ಕೋಲಾರ: ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿ ರೈತರಿಗೆ ವಂಚನೆ, ಜಾಣ ಕುರುಡರಂತೆ ಕುಳಿತ ಕೃಷಿ ಇಲಾಖೆ
ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಿ ಅಂಗಡಿಗಳಿಂದ ರೈತರಿಗೆ ವಂಚನೆಯಾಗುತ್ತಿದೆ ಎನ್ನಲಾಗುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿಯಲ್ಲಿರುವ ರಸಗೊಬ್ಬರ ಅಂಗಡಿಗಳು ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿವೆ. 270 ರೂ ಬೆಲೆಗೆ ಮಾರಾಟ ಮಾಡಬೇಕಾದ ಯೂರಿಯಾ ಗೊಬ್ಬರವನ್ನು 350 ರಿಂದ 400ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.
ಕೋಲಾರ, ಸೆ.06: ರಸಗೊಬ್ಬರಕ್ಕೆ ವ್ಯಾಪಕ ಬೇಡಿಕೆ ಇರುವ ಕಾರಣ ಕೆಲ ಅಂಗಡಿಗಳು ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಿ ರೈತರಿಗೆ ವಂಚಿಸುತ್ತಿವೆ. ಜಿಲ್ಲೆಯಲ್ಲಿ ರಸಗೊಬ್ಬರ ಅಂಗಡಿಗಳಿಂದ ರೈತರಿಗೆ ವಂಚನೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. 270 ರೂ ಬೆಲೆಗೆ ಮಾರಾಟ ಮಾಡಬೇಕಾದ ಯೂರಿಯಾ ಗೊಬ್ಬರವನ್ನು 350 ರಿಂದ 400ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಕೃತಕ ಅಭಾವ ಸೃಷ್ಟಿಸಿ ರೈತರಿಂದ ಸುಲಿಗೆ ಮಾಡಲಾಗುತ್ತಿದೆ. ಯೂರಿಯಾ ಸರಬರಾಜಾಗುತ್ತಿಲ್ಲ ಎಂದು ಹೇಳಿ ರೈತರಿಗೆ ವಂಚನೆ ಮಾಡಲಾಗುತ್ತಿದೆ ಎಂದು ರೈತರು ಟಿವಿ9 ಮುಂದೆ ಅಳಲು ತೋಡಿಕೊಂಡಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿಯಲ್ಲಿರುವ ರಸಗೊಬ್ಬರ ಅಂಗಡಿಗಳು ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿವೆ. ಗೌನಿಪಲ್ಲಿಯಲ್ಲಿರುವ ಪೆದ್ದೂರು ಮಂಜುನಾಥ್ ರೆಡ್ಡಿ ಮಾಲೀಕತ್ವದ ರಾಘವೇಂದ್ರ ಆಗ್ರೋ ಟ್ರೇಡರ್ಸ್ನಲ್ಲಿ ಒಂದು ಮೂಟೆ ರಸಗೊಬ್ಬರಕ್ಕೆ 80 ರಿಂದ 130 ರೂಪಾಯಿ ಹೆಚ್ಚಳ ಮಾಡಿ ಮಾರಾಟ ಮಾಡಲಾಗುತ್ತಿದೆ. ಆಧಾರ್ ಕಾರ್ಡ್ ಇದ್ದರೆ ಒಂದು ಮೂಟೆ 350 ರೂ. ಆಧಾರ್ ಇಲ್ಲವೆಂದರೆ 400 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ರೈತರು ಬೆಳೆದ ಬೆಳೆಗಳಿಗೆ ಬೆಲೆ ಸಿಗದೆ ಕಂಗಾಲಾಗಿದ್ದರೂ ರೈತರ ಬಳಿ ಸುಲಿಗೆ ಮಾಡಲಾಗುತ್ತಿದೆ. ಎಲ್ಲಾ ಗೊತ್ತಿದ್ದು ಜಾಣ ಕುರುಡರಂತೆ ಕೃಷಿ ಇಲಾಖೆ ಅಧಿಕಾರಿಗಳು ವರ್ತಿಸುತ್ತಿದ್ದಾರೆ. ರಸಗೊಬ್ಬರ ಹೆಸರಲ್ಲಿ ಸುಲಿಗೆ ಮಾಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳಿ ಎಂದು ರೈತರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ರೈತರನ್ನು ಕೋಟ್ಯಾಧಿಪತಿ ಮಾಡಿದ್ದ ಟೊಮೆಟೊ ಕೆಜಿಗೆ 15 ರೂ. ಕೋಲಾರದ ಎಪಿಎಂಸಿಯಲ್ಲಿ ಬೆಲೆ ಕಳೆದುಕೊಂಡ ಕೆಂಪು ಸುಂದರಿ
ಅಕ್ರಮ ಪಡಿತರ ಅಕ್ಕಿ ಸಾಗಾಟ, 150 ಕ್ವಿಂಟಾಲ್ ಜಪ್ತಿ
ಕೊಪ್ಪಳ ಜಿಲ್ಲೆ ಮುನಿರಾಬಾದ್ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಅಕ್ರಮ ಪಡಿತರ ಅಕ್ಕಿ ಸಾಗಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ 150 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ ಮಾಡಿದ್ದಾರೆ. ಹುಬ್ಬಳ್ಳಿಯಿಂದ ಹೊಸಪೇಟೆ ಕಡೆಗೆ ಪಡಿತರ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಮುನಿರಾಬಾದ್ ಬಳಿಯ NH50 ರಸ್ತೆಯಲ್ಲಿ ಪೊಲೀಸರು ದಾಳಿ ಮಾಡಿದ್ದು ಲಾರಿ ಸಮೇತ ಚಾಲಕ ಮಂಜುನಾಥ್ನನ್ನು ಬಂಧಿಸಿದ್ದಾರೆ. ಅಂದಾಜು 3.45 ಲಕ್ಷ ಮೌಲ್ಯದ ಅಕ್ಕಿ, 8 ಲಕ್ಷ ಮೌಲ್ಯದ ಲಾರಿ ಜಪ್ತಿ ಮಾಡಲಾಗಿದೆ. ಬಂಧಿತ ಮಂಜುನಾಥ ಕುಂದೂರು ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ತರ್ಲಘಟ್ಟ ನಿವಾಸಿ. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ