೃಷಿ ಹೊಂಡಗಳಿಂದ ದುರಂತ.
  • ಮಾಲೂರಿನಲ್ಲಿ ತಂದೆ, ಇಬ್ಬರು ಮಕ್ಕಳ ಜಲಸಮಾಧಿ.

ಮಾಲೂರು ತಾಲೂಕಿನ ನಕ್ಕನಹಳ್ಳಿಯಲ್ಲಿ ಭಾನುವಾರ ಶ್ರೀನಿವಾಸ್ (40) ಹಾಗೂ ಅವರ ಮಕ್ಕಳಾದ ಚೇತನ್ (13), ರಾಜೇಶ್ (8) ಕೃಷಿ ಹೊಂಡಕ್ಕೆ ಬಿದ್ದು ಸಾವಿಗೀಡಾಗಿದ್ದಾರೆ. ಇದರ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ.

Kolar Dc Meeting

ಕೋಲಾರ ಜಿಲ್ಲಾಧಿಕಾರಿ ಎಂ.ಆರ್. ರವಿ ತುರ್ತು ಸಭೆ

ಸರಣಿ ದುರಂತಗಳ ಹಿನ್ನೆಲೆ

ಕೋಲಾರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಜನರು ಕೃಷಿ ಹೊಂಡಗಳಿಗೆ ಬಿದ್ದು ಸಾಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಮೇ 5 ರಂದು ಬಂಗಾರಪೇಟೆ ತಾಲೂಕಿನ ಬೋಡೇನಹಳ್ಳಿ ಗ್ರಾಮದಲ್ಲಿ ತನುಶ್ರೀ (15) ಮತ್ತು ಕಾರ್ತಿಕ್ (8) ಎಂಬ ಅಣ್ಣ-ತಂಗಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದರು. ಇದಾದ ಬೆನ್ನಲ್ಲೇ ಮೇ 8 ರಂದು ಶ್ರೀನಿವಾಸಪುರ ತಾಲೂಕಿನ ಪಚ್ಚರಮಾಕಲಹಳ್ಳಿಯಲ್ಲಿ ಈಜಲು ಹೋದ ನರೇಂದ್ರ (25) ಹಾಗೂ ಚಂದನ್ (25) ಎಂಬ ಇಬ್ಬರು ಯುವಕರು ಮೃತಪಟ್ಟಿದ್ದರು.

ಇದನ್ನೂ ಓದಿ: ಕೋಲಾರ: ಜವರಾಯನಾದ ಕೃಷಿ ಹೊಂಡ, ಈಜು ಕಲಿಸಲು ಹೋದ ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ

ಇದೀಗ ಭಾನುವಾರ ಮಾಲೂರಿನಲ್ಲಿ ತಂದೆ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿರುವುದು ಜಿಲ್ಲೆಯ ಜನರನ್ನು ಕಂಗೆಡಿಸಿದೆ. ರೈತರು ತಮ್ಮ ಜಮೀನುಗಳಲ್ಲಿ ತಾವೇ ನಿರ್ಮಿಸಿಕೊಂಡಿರುವ ಕೃಷಿ ಹೊಂಡಗಳಿಗೆ ಸೂಕ್ತ ರಕ್ಷಣೆ ಒದಗಿಸದ ಕಾರಣ ಈ ಅನಾಹುತಗಳು ಸಂಭವಿಸುತ್ತಿದ್ದು, ಸದ್ಯ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:17 am, Mon, 18 May 26

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!