ಕೋಲಾರ: ಗೃಹಸಚಿವ ಪರಮೇಶ್ವರ್ ಆಪ್ತ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈಬಂಟ ಎಂ ಶ್ರೀನಿವಾಸ್ ಬರ್ಬರ ಹತ್ಯೆ

ಆರು ಜನ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಶ್ರೀನಿವಾಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದಾಗ ಹಲ್ಲೆ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಶ್ರೀನಿವಾಸ್ ಅವರ ಎದೆ, ತಲೆ, ದೇಹದ ಮೈಮೇಲೆ ಮಾರಕಾಸ್ತ್ರಗಳಿಂದ ಮನಸೋಇಚ್ಚೆ ಹಲ್ಲೆ ಮಾಡಿದ್ದಾರೆ.

ಕೋಲಾರ: ಗೃಹಸಚಿವ ಪರಮೇಶ್ವರ್ ಆಪ್ತ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈಬಂಟ ಎಂ ಶ್ರೀನಿವಾಸ್ ಬರ್ಬರ ಹತ್ಯೆ
ಹತ್ಯೆಗೀಡಾದ ಎಂ ಶ್ರೀನಿವಾಸ್
Follow us
| Updated By: ಗಣಪತಿ ಶರ್ಮ

Updated on:Oct 23, 2023 | 4:00 PM

ಕೋಲಾರ, ಅಕ್ಟೋಬರ್ 23: ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸ್ (M Srinivas) ಎಂಬವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಎಂ ಶ್ರೀನಿವಾಸ್ ಅವರು ಕೋಲಾರ (Kolar) ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡರಾಗಿದ್ದು, ಜಿಲ್ಲಾಪಂಚಾಯ್ತಿ ಮಾಜಿ ಅಧ್ಯಕ್ಷರೂ ಆಗಿದ್ದರು. ಕೋಲಾರ ಜಿಲ್ಲೆ ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ಶ್ರೀನಿವಾಸ್ ಮೇಲೆ ಹಲ್ಲೆ ನಡೆದಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟರು.

ಆರು ಜನ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಶ್ರೀನಿವಾಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದಾಗ ಹಲ್ಲೆ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಶ್ರೀನಿವಾಸ್ ಅವರ ಎದೆ, ತಲೆ, ದೇಹದ ಮೈಮೇಲೆ ಮಾರಕಾಸ್ತ್ರಗಳಿಂದ ಮನಸೋಇಚ್ಚೆ ಹಲ್ಲೆ ಮಾಡಿದ್ದಾರೆ.

ಕೋಲಾರದ ಜಾಲಪ್ಪಾ ಆಸ್ಪತ್ರೆಯಲ್ಲಿ ಶ್ರೀನಿವಾಸ್ ಅವರು ಮೃತಪಟ್ಟಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶ್ರೀನಿವಾಸಪುರಕ್ಕೆ ಎಸ್ಪಿ ನಾರಾಯಣ್ ಬೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ನಾಲ್ಕು ತಂಡ ರಚನೆ ಮಾಡಿ ಕಾರ್ಯಾಚರಣೆ ಆರಂಭಿಸಲಾಗಿದೆ. ಪ್ರತ್ಯಕ್ಷದರ್ಶಿ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪರಿಚಯಸ್ಥರು ಹಾಗೂ ಶ್ರೀನಿವಾಸಪುರ ಸ್ಥಳೀಯರಿಂದಲೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಜಮೀನು ವಿವಾದದ ಹಿನ್ನಲೆ ಕೊಲೆ ಮಾಡಿರಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಕೋಲಾರದಲ್ಲಿ ದೇವರಮೂರ್ತಿ ವಿರೂಪಗೊಳಿಸಿದ ಕಿಡಿಗೇಡಿ; ವಿಡಿಯೋ ವೈರಲ್​

ಇತ್ತೀಚೆಗಷ್ಟೇ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್‌ ಬಳಿ ಭೀಕರ ಕೊಲೆ ಮಾಡಲಾಗಿತ್ತು. ಅನಿಲ್‌ ಕುಮಾರ್ ಎಂಬ ಗ್ರಾಮ ಪಂಚಾಯ್ತಿ ಸದಸ್ಯನನ್ನು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದರು. ಮಾಲೂರು ತಾಲೂಕಿನ ಮೀಣಸಂದ್ರ ಗ್ರಾಮದ ಅನಿಲ್, ಜಯಮಂಗಲ ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದರು. ಮಾಲೂರು ಶಾಸಕ ಕೆ.ವೈ ನಂಜೇಗೌಡ ಆಪ್ತನಾಗಿದ್ದ ಅನಿಲ್ ರಾಜಕೀಯದಲ್ಲಿ ಬೆಳೆಯುತ್ತಾ ಒಳ್ಳೆ ಹೆಸರು ಮಾಡಿದ್ದರು. ಇದರ ನಡುವೆ ರಾಜಕೀಯ ವಿರೋಧಿಗಳ ಕೋಪಕ್ಕೆ ಗುರಿಯಾಗಿದ್ದರು. ಎಂದಿನಂತೆ ತನ್ನ ದ್ವಿಚಕ್ರ ವಾಹನದಲ್ಲಿ ಸಂಜೆ ನಾಲ್ಕು ಗಂಟೆ ಸುಮಾರಿಗೆ ಅಕ್ಟೋಬರ್ 20ರಂದು ಮಾಲೂರು ಪಟ್ಟಣದ ಕಡೆಗೆ ತೆರಳುವಾಗ ಹಿಂಬಾಲಿಸಿಕೊಂಡು ಬಂದ ಅಪರಿಚಿತರು ಮಚ್ಚಿನಿಂದ ಅನಿಲ್‌ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Mon, 23 October 23