Kolar: ಮಾಲೂರಿನ ಶಾಲೆಯಲ್ಲಿ ತಮಿಳುನಾಡಿನ ಮಕ್ಕಳ ಕನ್ನಡ ಪ್ರೀತಿ; ಭಾಷಾ ಸಾಮರಸ್ಯಕ್ಕೆ ಇಲ್ಲಿದೆ ಸಾಕ್ಷಿ

ಕೋಲಾರದ ಮಾಲೂರು ತಾಲ್ಲೂಕಿನ ದಿನ್ನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಡಿ ಭಾಗದಲ್ಲಿರುವ ಹೊಸಮನೆಗಳು ಗ್ರಾಮದಲ್ಲಿನ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಗೆ ನೆರೆಯ ತಮಿಳುನಾಡಿನ ಹಳ್ಳಿಯಿಂದ 4 ವಿದ್ಯಾರ್ಥಿಗಳು ಪಾಠ ಕಲಿಯಲು ಬರುತ್ತಾರೆ.

Kolar: ಮಾಲೂರಿನ ಶಾಲೆಯಲ್ಲಿ ತಮಿಳುನಾಡಿನ ಮಕ್ಕಳ ಕನ್ನಡ ಪ್ರೀತಿ; ಭಾಷಾ ಸಾಮರಸ್ಯಕ್ಕೆ ಇಲ್ಲಿದೆ ಸಾಕ್ಷಿ
ಮಾಲೂರಿನ ಕನ್ನಡ ಶಾಲೆಯ ವಿದ್ಯಾರ್ಥಿಗಳು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 02, 2021 | 6:41 PM

ಕೋಲಾರ: ನವೆಂಬರ್​ ತಿಂಗಳು ಬಂತೆಂದರೆ ಸಾಕು ಕರ್ನಾಟಕದಲ್ಲಿ ಕನ್ನಡತನ ಅನ್ನೋದು ಅತಿಹೆಚ್ಚು ಜಾಗೃತವಾಗುತ್ತದೆ. ಕನ್ನಡ ಬೇರೆ ಜನರನ್ನ ಹೇಗೆಲ್ಲಾ ತನ್ನತ್ತ ಆಕರ್ಷಿಸುತ್ತಿದೆ ಅನ್ನೋದರ ಕುರಿತು ಒಂದು ಸುತ್ತು ಅವಲೋಕನ ಮಾಡಲು ಶುರುಮಾಡುತ್ತಾರೆ. ಅದೇ ರೀತಿ ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನ ಗಡಿಭಾಗದಲ್ಲಿರುವ ಕೋಲಾರದಲ್ಲಿ ತಮಿಳು ಮಕ್ಕಳು ಪ್ರೀತಿಯಿಂದ ಕನ್ನಡ ಕಲಿಯುತ್ತಿರುವ ಕುರಿತು ಒಂದು ವರದಿ ಇಲ್ಲಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ದಿನ್ನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಡಿ ಭಾಗದಲ್ಲಿರುವ ಹೊಸಮನೆಗಳು ಗ್ರಾಮದಲ್ಲಿನ ಕರ್ನಾಟಕ ರಾಜ್ಯದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಗೆ ಕೂಗಳತೆ ದೂರದ ನೆರೆಯ ತಮಿಳುನಾಡು ರಾಜ್ಯದ ಹಳ್ಳಿಯಿಂದ 4 ಮಂದಿ ವಿದ್ಯಾರ್ಥಿಗಳು ಕನ್ನಡ ಶಾಲೆಯಲ್ಲಿ ಸೇರಿ, ಕನ್ನಡ ಕಲಿಯುತ್ತಿರುವುದು ಎರಡು ರಾಜ್ಯಗಳ ಬಾಂಧವ್ಯ ಹಾಗೂ ಭಾಷಾ ಸಾಮರಸ್ಯಕ್ಕೆ ಕನ್ನಡಿ ಹಿಡಿದಂತಿದೆ.

ಕನ್ನಡ ತಮಿಳು ಭಾಷಾ ಸಾಮರಸ್ಯ: ಕರ್ನಾಟಕ- ತಮಿಳುನಾಡು ರಾಜ್ಯಗಳ ಗಡಿಭಾಗದ ಜಿಲ್ಲೆ ಕೋಲಾರದ ಮಾಲೂರು ತಾಲ್ಲೂಕಿನ ಮಾಸ್ತಿ ಹೋಬಳಿಯ ದಿನ್ನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದಿನ್ನಹಳ್ಳಿ ಹೊಸಮನೆಗಳು ಕಾಲೋನಿಯ ಶಾಲೆಗೆ ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಹೊಸೂರು ತಾಲ್ಲೂಕಿನ “ಚಾಪರಪಲ್ಲಿ” ಗ್ರಾಮದ ನಾಲ್ಕು ಜನ ವಿದ್ಯಾರ್ಥಿಗಳು ಕನ್ನಡ ಕಲಿಯಲು ಬರುತ್ತಿದ್ದಾರೆ ಅನ್ನೋದು ವಿಶೇಷ. ನಾಲ್ಕು ಜನರು ನಿತ್ಯ ಉತ್ಸಾಹದಿಂದ ಶಾಲೆಗೆ ಬರುತ್ತಾರೆ. ಇವರು ಕನ್ನಡ ಶಾಲೆಗೆ ಬರುತ್ತಾರೆ ಅಂದರೆ ಅಲ್ಲಿ ಶಾಲೆ ಇಲ್ಲ ಎಂದಲ್ಲ. ಅಲ್ಲಿ ಶಾಲೆ ಇದ್ದರೂ ಕನ್ನಡ ಶಾಲೆಯಲ್ಲಿ ಕಲಿಯಬೇಕೆನ್ನುವ ದೃಷ್ಟಿಯಿಂದಲೇ ಇಲ್ಲಿಗೆ ಬರುತ್ತಾರೆ.

Kolar kannada school

ಮಾಲೂರಿನ ಕನ್ನಡ ಶಾಲೆಯ ವಿದ್ಯಾರ್ಥಿಗಳು

ಒಂದನೇ ತರಗತಿಗೆ ಪ್ರಜ್ವಲ್, ಶಂಕರನ್ ದಾಖಲಾಗಿದ್ದರೆ, ಎರಡನೇ ತರಗತಿಗೆ ನಿತಿನ್ ಹಾಗೂ 4ನೇ ತರಗತಿಗೆ ದೀಪ ಎನ್ನುವ ವಿದ್ಯಾರ್ಥಿಗಳು ಕನ್ನಡ ಕಲಿಯಲು ಕನ್ನಡ ಶಾಲೆಗೆ ಬರುತ್ತಿದ್ದಾರೆ. ಕನ್ನಡವನ್ನು ಸ್ಪಷ್ಟವಾಗಿ ಬರೆಯಲು, ಓದಲು ಕಲಿತಿದ್ದಾರೆ. ಈ ಶಾಲೆಯ ಮುಖ್ಯಶಿಕ್ಷಕರಾದ ಪಿ. ಶ್ರೀನಾಥರವರು ಹೇಳುವಂತೆ ಈ ನಾಲ್ಕು ಮಂದಿ ವಿದ್ಯಾರ್ಥಿಗಳು ಬಹಳ ಚೆನ್ನಾಗಿ ನಮ್ಮ ಶಾಲೆಯಲ್ಲಿ ಕನ್ನಡ ಕಲಿಯುತ್ತಿದ್ದು, ಹುಮ್ಮಸ್ಸಿನಿಂದ ಶಾಲೆಗೆ ಬರುತ್ತಾರೆ. ಒಟ್ಟು ನಮ್ಮ ಶಾಲೆಯಲ್ಲಿ 11 ಮಂದಿ ವಿದ್ಯಾರ್ಥಿಗಳಿದ್ದು, ಈ ನಾಲ್ಕು ಮಂದಿ ನೆರೆಯ ತಮಿಳುನಾಡಿನಿಂದ ಬಂದು ನಮ್ಮ ಭಾಷೆ ಕಲಿಯುತ್ತಿದ್ದಾರೆ. ಎಲ್ಲಾ ಮಕ್ಕಳೊಡನೆ ಉತ್ತಮ ಬಾಂಧವ್ಯ ಹೊಂದಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ಯಾವುದೇ ರೀತಿಯಾದ ಬೇದಭಾವವಿಲ್ಲವೆನ್ನುತ್ತಾರೆ.

ಉತ್ಸಾಹದಿಂದ ಕಲಿಯುವ ಮಕ್ಕಳಿಗೆ ಸಿಗುತ್ತಿದೆ ಎಲ್ಲಾ ಸೌಲಭ್ಯಗಳು!: ಇನ್ನು, ಹೊರ ರಾಜ್ಯದಿಂದ ಗಡಿಯಲ್ಲಿನ ಗ್ರಾಮಗಳಿಂದ ಕನ್ನಡ ಶಾಲೆಗೆ ಬರುವ ಮಕ್ಕಳು ಉತ್ಸಾಹದಿಂದ ಕನ್ನಡ ಕಲಿಯುತ್ತಿದ್ದಾರೆ ಅನ್ನೋದೆ ನಮ್ಮ ರಾಜ್ಯದ ಹೆಮ್ಮೆ. ಹೀಗಿರುವಾಗ ಮಕ್ಕಳ ಕಲಿಕೆಗೆ ಬೇಕಾದ ಅಗತ್ಯ ಪೂರಕ ವಾತಾವರಣ ನಿರ್ಮಾಣ ಮಾಡುವುದು ನಮ್ಮ ಗುರಿ. ಹಾಗಾಗಿ ಮಕ್ಕಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು, ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಮಕ್ಕಳಿಗೆ ನೀಡಲಾಗುತ್ತಿದೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಬೇಕು ಅನ್ನೋದು ನಮ್ಮ ಆಶಯ ಅನ್ನೋದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿಯರವ ಮಾತು.

(ವಿಶೇಷ ವರದಿ : ರಾಜೇಂದ್ರ ಸಿಂಹ)

ಇದನ್ನೂ ಓದಿ: Kolar Cyber Crime: ಭಾರತೀಯ ಸೇನೆ ಹೆಸರಿನಲ್ಲಿ ಕೋಲಾರ ಎಪಿಎಂಸಿ ಮಂಡಿ ಮಾಲೀಕನಿಗೆ ವಂಚನೆ!

Karnataka Rajyotsava 2021: ಕನ್ನಡ ಹಿರಿಮೆಯನ್ನು ಜಗತ್ತಿಗೆ ಸಾರಿದ ಶ್ರೇಷ್ಠರು ಇವರು

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ