ಮಣ್ಣು ಹೊರು, ಇಲ್ಲವಾದರೆ ಪೆಟ್ಟು ತಿನ್ನು! ಇದು ಕೋಲಾರ ಪ್ರೌಢಶಾಲೆ ಮಕ್ಕಳ ಪಾಡು

ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೌಚಾಲಯಗಳನ್ನು ಶುಚಿಗೊಳಿಸುವುದು, ಜೊತೆಗೆ ಶಿಕ್ಷಕರ ಸ್ವಂತ ಕೆಲಸಕ್ಕೆ ಬಳಸುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ. ಇದೀಗ ಕೋಲಾರ(Kolar) ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಶಾಲಾ ಸಿಬ್ಬಂದಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರ ರೀತಿ ಬಳಕೆ ಮಾಡಿಕೊಂಡ ಘಟನೆ ನಡೆದಿದೆ.

ಮಣ್ಣು ಹೊರು, ಇಲ್ಲವಾದರೆ ಪೆಟ್ಟು ತಿನ್ನು! ಇದು ಕೋಲಾರ ಪ್ರೌಢಶಾಲೆ ಮಕ್ಕಳ ಪಾಡು
ಕೋಲಾರ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾರ್ಮಿಕರಂತೆ ವಿದ್ಯಾರ್ಥಿಗಳ ಬಳಕೆ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 19, 2024 | 8:30 PM

ಕೋಲಾರ, ಮಾ.19: ಶಾಲಾ ವಿದ್ಯಾರ್ಥಿಗಳನ್ನ ಶಿಕ್ಷಕರು ಸ್ವಂತದ ಜೊತೆಗೆ ಇನ್ನಿತರ ಕೆಲಸಗಳಿಗೆ ಬಳಸಿಕೊಳ್ಳುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇರುತ್ತದೆ. ಅದರಂತೆ ಇದೀಗ ಕೋಲಾರ(Kolar) ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಶಾಲಾ ಸಿಬ್ಬಂದಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರ ರೀತಿ ಬಳಕೆ ಮಾಡಿಕೊಂಡ ಘಟನೆ ನಡೆದಿದೆ. ಜೊತೆಗೆ ಮಕ್ಕಳ ಕೆಲಸದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿದ್ಯಾರ್ಥಿಗಳನ್ನ ಕಾರ್ಮಿಕರಂತೆ ಬಳಕೆ ಮಾಡಿಕೊಂಡ ಶಾಲಾ ಸಿಬ್ಬಂದಿ

ಕೋಲಾರ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯ ಪಕ್ಕದಲ್ಲೇ ಇರುವ ಶಾಲೆ ಇದಾಗಿದ್ದು, ಶಾಲಾ ಸಮಯದಲ್ಲಿಯೇ ಮಕ್ಕಳಿಂದ ಗೋಡೆ ಮತ್ತು ಕಲ್ಲು ಒಡೆಸುವುದು. ಮಣ್ಣು ಎತ್ತುವ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಇನ್ನು ಕೆಲಸ ಮಾಡದಿದ್ರೆ ವಿದ್ಯಾರ್ಥಿಗಳನ್ನು ಥಳಿಸುತ್ತಾರೆ ಎನ್ನುವ ಆರೋಪ ಶಾಲೆಯ ಉಪ ಪ್ರಾಂಶುಪಾಲೇ ರಾಧಮ್ಮ ವಿರುದ್ಧ ಕೇಳಿಬಂದಿದೆ. ಪರೀಕ್ಷೆ ಸಮಯದಲ್ಲಿ ಬೋಧನೆ ಮಾಡುವುದು ಬಿಟ್ಟು, ಕೂಲಿ ಕಾರ್ಮಿಕರ ರೀತಿ ಮಕ್ಕಳನ್ನ ಬಳಸಿಕೊಳ್ಳುತ್ತಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶಾಲೆಯ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಹಾಗೂ ರಾಜ್ಯ ರೈತ ಸಂಘದ ಮುಖಂಡರು ಆಗ್ರಹಿಸಿದ್ದಾರೆ. ಶಿಕ್ಷಕ ಸಚಿವ ಮಧು ಬಂಗಾರಪ್ಪ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ:ಗ್ಯಾರಂಟಿ ಸಮಾವೇಶಕ್ಕೆ ಸರ್ಕಾರಿ ಬಸ್​ ಬಳಕೆ, ಪರೀಕ್ಷಾ ಕೇಂದ್ರಕ್ಕೆ ತೆರಳಲು ಬಸ್​​ ಇಲ್ಲದೆ ಪರದಾಡಿದ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳು

ಇನ್ನು ಫೆ.18 ರಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ವಿರೇಶ್ವರ ವೃತ್ತದ ಬಳಿಯ ಶಾಸಕರ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕ ತನ್ನ ಕಾರನ್ನು ವಿದ್ಯಾರ್ಥಿಗಳಿಂದ ಸ್ವಚ್ಛಗೊಳಿಸಿದ ಪ್ರಕರಣ ಬೆಳಕಿಗೆ ಬಂದಿತ್ತು. ಮುಖ್ಯ ಶಿಕ್ಷಕ ಬಸವರಾಜ ರಕ್ಕಸಗಿ ಅವರು ಶಾಲಾ ಆವರಣದಲ್ಲಿಯೇ ತಮ್ಮ ಕಾರನ್ನು ವಿದ್ಯಾರ್ಥಿಗಳಿಂದ ಸ್ವಚ್ಚ ಮಾಡಿಸಿದ್ದರು. ಇಬ್ಬರು ವಿದ್ಯಾರ್ಥಿಗಳು ಕಾರ್ ಸ್ವಚ್ಛ ಮಾಡುತ್ತಿರುವ ವಿಡಿಯೋ ಸ್ಥಳಿಯರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದರು. ಇಂತಹ ಹಲವಾರು ಪ್ರಕರಣಗಳೂ ಬಂದರೂ ಕೂಡ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:28 pm, Tue, 19 March 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ