ಕೋಲಾರ: ಲಾಂಗು, ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಯುವಕರ ಬಂಧನ
ಲಾಂಗು, ಮಚ್ಚು ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದ ಇಬ್ಬರು ಯುವಕರನ್ನು ಪೊಲೀಸರು ಕೋಲಾರ ತಾಲೂಕಿನ ನರಸಾಪುರದಲ್ಲಿ ಬಂಧಿಸಿದ್ದಾರೆ. ಅಕ್ರಮ ಶಸ್ತಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಕೋಲಾರ ನ.20: ಲಾಂಗು, ಮಚ್ಚು ಹಿಡಿದು ರೀಲ್ಸ್ (Reels) ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ (Social Media) ಪೋಸ್ಟ್ ಹಾಕಿದ್ದ ಇಬ್ಬರು ಯುವಕರನ್ನು ಪೊಲೀಸರು (Police) ಕೋಲಾರ ತಾಲೂಕಿನ ನರಸಾಪುರದಲ್ಲಿ ಬಂಧಿಸಿದ್ದಾರೆ. ಅಕ್ರಮ ಶಸ್ತಾಸ್ತ್ರ ಕಾಯ್ದೆ ಪ್ರಕರಣದಡಿಯಲ್ಲಿ ನರಸಾಪುರದ ವೇಣು ಮತ್ತು ಪವನ್ ಕುಮಾರ್ ಅನ್ನು ಬಂಧಿಸಲಾಗಿದೆ. ಇತ್ತೀಚಿಗೆ ಯುವಕರು ಅಪರಾಧ ಪ್ರಕರಣಗಳಲ್ಲಿ ಹಚ್ಚಾಗಿ ಕಾಣಿಸಿಕೊಂಡಿದ್ದರು. ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಟ್ಟಿದೆ.
ನಡು ರಸ್ತೆಯಲ್ಲಿ ಚಾಕು ಹಿಡಿದು ಓಡಾಡುವ ವ್ಯಕ್ತಿ
ಹುಬ್ಬಳ್ಳಿ: ನಗರದ ಧೀನಬಂದು ಕಾಲೋನಿಯ ನಡು ರಸ್ತೆಯಲ್ಲಿ ವಿನೋದ್ ನಡುಗಟ್ಟಿ ಎಂಬಾತ ಚಾಕು ಹಿಡಿದು ಓಡಾಡಿದ್ದು, ನಿವಾಸಿಗಳು ಆತಂಕಗೊಂಡಿದ್ದಾರೆ. ವಿನೋದ್ ಕಳೆದ ಒಂದು ವಾರದಿಂದ ಕುಡಿದ ಮತ್ತಿನಲ್ಲಿ ಚಾಕು ಹಿಡಿದು ಓಡಾಡುತ್ತಿದ್ದಾನೆ. ಧೀನಬಂದು ಕಾಲೋನಿಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಸೂಕ್ತ ಕ್ರಮ ತಗೆದುಕೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ