AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರಿಗೆ ಜೀವಾವಧಿ ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೋಲಾರದ ಪೋಕ್ಸೋ ವಿಶೇಷ ಕೋರ್ಟ್, ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಕೋಲಾರದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರಿಗೆ ಜೀವಾವಧಿ ಶಿಕ್ಷೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 18, 2023 | 6:01 PM

Share

ಕೋಲಾರ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ (Kolar Gang Rape Case) ಎಸಗಿದ್ದ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೋಲಾರದ ಪೋಕ್ಸೋ ವಿಶೇಷ ಕೋರ್ಟ್ (POCSO Special Court in Kolar), ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ (Life Imprisonment) ವಿಧಿಸಿ ಆದೇಶ ಹೊರಡಿಸಿದ್ದು, ಸಂತ್ರಸ್ತೆ ಹಾಗೂ ಆಕೆಯ ಕುಟುಂಬಸ್ಥರಿಗೆ ನ್ಯಾಯ ಸಿಕ್ಕಂತಾಗಿದೆ. ಆನಂದ್, ಕಾಂತರಾಜು, ಪ್ರವೀಣ್, ವೇಣು ಜೀವಾವಧಿ ಶಿಕ್ಷೆಗೆ ಒಳಗಾದ ಆರೋಪಿಗಳು. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರದಲ್ಲಿ 2022ರ ಫೆಬ್ರವರಿ ತಿಂಗಳಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಲಾಗಿತ್ತು. ಸದ್ಯ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಅವರು ಆದೇಶ ಹೊರಡಿಸಿದ್ದಾರೆ.

ರಸ್ತೆಯಲ್ಲಿ ನಿಂತಿದ್ದ ವ್ಯಕ್ತಿಗೆ ಕ್ಯಾಂಟರ್ ವಾಹನ ಡಿಕ್ಕಿ

ಆನೇಕಲ್: ತಾಲೂಕಿನಲ್ಲಿ ಹಿಟ್ ಆ್ಯಂಡ್ ರನ್ ಕೇಸ್ ನಡೆದಿದೆ. ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ರಸ್ತೆಯಲ್ಲಿ ನಿಂತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಡ್ನಹಳ್ಳಿ ಕೆರೆಯ ಬಳಿ ಫೆಬ್ರವರಿ 17ರ ಸಂಜೆ ನಡೆದಿದೆ. ತಿಮ್ಮಸಂದ್ರ ಗ್ರಾಮದ ವೆಂಕಟೇಶಪ್ಪ(55) ಮೃತಪಟ್ಟ ವ್ಯಕ್ತಿ. ದ್ವಿಚಕ್ರ ವಾಹನದಲ್ಲಿ ಆನೇಕಲ್ ಮಾರ್ಗವಾಗಿ ಬರುತ್ತಿದ್ದ ವೆಂಕಟೇಶಪ್ಪ ಅವರು ಮೂತ್ರ ವಿಸರ್ಜನೆಗೆಂದು ಗುಡ್ನಹಳ್ಳಿ ಕೆರೆ ಬಳಿ ನಿಲ್ಲಿಸಿದ್ದರು. ಈ ವೇಳೆ ಅತಿವೇಗವಾಗಿ ಬಂದ ಕ್ಯಾಂಟರ್ ವಾಹನ ಅವರಿಗೆ ಡಿಕ್ಕಿ ಹೊಡೆದಿದೆ. ಘಟನೆ ನಂತರ ಕ್ಯಾಂಟರ್ ವಾಹನ ಸಹಿತ ಚಾಲಕ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಆನೇಕಲ್ ಠಾಣಾ ಪೊಲೀಸರು ಚಾಲಕನ ಬಂಧನಕ್ಕೆ ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Sat, 18 February 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್