AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ, ಅನುಮಾನಾಸ್ಪದ ಸಾವುಗಳಿಂದ ಬೆಚ್ಚಿಬಿದ್ದಿದ್ದ ಕೋಲಾರ ಜನತೆಗೆ ರಿಲೀಫ್: ಅಕ್ರಮ ಕಲ್ಲುಗಣಿಗಾರಿಕೆಗೆ ತಕ್ಷಣದಿಂದಲೇ ಬ್ರೇಕ್‌

ಕೋಲಾರ ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ನಡೆದ ಕೊಲೆ, ಅನುಮಾನಾಸ್ಪದ ಸಾವು ಹಾಗೂ ಲಾರಿ ಅಪಘಾತಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಕ್ರಮ ಕಲ್ಲುಗಣಿಗಾರಿಕೆ ನಿಯಂತ್ರಣಕ್ಕೆ ಮುಂದಾಗಿದೆ. ತಕ್ಷಣದಿಂದಲೇ ಗಣಿಗಾರಿಕೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದ್ದು, 15 ದಿನಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ಕಲ್ಲು ಸಾಗಣೆಯ ಮೇಲೆ ನಿಗಾ ಇರಿಸಲಾಗುತ್ತದೆ.

ಕೊಲೆ, ಅನುಮಾನಾಸ್ಪದ ಸಾವುಗಳಿಂದ ಬೆಚ್ಚಿಬಿದ್ದಿದ್ದ ಕೋಲಾರ ಜನತೆಗೆ ರಿಲೀಫ್: ಅಕ್ರಮ ಕಲ್ಲುಗಣಿಗಾರಿಕೆಗೆ ತಕ್ಷಣದಿಂದಲೇ ಬ್ರೇಕ್‌
ಕೋಲಾರ ಕಲ್ಲು ಗಣಿಗಾರಿಕೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Oct 21, 2026 | 2:23 PM

Share

ಮುಖ್ಯಾಂಶಗಳು

  • ಕೋಲಾರದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಸ್ಥಗಿತಕ್ಕೆ ನಿರ್ಧಾರ
  • 15 ದಿನಗಳಲ್ಲಿ ಜಿಲ್ಲಾದ್ಯಂತ ಚೆಕ್‌ಪೋಸ್ಟ್‌ಗಳ ನಿರ್ಮಾಣ
  • ಕಲ್ಲು ಸಾಗಣೆ ಮತ್ತು ರಾಜಧನ ಪಾವತಿಗೆ ನಿಗಾ

ಕೋಲಾರ, ಅಕ್ಟೋಬರ್ 21: ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳ ಅವಧಿಯಲ್ಲಿ ಕಲ್ಲುಗಣಿಗಾರಿಕೆ ಮತ್ತು ಕ್ರಷರ್ ಘಟಕಗಳಿಗೆ ಸಂಬಂಧಿಸಿದಂತೆ ನಡೆದ ಕೊಲೆ, ಅನುಮಾನಾಸ್ಪದ ಸಾವು ಹಾಗೂ ಅಪಘಾತಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಅಕ್ರಮ ಕಲ್ಲುಗಣಿಗಾರಿಕೆಗೆ ಕಡಿವಾಣ ಹಾಕಲು ಮುಂದಾಗಿರುವ ಕೋಲಾರ ಜಿಲ್ಲಾಡಳಿತ, ತಕ್ಷಣದಿಂದಲೇ ಜಾರಿಗೆ ಬರುವಂತೆ ಗಣಿಗಾರಿಕೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಮುಂದಿನ 15 ದಿನಗಳಲ್ಲಿ ಜಿಲ್ಲೆಯಾದ್ಯಂತ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ, ಕಲ್ಲು ಸಾಗಣೆ ಮೇಲೆ ನಿಗಾ ಇರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಕೋಲಾರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಲ್ಲುಗಣಿಗಾರಿಕೆ ಹೆಚ್ಚಾಗಿದ್ದು, ನಿಯಮಬದ್ಧವಾಗಿ ನಡೆಯುವ ಗಣಿಗಾರಿಕೆಗಿಂತ ಅಕ್ರಮ ಗಣಿಗಾರಿಕೆಯೇ ಹೆಚ್ಚಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಕಳೆದ ಎರಡು ತಿಂಗಳಲ್ಲಿ ಗಣಿಗಾರಿಕೆ ಹಾಗೂ ಕ್ರಷರ್ ಘಟಕಗಳ ಸುತ್ತಮುತ್ತ ನಡೆದ ಹಲವು ಸಾವುಗಳು ಮತ್ತು ಅಕ್ರಮ ಗಣಿಗಾರಿಕೆ ವಿಚಾರವಾಗಿ ನಡೆದ ಕೊಲೆ ಪ್ರಕರಣ ಈ ಸಮಸ್ಯೆಯನ್ನು ಮತ್ತೆ ಮುನ್ನೆಲೆಗೆ ತಂದಿವೆ. ಈ ಹಿನ್ನೆಲೆಯಲ್ಲಿ ಅಕ್ರಮ ಗಣಿಗಾರಿಕೆಯನ್ನು ತಡೆಯುವಂತೆ ಸ್ಥಳೀಯರು ಹಾಗೂ ರಾಜಕೀಯ ಮುಖಂಡರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದರು.

ಎರಡು ತಿಂಗಳಲ್ಲಿ ಹೆಚ್ಚಾದ ಕೊಲೆ, ಅನುಮಾನಾಸ್ಪದ ಸಾವು, ಅಪಘಾತ

ಅಕ್ಟೋಬರ್ 1ರಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ದೇವರಹಳ್ಳಿ ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ವಿಚಾರವಾಗಿ ಮುರಳಿ ಎಂಬಾತನ ಕೊಲೆಯಾಗಿತ್ತು. ಅಕ್ಟೋಬರ್ 10ರಂದು ವೇಮಗಲ್ ಸಮೀಪದ ಬೆಟ್ಟಹೊಸಪುರ ಗ್ರಾಮದ ಕ್ರಷರ್ ಘಟಕದಲ್ಲಿ ಲಕ್ಷ್ಮಣ ಎಂಬಾತ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ. ಇದಕ್ಕೂ ಸುಮಾರು ಒಂದು ತಿಂಗಳ ಹಿಂದೆ ಇದೇ ಘಟಕದಲ್ಲಿ ಸಂಭವಿಸಿದ ಲಾರಿ ಅಪಘಾತದಲ್ಲಿ ಪಶ್ಚಿಮ ಬಂಗಾಳ ಮೂಲದ ಸುಬೇದ್ ಬ್ಯಾನರ್ಜಿ ಮೃತಪಟ್ಟಿದ್ದರು. ಕೋಲಾರ ತಾಲ್ಲೂಕಿನ ಕೆ.ಬಿ. ಹೊಸಹಳ್ಳಿಯಲ್ಲಿ ಸಂಭವಿಸಿದ ಮತ್ತೊಂದು ಲಾರಿ ಅಪಘಾತದಲ್ಲಿ ಬಾಗಲೂರಿನ ರವಿ ಎಂಬಾತ ಮೃತಪಟ್ಟಿದ್ದರು.

ಇದಲ್ಲದೆ, ಜಿಲ್ಲೆಯ ಗಡಿಭಾಗಗಳಲ್ಲಿಯೂ ಸರ್ಕಾರಿ ಜಾಗಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪಗಳಿವೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮಾಲೂರು ಶಾಸಕ ನಂಜೇಗೌಡ, ಜೆಡಿಎಸ್ ಮುಖಂಡ ಹೂಡಿ ವಿಜಯ್ ಕುಮಾರ್ ಸೇರಿದಂತೆ ಹಲವರು ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದರು.

15 ದಿನಗಳಲ್ಲಿ ಚೆಕ್‌ಪೋಸ್ಟ್‌ಗಳ ನಿರ್ಮಾಣ

ನಿರಂತರವಾಗಿ ನಡೆಯುತ್ತಿರುವ ಅವಘಡಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಕ್ರಮ ಗಣಿಗಾರಿಕೆಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ತಕ್ಷಣದಿಂದಲೇ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದ್ದು, ಮುಂದಿನ 15 ದಿನಗಳಲ್ಲಿ ಜಿಲ್ಲೆಯಾದ್ಯಂತ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ತಿಳಿಸಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿಯ ಸಿಬ್ಬಂದಿಯನ್ನು ಒಳಗೊಂಡಂತೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗುತ್ತದೆ. ಜಿಲ್ಲೆಯ ವಿವಿಧ ಭಾಗಗಳಿಂದ ಹೊರಹೋಗುವ ಪ್ರತಿಯೊಂದು ಕಲ್ಲಿನ ಸಾಗಣೆಯ ಲೆಕ್ಕ ಇಡುವುದು ಈ ಕ್ರಮದ ಉದ್ದೇಶವಾಗಿದೆ.

LIVE TV

ಚೆಕ್‌ಪೋಸ್ಟ್‌ಗಳಲ್ಲಿ ಕಲ್ಲು ಸಾಗಿಸುವ ಲಾರಿಗಳನ್ನು ತಪಾಸಣೆ ನಡೆಸಲಾಗುತ್ತದೆ. ರಾಜಧನ ಪಾವತಿಯಾಗಿದೆಯೇ, ಕಲ್ಲು ಯಾವ ಕ್ವಾರಿಯಿಂದ ಬಂದಿದೆ, ಲಾರಿ ಎಲ್ಲಿಗೆ ತೆರಳುತ್ತಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಈ ಮೂಲಕ ಅಕ್ರಮ ಕಲ್ಲುಗಣಿಗಾರಿಕೆ ಮತ್ತು ಕಲ್ಲು ಸಾಗಣೆಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಯೋಜಿಸಿದೆ. ಈ ಸಂಬಂಧ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರೂ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಅಕ್ರಮ ಗಣಿಗಾರಿಕೆಗೆ ಬೀಳುತ್ತಾ ಕಡಿವಾಣ?

ಹಲವು ವರ್ಷಗಳಿಂದ ಜಿಲ್ಲೆಯ ನೈಸರ್ಗಿಕ ಸಂಪತ್ತಿನ ಅಕ್ರಮ ಶೋಷಣೆ ನಡೆಯುತ್ತಿದೆ ಎಂಬ ಆರೋಪಗಳ ನಡುವೆಯೇ ಜಿಲ್ಲಾಡಳಿತ ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಗಣಿಗಾರಿಕೆ ಸ್ಥಗಿತಗೊಳಿಸುವ ನಿರ್ಧಾರ ಹಾಗೂ ಚೆಕ್‌ಪೋಸ್ಟ್‌ಗಳ ನಿರ್ಮಾಣದಿಂದ ಅಕ್ರಮ ಕಲ್ಲುಗಣಿಗಾರಿಕೆಗೆ ಕಡಿವಾಣ ಬೀಳುತ್ತದೆಯೇ, ಜಿಲ್ಲೆಯಲ್ಲಿ ಕಲ್ಲು ಸಾಗಣೆ ನಿಯಮಬದ್ಧವಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ಅರಮನೆಯಿಂದಲೇ ಅಮ್ಮನ ಜೊತೆಗೆ ಆದ್ಯವೀರ್, ಯುಗಾಧ್ಯಕ್ಷ ಪೂಜೆ ವೀಕ್ಷಣೆ
ಅರಮನೆಯಿಂದಲೇ ಅಮ್ಮನ ಜೊತೆಗೆ ಆದ್ಯವೀರ್, ಯುಗಾಧ್ಯಕ್ಷ ಪೂಜೆ ವೀಕ್ಷಣೆ
ಜಂಬೂ ಸವಾರಿಗೆ ಚಾಲನೆ ನೀಡಲು ಮೈಸೂರಿಗೆ ಬಂದ ಸಿಎಂ ಹೇಳಿದ್ದೇನು ನೋಡಿ
ಜಂಬೂ ಸವಾರಿಗೆ ಚಾಲನೆ ನೀಡಲು ಮೈಸೂರಿಗೆ ಬಂದ ಸಿಎಂ ಹೇಳಿದ್ದೇನು ನೋಡಿ
ಮೈಸೂರು ದಸರಾ 2026: ಆನೆಗಳ ಮೈಮೇಲೆ ಮೂಡಿದ ಬಣ್ಣ ಬಣ್ಣದ ಚಿತ್ತಾರ
ಮೈಸೂರು ದಸರಾ 2026: ಆನೆಗಳ ಮೈಮೇಲೆ ಮೂಡಿದ ಬಣ್ಣ ಬಣ್ಣದ ಚಿತ್ತಾರ
ಮೈಸೂರು ದಸರಾ: ಬನ್ನಿ ವೃಕ್ಷಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್
ಮೈಸೂರು ದಸರಾ: ಬನ್ನಿ ವೃಕ್ಷಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್
ಮೈಸೂರು ದಸರಾ 2026: ಗೊಂದಲಗಳ ನಡುವೆ ವಜ್ರಮುಷ್ಟಿ ಕಾಳಗ ರದ್ದು!
ಮೈಸೂರು ದಸರಾ 2026: ಗೊಂದಲಗಳ ನಡುವೆ ವಜ್ರಮುಷ್ಟಿ ಕಾಳಗ ರದ್ದು!
ಮೈಸೂರು ದಸರಾ: ಅರಮನೆ ಪ್ರವೇಶಿಸಿದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿ
ಮೈಸೂರು ದಸರಾ: ಅರಮನೆ ಪ್ರವೇಶಿಸಿದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿ
ಎಮ್ಮೆಯ ಹೊಟ್ಟೆಯಲ್ಲಿ ಬಿಳಿ ಬಣ್ಣದ ಹೋರಿ ಕರು ಜನನ
ಎಮ್ಮೆಯ ಹೊಟ್ಟೆಯಲ್ಲಿ ಬಿಳಿ ಬಣ್ಣದ ಹೋರಿ ಕರು ಜನನ
ಮೈಸೂರು ದಸರಾ 2026: ಚಿನ್ನದ ಅಂಬಾರಿ ಹೊರುವ ಪ್ರಶಾಂತ ಆನೆಗೆ ವಿಶೇಷ ಮಜ್ಜನ
ಮೈಸೂರು ದಸರಾ 2026: ಚಿನ್ನದ ಅಂಬಾರಿ ಹೊರುವ ಪ್ರಶಾಂತ ಆನೆಗೆ ವಿಶೇಷ ಮಜ್ಜನ
ಡಿಸೆಂಬರ್ 2029ರೊಳಗೆ ಭಾರತ ‘ಡ್ರಗ್ಸ್ ಮುಕ್ತ’ ದೇಶ: ಅಮಿತ್ ಶಾ ಘೋಷಣೆ
ಡಿಸೆಂಬರ್ 2029ರೊಳಗೆ ಭಾರತ ‘ಡ್ರಗ್ಸ್ ಮುಕ್ತ’ ದೇಶ: ಅಮಿತ್ ಶಾ ಘೋಷಣೆ
ವಿಜಯದಶಮಿಯ ಐತಿಹಾಸಿಕ ಮತ್ತು ಪೌರಾಣಿಕ ಮಹತ್ವ: ಡಾ. ಶೆಲ್ವಪಿಳ್ಳೈ ಅಯ್ಯಂಗಾರ್
ವಿಜಯದಶಮಿಯ ಐತಿಹಾಸಿಕ ಮತ್ತು ಪೌರಾಣಿಕ ಮಹತ್ವ: ಡಾ. ಶೆಲ್ವಪಿಳ್ಳೈ ಅಯ್ಯಂಗಾರ್