ಕಾರು ಅಡ್ಡಗಟ್ಟಿ 3.5 ಕೆಜಿ ಚಿನ್ನ ರಾಬರಿ: ಕೋಲಾರ ನಗರಸಭೆ ಕಾಂಗ್ರೆಸ್ ಸದಸ್ಯ ಅರೆಸ್ಟ್!

ಕೋಲಾರ ಜಿಲ್ಲೆಯ ಕೆಜಿಎಫ್​ನ ಕಾಂಗ್ರೆಸ್ ಮುಖಂಡ ಹಾಗೂ ಹಾಲಿ ನಗರಸಭೆ ಸದಸ್ಯನನ್ನು ಆಂಧ್ರ ಪೊಲೀಸರು ಚಿನ್ನ ದರೋಡೆ ಪ್ರಕರಣದಲ್ಲಿ ಬಂಧಿಸಿದ್ದಾರೆ. ದರೋಡೆಕೋರರು ತಮಿಳುನಾಡಿನಿಂದ ಬರುತ್ತಿದ್ದ ಚಿನ್ನದ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 3.5 ಕೆಜಿ ಚಿನ್ನ ದೋಚಿದ್ದರು. ಸದ್ಯ ಪೊಲೀಸರು ದರೋಡೆ ಮಾಡಿದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರು ಅಡ್ಡಗಟ್ಟಿ 3.5 ಕೆಜಿ ಚಿನ್ನ ರಾಬರಿ: ಕೋಲಾರ ನಗರಸಭೆ ಕಾಂಗ್ರೆಸ್ ಸದಸ್ಯ ಅರೆಸ್ಟ್!
ಕಾಂಗ್ರೆಸ್ ಮುಖಂಡ ಜಯಪಾಲ್​
Updated By: ಗಂಗಾಧರ​ ಬ. ಸಾಬೋಜಿ

Updated on: Apr 06, 2025 | 11:33 AM

ಕೋಲಾರ, ಏಪ್ರಿಲ್​ 06: ರಾಬರಿ ಪ್ರಕರಣದಲ್ಲಿ (Robbery case) ಕಾಂಗ್ರೆಸ್ (congress) ಮುಖಂಡನನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಕೆಜಿಎಫ್ ಕಾಂಗ್ರೆಸ್ ಮುಖಂಡ ಹಾಗೂ ಹಾಲಿ ನಗರಸಭೆ ಸದಸ್ಯ ಜಯಪಾಲ್​ರನ್ನು ಬಂಧಿಸಲಾಗಿದೆ. ತಮಿಳುನಾಡಿನ ಚೆನೈ ನಿಂದ ಕೆಜಿಎಫ್​ಗೆ ಬರುತ್ತಿದ್ದ ಚಿನ್ನದ ವ್ಯಾಪಾರಿ ಚೇತನ್ ಜೈನ್ ಎಂಬುವವರ ಕಾರು ಅಡ್ಡಗಟ್ಟಿ 3.5 ಕೆಜಿ ಚಿನ್ನವನ್ನು ತಂಡ ದೋಚಿತ್ತು. ಏಪ್ರಿಲ್ 2 ರಂದು ರಾತ್ರಿ ಘಟನೆ ನಡೆದಿತ್ತು. ವಿ.ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೆಜಿಎಫ್​ನ ಜಯಪಾಲ್, ಜಯಪಾಲ್ ಕಾರು ಚಾಲಕ ಮುಕ್ರಂ‌ ಪಾಷಾ ಹಾಗೂ ತಮಿಳುನಾಡಿನ ಇಬ್ಬರು ಸೇರಿ ಆಂಧ್ರ ಹಾಗೂ ತಮಿಳುನಾಡು ಗಡಿ ನಾಯಕನೇರಿ ಘಾಟ್ ಬಳಿ ದರೋಡೆ ಮಾಡಿದ್ದರು. ಸದ್ಯ ವಿಕೋಟ ಪೊಲೀಸರಿಂದ ರಾಬರಿ ಮಾಡಿದ್ದ ಚಿನ್ನ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ: 2.735 ಕೆಜಿ ಗಾಂಜಾ ವಶಕ್ಕೆ

ಜಿಲ್ಲೆಯ ಬಂಗಾರಪೇಟೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಮಾಡಿ, ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಬೆಂಗಳೂರು ಮೂಲದ ಮೊಹಮ್ಮದ್ ಉಮರ್, ನಂದಕುಮಾರ್ ಮತ್ತು ಪ್ರಭು ಬಂಧಿತ ಆರೋಪಿಗಳು. ಬಂಧಿತರಿಂದ 2.735 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ
ದಾವಣಗೆರೆಯಲ್ಲೊಂದು ಅಮಾನುಷ ಕೃತ್ಯ: ಮರಕ್ಕೆ ಕಟ್ಟಿ ಚಿತ್ರಹಿಂಸೆ
ಗಾಳಿ ಆಂಜನೇಯ ಜಾತ್ರೆ: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ
ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ
ಅನಧಿಕೃತವಾಗಿ ಕಟ್ಟಡ ನಿರ್ಮಿಸಿದವರಿಗೆ ಶಾಕ್ ಕೊಟ್ಟ ಬಿಬಿಎಂಪಿ

ಕೋಲಾರ ಜಿಲ್ಲೆಯ ಕೆಜಿಎಫ್ ಪೊಲೀಸರ ಗಾಂಜಾ ಭೇಟೆ

ಕೆಜಿಎಫ್ ಪೊಲೀಸ್ ಭರ್ಜರಿ ಕಾರ್ಯಾಚರಣೆ ಮಾಡಿ ಎರಡು‌ ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ರಾಬರ್ಟ್‌ಸನ್‌ ಪೇಟೆ ಸಿ.ಪಿ.ಐ ನವೀನ್ ನೇತೃತ್ವದಲ್ಲಿ ಚಂದುನಾಯಕ್ ಹಾಗೂ ಸುನೀಲ್ ಕುಮಾರ್​​ರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಂದುವರೆ ಲಕ್ಷ ಮೌಲ್ಯದ 1.590.ಕೆಜಿ ಗಾಂಜಾ ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಇದನ್ನೂ ಓದಿ: ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್​ ಅತ್ಯಾಚಾರ: ಫೋನ್​ನಲ್ಲಿ ಹಲವು ಹುಡುಗಿಯರ ವಿಡಿಯೋ ಪತ್ತೆ

ಕ್ಯಾಸಂಬಳ್ಳಿ ಸಿಪಿಐ ರಂಗಶ್ಯಾಮಯ್ಯ ತಂಡದಿಂದ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬೀರನಕುಪ್ಪ ಗ್ರಾಮದ ಪ್ರಕಾಶ್ ಬಂಧಿತ ಆರೋಪಿ. ಬಂಧಿತನಿಂದ 50 ಸಾವಿರ ರೂ ಮೌಲ್ಯದ 465 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

ಮೇಣದ ಬತ್ತಿಯಿಂದ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಮೇಣದ ಬತ್ತಿಯಿಂದ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಇಂದು ಚಿಕಿತ್ಸೆ ಫಲಿಸದೆ  ಮೈಸೂರಿನ ಕೆ.ಆರ್​.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಡಗೂರು ನಿವಾಸಿ ಸಿದ್ದೇಶ್​(41) ಮೃತ ವ್ಯಕ್ತಿ.

ಇದನ್ನೂ ಓದಿ: ದಾವಣಗೆರೆಯಲ್ಲೊಂದು ಅಮಾನುಷ ಕೃತ್ಯ: ಮರಕ್ಕೆ ಕಟ್ಟಿ ಗುಪ್ತಾಂಗಕ್ಕೆ ಇರುವೆ ಬಿಟ್ಟು ಚಿತ್ರಹಿಂಸೆ

5 ದಿನಗಳ ಹಿಂದೆ ಮಲಗಿದ್ದಾಗ ಮೇಣದ ಬತ್ತಿಯ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಸಿದ್ದೇಶ್​ನನ್ನು ಮೈಸೂರಿನ ಕೆ.ಆರ್​.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇಂದು ಮೈಸೂರಿನ ಕೆ.ಆರ್​.ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.