AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಶ್ರಾವಣ ಮಾಸದ ಕೊನೆಯ ಶನಿವಾರ; ಬಂಗಾರ ತಿರುಪತಿ ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ

ಇಂದು ಶ್ರಾವಣ ಮಾಸದ ಕೊನೆಯ ಶನಿವಾರ ಆದ್ದರಿಂದ ವೆಂಕಟೇಶ್ವರಸ್ವಾಮಿ ದೇವಾಲಯಗಳಲ್ಲಿ ಭಕ್ತರ ದಂಡೇ ಹರಿದು ಬರುತ್ತಿದೆ. ಹಾಗೆ ಚಿನ್ನದ ನಾಡು ಕೋಲಾರದಲ್ಲಿನ ಬಂಗಾರ ತಿರುಪತಿಯ ವೆಂಕರಮಣ ಸ್ವಾಮಿಯನ್ನು ಕಣ್ತುಂಬಿಕೊಂಡ ಭಕ್ತರು ಸ್ವಾಮಿಯ ಭಕ್ತಿಯಲಿ ಮಿಂದೆದ್ದು ಏಳುಕುಂಡಲವಾಡ- ವೆಂಕಟರಮಣನ, ಗೋವಿಂಧ-ಗೋವಿಂಧ ಅಂಥ ಸ್ಮರಣೆ ಮಾಡುತ್ತಿದ್ದಾರೆ. ಈ ಕುರಿತು ಇಲ್ಲಿದೆ ವಿವರ.

ಕೋಲಾರ: ಶ್ರಾವಣ ಮಾಸದ ಕೊನೆಯ ಶನಿವಾರ; ಬಂಗಾರ ತಿರುಪತಿ ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ
ಬಂಗಾರ ತಿರುಪತಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Sep 09, 2023 | 5:38 PM

Share

ಕೋಲಾರ, ಸೆ.09: ದೇವರ ದರ್ಶನಕ್ಕಾಗಿ ಸಾಲಾಗಿ ನಿಂತಿರುವ ಭಕ್ತರು, ಹರಕೆ ತೀರಿಸಲು ಮುಡಿಕೊಟ್ಟು ಕಲ್ಯಾಣಿಯಲ್ಲಿ ಮುಳುಗೇಳುತ್ತಿರುವ ಭಕ್ತರು, ಮತ್ತೊಂದೆಡೆ ಭಕ್ತರಿಂದ ದೇವರ ಸ್ಮರಣೆ ಇಂಥಾದೊಂದು ದೃಷ್ಯಗಳು ನಮಗೆ ಕಂಡು ಬಂದಿದ್ದು ಕೋಲಾರ ಜಿಲ್ಲೆ ಕೆಜಿಎಫ್ (KGF)​ ತಾಲ್ಲೂಕು ಗುಟ್ಟಹಳ್ಳಿಯ ಬಂಗಾರ ತಿರುಪತಿ ದೇವಾಲಯದಲ್ಲಿ. ಈ ಬಂಗಾರ ತಿರುಪತಿಯ ವೆಂಕಟರಮಣಸ್ವಾಮಿಯನ್ನು ಏಕಾಂತ ಶ್ರೀನಿವಾಸ, ಬಂಗಾರಗಿರಿವಾಸ, ನೇತ್ರವೆಂಕಟರಣಸ್ವಾಮಿ ಎಂದು ಹಲವು ಹೆಸರುಗಳಿಂದ ಕರೆಯಲಾಗುತ್ತದೆ. ಇಂಥ ಪ್ರಸಿದ್ದಿ ಪಡೆದ ದೇವಾಲಯದಲ್ಲಿ ಇಂದು ಶ್ರಾವಣ ಮಾಸದ ಕೊನೆಯ ಶನಿವಾರದ ಅಂಗವಾಗಿ ಬಂಗಾರ ತಿರುಪತಿ ನೇತ್ರ ವೆಂಕಟರಮಣ ಸ್ವಾಮಿಯ ದೇವಾಲಯದಲ್ಲಿ ಭಕ್ತ ಸಾಗವೇ ಹರಿದು ಬಂದಿತ್ತು.

ಮುಂಜಾನೆಯಿಂದಲೇ ಭಕ್ತರು ವೆಂಕಟರಮಣ ಸ್ವಾಮಿಯನ್ನು ಕಣ್ತುಂಬಿಕೊಳ್ಳಲು ಜನ ಸಾಗರವೇ ಸಾಲುಗಟ್ಟಿ ನಿಂತಿತ್ತು. ಮುಂಜಾನೆ ಮೂರು ಗಂಟೆಯಿಂದ ದೇವಾಲಯದಲ್ಲಿ ವಿಶೇಷ ಅಭಿಷೇಕ, ದೇವರಿಗೆ ಅಲಂಕಾರ, ಹಾಗೂ ಪೂಜೆಗಳು ನಡೆಯುತ್ತಿವೆ. ಬಂಗಾರ ತಿರುಪತಿ ಎಂದು ಕರೆಯಲಾಗುವ ಈ ಕ್ಷೇತ್ರ ಬೃಗುಮಹರ್ಷಿಗಳು ತಪಸ್ಸು ಮಾಡಿದ ಸ್ಥಳವಾಗಿದ್ದು, ಈ ಪ್ರದೇಶದಲ್ಲಿ ಬೃಗು ಮಹರ್ಷಿಗಳಿಗೆ ದರ್ಶನ ನೀಡಲು ಶ್ರೀವೆಂಕಟೇಶ್ವರ ಸ್ವಾಮಿಯು ನೇತ್ರದಲ್ಲಿ ದರ್ಶನ ನೀಡಿದ್ದಾನೆಂಬ ಪ್ರತೀತಿ ಇದೆ. ಈ ಸಲುವಾಗಿಯೇ ಇಲ್ಲಿ ಆರು ಕಿಂಡಿಗಳಲ್ಲಿ ಒಂದೇ ಕಣ್ಣಿನಿಂದ ಭಕ್ತರು ವೆಂಕಟೇಶ್ವರಸ್ವಾಮಿಯ ದರ್ಶನ ಮಾಡುತ್ತಾರೆ. ಇದರ ಸಲುವಾಗಿ ನೇತ್ರವೆಂಕಟೇಶ್ವರ ಸ್ವಾಮಿ ಅನ್ನೋ ಹೆಸರು ಕೂಡ ಈ ಕ್ಷೇತ್ರಕ್ಕಿದೆ.

ಇದನ್ನೂ ಓದಿ:ಬೀದರ್: ವೀರಭದ್ರೇಶ್ವರ ದೇವರ ಜಾತ್ರೆಯಲ್ಲಿ ಜಗಜಟ್ಟಿಗಳ ಸೆಣಸಾಟ, ಮುಗಿಲು ಮುಟ್ಟಿದ ಅಭಿಮಾನಿಗಳ ಶಿಳ್ಳೆ, ಚಪ್ಪಾಳೆ

ಆರು ಕಿಂಡಿಗಳಲ್ಲಿ ದೇವರು ಭಕ್ತರಿಗೆ ದರ್ಶನ ನೀಡುವ ಮೂಲಕ, ಮನುಷ್ಯನ ಹರಿಷಡ್ವರ್ಗಗಳನ್ನು ನಿಯಂತ್ರಿಸಿ ಮನುಷ್ಯನನ್ನು ಪರಿಪೂರ್ಣನನ್ನಾಗಿಸುತ್ತದೆ ಅನ್ನೋದು ನಂಬಿಕೆ ಇಲ್ಲಿದೆ. ಹಾಗಾಗಿನೇ ಇಲ್ಲಿಗೆ ರಾಜ್ಯವೇ ಅಲ್ಲದೆ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಶ್ರಾವಣ ಮಾಸದಂದು ಆಗಮಿಸುತ್ತಾರೆ. ಬಂಗಾರ ತಿರುಪತಿಯ ಶ್ರೀ ನೇತ್ರವೆಂಕಟರಮಣಸ್ವಾಮಿಯು ನೂರಾರು ವರ್ಷಗಳಿಂದ ಇಲ್ಲಿ ನೆಲೆಸಿ ಭಕ್ತರ ಕಷ್ಟಗಳನ್ನು, ಅವರ ಕೋರಿಕೆಗಳನ್ನು ಈಡೇರಿಸುತ್ತಾನೆ ಅದಕ್ಕಾಗಿಯೇ ಪ್ರತಿ ಶ್ರಾವಣ ಮಾಸದಲ್ಲಿ ಲಕ್ಷಾಂತರ ಜನ ಭಕ್ತಾದಿಗಳು ಇಲ್ಲಿಗೆ ಆಗಮಿಸಿ ಶ್ರೀನೇತ್ರವೆಂಕಟರಮಣ ಸ್ವಾಮಿಯ ಕೃಪೆಗೆ ಪಾತ್ರರಾಗುತ್ತಾರೆ.

ಹೊರ ರಾಜ್ಯಗಳಿಂದಲೂ ಭಕ್ತರ ಆಗಮನ

ಇಲ್ಲಿಗೆ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಿಂದ ಭಕ್ತ ಸಾಗರ ಹರಿದು ಬರುತ್ತದೆ. ಈ ವಿಶೇಷ ದಿನದಲ್ಲಿ ಭಕ್ತರು ವೆಂಕಟರವಣಸ್ವಾಮಿಗೆ ತಮ್ಮ ಮುಡಿಕೊಟ್ಟು, ಇಲ್ಲಿನ ಕಲ್ಯಾಣಿಯಲ್ಲಿ ಸ್ನಾನಮಾಡಿ ವೆಂಕಟರಮಣ ಸ್ವಾಮಿಯ ಕೃಪೆಗೆ ಪಾತ್ರರಾಗುತ್ತಾರೆ. ಇನ್ನೂ ಈಬಾರಿ ವಿಶೇಷವಾಗಿ ಕಾರ್ಯ ಕೋಲಾರ ಮೂಲದ ಸಿಎಂ ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಬಂಗಾರ ತಿರುಪತಿಗೆ ಬಂದು ದೇವರ ದರ್ಶನ ಪಡೆದರು. ಅಷ್ಟೇ ಅಲ್ಲದೆ ದೂರದ ಊರುಗಳಿಂದಲೂ ಕೂಡ ಹಲವು ಜನ ಭಕ್ತರು ದೇವರ ದರ್ಶನ ಪಡೆದು ಪುನೀತರಾದರು.

ಇದನ್ನೂ ಓದಿ:ಬಾಗಲಕೋಟೆ: ಆ ದೇವತೆಯ ಸನ್ನಿಧಾನದಲ್ಲಿ ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ, ಸೇವಿಸಿದರೆ ರೋಗಗಳು ಮಾಯಾ; ಎಲ್ಲಿದೆ ದೇವಸ್ಥಾನ ಅಂತೀರಾ? ಇಲ್ಲಿದೆ ವಿವರ

ಒಟ್ಟಾರೆ ಶ್ರಾವಣ ಮಾಸದಲ್ಲಿ ವೆಂಕಟೇಶ್ವರ ಸ್ವಾಮಿಯನ್ನು ಸ್ಮರಿಸಿದ್ರೆ, ಭೂಲೋಕದಲ್ಲಿ ಭಕ್ತರ ಬೇಡಿಕೆಗಳು ಈಡೇರುತ್ತವೆ ಅನ್ನೋ ನಂಬಿಕೆ ಇದೆ. ಹಾಗಾಗಿ ಭಕ್ತರು ವಿಶೇಷವಾಗಿ ವೆಂಕಟೇಶ್ವರಸ್ವಾಮಿಯ ದೇವಾಲಯಕ್ಕೆ ಬೇಟಿ ನೀಡಿದ ತಮ್ಮ ಇಷ್ಟಾರ್ಥಗಳನ್ನು ಈಡೇರಿಸೆಂದು ದೇವರೆದುರು ತಮ್ಮ ಪಾರ್ಥನೆಗಳನ್ನು ಸಲ್ಲಿಸಿದ್ದು ಮಾತ್ರ ವಿಶೇಷವಾಗಿತ್ತು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:37 pm, Sat, 9 September 23

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ