AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಲಾಕಪ್ ​ಡೆತ್: PSI ಮತ್ತು ಕಾನ್ಸ್​​ಟೇಬಲ್​ಗಳ ವಿರುದ್ಧ ಎಫ್​ಐಆರ್​ ದಾಖಲು

ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಮುನಿರಾಜು, ಬಾಲಾಜಿ ಎಂಬ ಆರೋಪಿಗಳನ್ನು ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸರು ಅಕ್ಟೋಬರ್​​ 17 ರಂದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದರು. ಹಿರಿಯ ಅಧಿಕಾರಿಗಳ ಗಮನಕ್ಕೆ ತರದೆ ಪೊಲೀಸರು ಆರೋಪಿಗಳನ್ನು 15 ದಿನಗಳ ಕಾಲ ಪೊಲೀಸ್ ಠಾಣೆ ಮತ್ತು ಬೇರೆ ಬೇರೆ ಸ್ಥಳಗಳಲ್ಲಿರಿಸಿ ಅಕ್ರಮವಾಗಿ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಆಂಧ್ರದ ಮದನಪಲ್ಲಿ ನಿವಾಸಿ ಮುನಿರಾಜು ಮೃತಪಟ್ಟಿದ್ದನು. ನಂತರ ಆಗಿದ್ದೇನು? ಈ ಸ್ಟೋರಿ ಓದಿ

ಕೋಲಾರ ಲಾಕಪ್ ​ಡೆತ್: PSI ಮತ್ತು ಕಾನ್ಸ್​​ಟೇಬಲ್​ಗಳ ವಿರುದ್ಧ ಎಫ್​ಐಆರ್​ ದಾಖಲು
ನಂಗಲಿ ಪೊಲೀಸ್​ ಠಾಣೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ವಿವೇಕ ಬಿರಾದಾರ|

Updated on: Nov 28, 2023 | 10:32 AM

Share

ಕೋಲಾರ ನ.28: ಲಾಕಪ್ ​ಡೆತ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಳಬಾಗಿಲು (Mulabagilu) ತಾಲೂಕಿನ ನಂಗಲಿ ಪೊಲೀಸ್ (Police) ಠಾಣೆಯ ಪಿಎಸ್​ಐ (PSI) ಮತ್ತು ಇಬ್ಬರು ಪೇದೆಗಳ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಡಿವೈಎಸ್​​​​​ಪಿ ನಂದಕುಮಾರ್ ವರದಿ ಆಧರಿಸಿ ಪಿಎಸ್​ಐ ಪ್ರದೀಪ್ ಸಿಂಗ್​​, ಕಾನ್ಸ್​​ಟೇಬಲ್​ ಮಂಜುನಾಥ್​, ಮಹಾಂತೇಶ್​ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

​​ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಮುನಿರಾಜು, ಬಾಲಾಜಿ ಎಂಬ ಆರೋಪಿಗಳನ್ನು ಪೊಲೀಸರು ಅಕ್ಟೋಬರ್​​ 17 ರಂದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದರು. ಹಿರಿಯ ಅಧಿಕಾರಿಗಳ ಗಮನಕ್ಕೆ ತರದೆ ಪೊಲೀಸರು ಆರೋಪಿಗಳನ್ನು 15 ದಿನಗಳ ಕಾಲ ಪೊಲೀಸ್ ಠಾಣೆ ಮತ್ತು ಬೇರೆ ಬೇರೆ ಸ್ಥಳಗಳಲ್ಲಿರಿಸಿ ಅಕ್ರಮವಾಗಿ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಆಂಧ್ರದ ಮದನಪಲ್ಲಿ ನಿವಾಸಿ ಮುನಿರಾಜು ಮೃತಪಟ್ಟಿದ್ದನು. ಲಾಕಪ್​ ಡೆತ್ ಪ್ರಕರಣವನ್ನು ತನಿಖೆ ನಡೆಸಿ ಡಿವೈಎಸ್​ಪಿ ​ನಂದಕುಮಾರ್ ವರದಿ ನೀಡಿದ್ದರು. ಈ ವರದಿ ಆಧಾರದ ಮೇಲೆ ಎಫ್​ಐಆರ್​ ದಾಖಲಾಗಿದೆ.

ಇದನ್ನೂ ಓದಿ: ತುಮಕೂರು: ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ, ಆರೋಪಿ ವಶಕ್ಕೆ

ಕುತ್ತಿಗೆಗೆ ಹಗ್ಗದಿಂದ ಬಿಗಿದು, ಮಾರಕಾಸ್ತ್ರಗಳಿಂದ ಹೊಡೆದು ಯುವಕನ ಕೊಲೆ

ಮಂಡ್ಯ: ಕುತ್ತಿಗೆಗೆ ಹಗ್ಗ ಬಿಗಿದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನನ್ನು ಕೊಲೆ ಮಾಡಿರುವ ಘಟನೆ ಮದ್ದೂರು ತಾಲೂಕಿನ ಕುದುರಗುಂಡಿ ಗ್ರಾಮದಲ್ಲಿ ನಡೆದಿದೆ. ಎಳನೀರು ವ್ಯಾಪಾರ ಮಾಡುತ್ತಿದ್ದ ಶಿವಾನಂದ (19) ಕೊಲೆಯಾದ ಯುವಕ. ದುಷ್ಕರ್ಮಿಗಳು ತಡರಾತ್ರಿ ಶಿವಾನಂದನನ್ನ ಕೊಲೆ ಮಾಡಿದ್ದಾರೆ. ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!