AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ತಾಲೂಕು ಕಚೇರಿ ವಿರುದ್ಧ ಸಾರ್ವಜನಿಕರಿಂದ ಸರಣಿ ದೂರು: ಲೋಕಾಯುಕ್ತ ದಿಢೀರ್ ದಾಳಿ

ಲಂಚ ಕೊಡದೇ ಯಾವುದೇ ಕೆಲಸ ಆಗುವುದಿಲ್ಲ ಎಂಬ ದೂರು ಹಿನ್ನೆಲೆ ಕೋಲಾರ ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳಿಂದ ತಹಶೀಲ್ದಾರ್ ಹರ್ಷವರ್ಧನ್ ಮತ್ತು ತಾಲೂಕು ಕಚೇರಿ ಎಲ್ಲಾ ಕೊಠಡಿಯಲ್ಲಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ. ದಾವಣಗೆರೆಯಲ್ಲಿ ವಿಕಲಚೇತನರಿಂದ ಲಂಚ ಸ್ವೀಕರಿಸುವಾಗ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿರುವಂತಹ ಘಟನ ನಡೆದಿತ್ತು.

ಕೋಲಾರ ತಾಲೂಕು ಕಚೇರಿ ವಿರುದ್ಧ ಸಾರ್ವಜನಿಕರಿಂದ ಸರಣಿ ದೂರು: ಲೋಕಾಯುಕ್ತ ದಿಢೀರ್ ದಾಳಿ
ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Feb 12, 2024 | 4:25 PM

Share

ಕೋಲಾರ, ಫೆಬ್ರವರಿ 12: ಸಾರ್ವಜನಿಕರಿಂದ ತಾಲೂಕು ಕಚೇರಿ ವಿರುದ್ಧ ಸರಣಿ ದೂರು ಬಂದ ಹಿನ್ನಲೆ ಸೋಮವಾರ ಲೋಕಾಯುಕ್ತ (Lokayukta) ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಲೋಕಾಯುಕ್ತ ಮತ್ತು ಕೋಲಾರ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ಲಂಚ ಕೊಡದೇ ಯಾವುದೇ ಕೆಲಸ ಆಗುವುದಿಲ್ಲ ಎಂದು ದೂರು ನೀಡಲಾಗಿದೆ. ಲೋಕಾಯುಕ್ತ ಅಧಿಕಾರಿಗಳಿಂದ ತಹಶೀಲ್ದಾರ್ ಹರ್ಷವರ್ಧನ್ ಮತ್ತು ತಾಲೂಕು ಕಚೇರಿ ಎಲ್ಲಾ ಕೊಠಡಿಯಲ್ಲಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ.

ವಿಕಲಚೇತನರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಆಡಳಿತಾಧಿಕಾರಿ 

ದಾವಣಗೆರೆ: ವಿಕಲಚೇತನರಿಂದ ಲಂಚ ಸ್ವೀಕರಿಸುವಾಗ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಬಸವನಹಳ್ಳಿ ಗ್ರಾಮದ ನರಸಿಂಹ ಸ್ವಾಮೀ‌ ದೇವಸ್ಥಾನದ ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದಿದ್ದಾರೆ. ನ್ಯಾಮತಿಯ ಗ್ರಾಮ ಆಡಳಿತಾಧಿಕಾರಿ ಗಣೇಶ್ ಕೆಜಿ ಲೋಕಾಯುಕ್ತರ ಬಲೆಗೆ ಬಿದ್ದ ಅಧಿಕಾರಿ.

ಇದನ್ನೂ ಓದಿ:  Lokayukta Raids: ಬೆಂಗಳೂರು ಸೇರಿ ರಾಜ್ಯದ 63 ಕಡೆ ಲೋಕಾಯುಕ್ತ ದಾಳಿ

ಕುಂಕುವಾ ಗ್ರಾಮದ ವೀರೇಶ್ ಅವರ ಸಹೋದರ ಹರ್ಷ ಎಂಬುವರಿಗೆ ಅಂಗವಿಕ ಪ್ರಮಾಣ ಪತ್ರ ನೀಡಲು ಆರು ಸಾವಿರಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ ಗಣೇಶ್. ಐದು ಸಾವಿರ ರೂಪಾಯಿ‌ ಲಂಚ ಸ್ವೀಕರಿಸುವಾಗ ಲೋಕಾಯಕ್ತರ ಬಲೆಗೆ ಬಿದಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪೂರೆ ನೇತ್ರತ್ವದಲ್ಲಿ ಡಿಎಸ್ಪಿ ಕೆ. ಕಲಾವತಿ, ಇನ್ಸ್ ಪೇಕ್ಟರ್ ಗಳಾದ ಎಚ್ ಎಸ್ ರಾಷ್ಟ್ರಪತಿ, ಮುಧುಮೂದನ್ ದಾಳಿ ಮಾಡಲಾಗಿತ್ತು.

ಸ್ಟೋನ್ ಕ್ರಷರ್ ಮಾಲೀಕನ ಮನೆ ಹಾಗೂ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ

ಉಡುಪಿ: ಕಾರ್ಕಳ ತಾಲೂಕಿನ ನಿಟ್ಟೆ ಮಹಾಗಣಪತಿ ಸ್ಟೋನ್ ಕ್ರಷರ್ ಮಾಲೀಕನ ಮನೆ ಹಾಗೂ ಕಚೇರಿಗೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಎರಡು ಇನೋವಾ ಕಾರಿನಲ್ಲಿ ಬಂದಿದ್ದ 12 ಜನ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದರು. ತೀರ್ಥಹಳ್ಳಿಯ ನ್ಯಾಷನಲ್ ಕನ್ ಸ್ಟ್ರಕ್ಷನ್​ನಲ್ಲಿ ಅಕ್ರಮದ ಅರೋಪದ ಹಿನ್ನಲೆಯಲ್ಲಿ ಇಡಿ ದಾಳಿ ನಡೆದಿತ್ತು.

ಇದನ್ನೂ ಓದಿ: Lokayukta Raid: ಕರ್ನಾಟಕದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ, ಅಧಿಕಾರಿಗಳು ಶಾಕ್

ನ್ಯಾಷನಲ್ ಕನ್ ಸ್ಟ್ರಕ್ಷನ್​ಗೆ ಗುಂಡ್ಯಡ್ಕದ ದಿನೇಶ್ ಶೆಟ್ಟಿ ಮಾಲೀಕತ್ವದ ಮಹಾಗಣಪತಿ ಕನ್ ಸ್ಟ್ರಕ್ಷನ್ ಮೆಟೀರಿಯಲ್ಸ್ ಪೂರೈಸುತ್ತಿತ್ತು. ಈ ಕಾರಣಕ್ಕಾಗಿ ದಾಳಿ ನಡೆಸಿದ ಅಧಿಕಾರಿಗಳು ಮಾಲೀಕ ಮತ್ತು ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಕ್ರಷ‌ರ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ, ಕ್ರಷ‌ರ್ ಮಾಲೀಕನ ಕಾರ್ಕಳ ಸಮೀಪದ ಸುಧೀಂದ್ರ ರೆಸಿಡೆನ್ಸಿಯಲ್ಲಿರುವ ಪ್ಲಾಟ್ ಮೇಲೂ ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿತ್ತು. ಸತತ ನಾಲ್ಕು ಗಂಟೆಗಳಿಂದ ದಾಖಲೆಗಳ ಪರಿಶೀಲನೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ