AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಂದ ಪತಿ

ಕೋಲಾರದ ಕೆಜಿಎಫ್ ತಾಲೂಕಿನ ಚಿನ್ನದ ಗಣಿ ಗ್ರಾಮದಲ್ಲಿ ಪತ್ನಿಯ ನಡತೆಯ ಮೇಲೆ ಸಂಶಯ ವ್ಯಕ್ತಪಡಿಸಿದ ಪತಿಯೊಬ್ಬ ಆಕೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಆಂಧ್ರಪ್ರದೇಶ ಮೂಲದ ಗೋಪಿನಾಥ್ ತನ್ನ ಪತ್ನಿ ಈಶ್ವರಮ್ಮ ಅವರನ್ನು ಹತ್ಯೆ ಮಾಡಿದ್ದಾನೆ. ಊರಿಗಾಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ರಾಜ್ಯದಲ್ಲಿ ಇಂತಹ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿದ್ದು, ಇದು ಮತ್ತೊಂದು ಉದಾಹರಣೆಯಾಗಿದೆ.

ಕೋಲಾರ: ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಂದ ಪತಿ
ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಂದ ಪತಿImage Credit source: Tv9 kannada
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Apr 23, 2026 | 9:54 AM

Share

ಕೋಲಾರ, ಏ.23 : ರಾಜ್ಯದಲ್ಲಿ ಅಕ್ರಮ ಸಂಬಂಧಗಳ ಪ್ರಕರಣಗಳ ನಡುವೆ  ಪತಿ-ಪತ್ನಿ ಮಧ್ಯೆ ಅನುಮಾನಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ.  ನೆನ್ನೆಯಿಂದ (ಏ.22) ಅಕ್ರಮ ಸಂಬಂಧಗಳ ವರದಿಯೂ ಸುಮಾರು ಬೆಳಕಿಗೆ ಬಂದಿದೆ. ಇದೀಗ ಕೋಲಾರದಲ್ಲಿ ಪತ್ನಿಯ ನಡತೆಯ ಮೇಲೆ ಸಂಶಯ ವ್ಯಕ್ತಪಡಿಸಿದ ಪತಿಯೊಬ್ಬ ಆಕೆಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ಕೆಜಿಎಫ್ ತಾಲೂಕಿನ ಚಿನ್ನದ ಗಣಿ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಈಶ್ವರಮ್ಮ ಎಂದು ಗುರುತಿಸಲಾಗಿದ್ದು, ಆರೋಪಿ ಪತಿಯನ್ನು ಆಂಧ್ರಪ್ರದೇಶದ ಪೆದ್ದೂರು ಮೂಲದ ಗೋಪಿನಾಥ ಎಂದು ಗುರುತಿಸಲಾಗಿದೆ. ಈ ದಂಪತಿ ಇತ್ತೀಚೆಗೆ ಕೆಜಿಎಫ್ ತಾಲೂಕಿನ ಚಿನ್ನದ ಗಣಿ ಗ್ರಾಮದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಭೇಟಿ ನೀಡಿದ್ದರು.

ಸಂಬಂಧಿಕರ ಭೇಟಿ ಮಾಡಿ ವಾಪಸ್ ಆಗುವ ಸಂದರ್ಭದಲ್ಲಿ ದಾರಿಯುದ್ದಕ್ಕೂ ದಂಪತಿಗಳು ಜಗಳ ಮಾಡಿಕೊಂಡೆ ಬಂದಿದ್ದಾರೆ ಎಂದು ಹೇಳಲಾಗಿದೆ. ಇದರ ನಡುವೆ ಪತ್ನಿಯ ಶೀಲದ ಮೇಲೆ ಮೊದಲೇ ಶಂಕೆ ಹೊಂದಿದ್ದ ಗೋಪಿನಾಥ, ಮಾತಿಗೆ ಮಾತು ಬೆಳೆದು ಆಕ್ರೋಶಗೊಂಡಿದ್ದಾನೆ. ತನ್ನೊಂದಿಗೆ ತಂದಿದ್ದ ಮಚ್ಚಿನಿಂದ ಈಶ್ವರಮ್ಮ ಅವರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಈಶ್ವರಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಯುವಕರಲ್ಲಿ ಹೆಚ್ಚುತ್ತಿದೆ ಬಾಯಿ ಕ್ಯಾನ್ಸರ್: ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ, ತಜ್ಞರ ಎಚ್ಚರಿಕೆ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಊರಿಗಾಂ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ಬಳಿಕ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ಗೋಪಿನಾಥನನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಊರಿಗಾಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:39 am, Thu, 23 April 26

Follow Us