ಕೋಲಾರದಿಂದ ಹೊರಟು ನಾಪತ್ತೆಯಾಗಿದ್ದ ಟೊಮೆಟೊ ಲಾರಿ ಗುಜರಾತ್ನಲ್ಲಿ ಪತ್ತೆ
ಕೋಲಾರದಿಂದ ಹೊರಟು ನಾಪತ್ತೆಯಾಗಿದ್ದ ಟೊಮೆಟೊ ಹೊತ್ತ ಲಾರಿ ಗುಜರಾತ್ನ ಅಹಮದಾಬಾದ್ನಲ್ಲಿ ಪತ್ತೆಯಾಗಿದೆ.
ಕೋಲಾರ, (ಜುಲೈ 31): ಕೋಲಾರದ(Kolar) ಎಪಿಎಂಸಿಯಿಂದ ಸುಮಾರು 21 ಲಕ್ಷ ರೂ. ಮೌಲ್ಯದ ಟೊಮೆಟೊ (Tomato) ಹೊತ್ತು ನಾಪತ್ತೆಯಾಗಿದ್ದ ಲಾರಿ ಕೊನೆಗೂ ಗುಜರಾತಿನಲ್ಲಿ ಪತ್ತೆಯಾಗಿದೆ. ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ಹೋಗಿ ಬೇಕಿದ್ದ ಲಾರಿ ಗುಜರಾತ್ನ ಅಹಮದಾಬಾದ್ನಲ್ಲಿ ಸಿಕ್ಕಿದ್ದು, ಲಾರಿ ಚಾಲಕ ಟೊಮೆಟೊವನ್ನು ಅರ್ಧ ಬೆಲೆಗೆ ಮಾರಾಟ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಚಾಲಕ ಅನ್ವರ್ ಲಾರಿಯಲ್ಲಿ ಅಳವಡಿಸಿದ್ದ ಜಿಪಿಎಸ್ ಕಿತ್ತೆಸೆದು ಅಹಮದಾಬಾದ್ಗೆ ಚಲಾಯಿಸಿಕೊಂಡು ಹೋಗಿದ್ದಾನೆ. ಬಳಿಕ ಅಲ್ಲಿ ಟೊಮೆಟೊವನ್ನು ಅರ್ಧ ದರಕ್ಕೆ ಮಾರಾಟ ಮಾಡಿ ಇದೀಗ ತಲೆಮರಿಸಿಕೊಂಡಿದ್ದಾನೆ.
ಇದನ್ನೂ ಓದಿ: Tomato: ಟೊಮೆಟೊ ತುಂಬಿಕೊಂಡು ಕೋಲಾರದಿಂದ ಹೊರಟಿದ್ದ ಲಾರಿ ನಾಪತ್ತೆ, ದೂರು ದಾಖಲು
ಮೆಹತ್ ಟ್ರಾನ್ಸ್ ಪೋರ್ಟ್ ಮಾಲೀಕ ಸಾಧಿಕ್, ಕಳೆದ ರಾತ್ರಿಯೇ ಅಹಮದಾಬಾದ್ನತ್ತ ಹೊರಟ್ಟಿದ್ದು, ಲಾರಿ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಇನ್ನು ಟೊಮೆಟೊ ಮಾರಾಟದಿಂದ ಬಂದ ಹಣದೊಂದಿಗೆ ನಾಪತ್ತೆಯಾಗಿರುವ ಚಾಲಕ ಅನ್ವರ್ ವಿರುದ್ದ ಅಹಮದಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಮಾಲೀಕ ಸಾಧಿಕ್ ನಿರ್ಧರಿಸಿದ್ದಾರೆ.
ಟೊಮೆಟೋ ದರ ಭಾರೀ ಏರಿಕೆ ಕಾಣುತ್ತಿದ್ದಂತೆ ಜಮೀನಿನಲ್ಲಿದ್ದ ಬೆಳೆ ಕಳ್ಳತನದ ಪ್ರಕರಣಗಳು ವರದಿಯಾಗುತ್ತಿವೆ. ಇದರ ಮಧ್ಯೆಯೇ ಕೋಲಾರದ ಎಪಿಎಂಸಿಯಿಂದ ಸುಮಾರು .21 ಲಕ್ಷ ಮೌಲ್ಯದ ಟೊಮೆಟೊ ಹೊತ್ತು ರಾಜಸ್ಥಾನ ಕಡೆ ಹೊರಟಿದ್ದ ಲಾರಿ ನಾಪತ್ತೆಯಾಗಿತ್ತು. ಕೋಲಾರ ಎಪಿಎಂಸಿ ಮಾರುಕಟ್ಟೆಯ ಮುನಿರೆಡ್ಡಿ ಎಂಬುವರು ಸುಮಾರು 21 ಲಕ್ಷ ರೂ. ಮೌಲ್ಯದ ಸುಮಾರು 750 ಕ್ರೇಟ್ (11 ಟನ್) ಟೊಮೆಟೊವನ್ನು ಜು.27ರಂದು ರಾಜಸ್ಥಾನದ ಜೈಪುರಕ್ಕೆ ಮೆಹತ್ ಟ್ರಾನ್ಸ್‌ಪೋರ್ಚ್‌ಗೆ ಸೇರಿದ ಲಾರಿಯ ಮೂಲಕ ಕಳುಹಿಸಿಕೊಟ್ಟಿದ್ದರು. ಈ ಸಂಬಂಧ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 9:17 am, Mon, 31 July 23