AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲೇ ಅತಿ ದೊಡ್ಡ ತ್ರಿವರ್ಣ ಧ್ವಜ ಅನಾವರಣ: ಲಿಮ್ಕಾ ದಾಖಲೆ ಬರೆದ ಚಿನ್ನದ ನಾಡು

ಕೋಲಾರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಬೃಹತ್ ತ್ರಿವರ್ಣಧ್ವಜ ಅನಾವರಣಗೊಳಿಸಲಾಗಿದೆ. ಬೃಹತ್ ತ್ರಿವರ್ಣ ಧ್ವಜಕ್ಕೆ ಸೇನಾ ಹೆಲಿಕಾಪ್ಟರ್ನಿಂದ ಪುಷ್ಪಾರ್ಚನೆ ಮಾಡಲಾಗಿದ್ದು ಇದನ್ನು ಸಾವಿರಾರು ಜನರು ಕಣ್ತುಂಬಿಕೊಂಡಿದ್ದಾರೆ.

ದೇಶದಲ್ಲೇ ಅತಿ ದೊಡ್ಡ ತ್ರಿವರ್ಣ ಧ್ವಜ ಅನಾವರಣ: ಲಿಮ್ಕಾ ದಾಖಲೆ ಬರೆದ ಚಿನ್ನದ ನಾಡು
ದೇಶದಲ್ಲೇ ಅತಿ ಬೃಹತ್ ತ್ರಿವರ್ಣ ಧ್ವಜ
Follow us
TV9 Web
| Updated By: ಆಯೇಷಾ ಬಾನು

Updated on:Aug 15, 2022 | 6:12 PM

ಕೋಲಾರ: ಇಡೀ ದೇಶ ಇವತ್ತು 75ನೇ ಸ್ವತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು(Azadi Ka Amrit Mahotsav) ಸಂಭ್ರಮಿಸುತ್ತಿದೆ. ಇದೇ ಸಂಭ್ರಮದ ಸಂದರ್ಭದಲ್ಲಿ ಕೋಲಾರ ದೇಶ ಪ್ರೇಮವನ್ನು ಪ್ರೇರೇಸುವ ಜೊತೆಗೆ ದಾಖಲೆಯನ್ನು ಬರೆಯುವ ಮೂಲಕ ದೇಶದ ಗಮನ ಸೆಳೆದಿದೆ. ಇಡೀ ದೇಶದಲ್ಲೇ ಬೃಹತ್ ಧ್ವಜವನ್ನು ಪ್ರದರ್ಶಿಸುವ ಮೂಲಕ ಲಿಮ್ಕಾ ದಾಖಲೆ(Limca Book of Records) ಬರೆದಿದೆ.

ಕೋಲಾರದಲ್ಲಿ ಅನಾವರಣಗೊಂಡ ದೇಶದಲ್ಲೇ ಬೃಹತ್ ತ್ರಿವರ್ಣ ಧ್ವಜ

ಕೋಲಾರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಬೃಹತ್ ತ್ರಿವರ್ಣಧ್ವಜ ಅನಾವರಣಗೊಳಿಸಲಾಗಿದೆ. ಬೃಹತ್ ತ್ರಿವರ್ಣ ಧ್ವಜಕ್ಕೆ ಸೇನಾ ಹೆಲಿಕಾಪ್ಟರ್ನಿಂದ ಪುಷ್ಪಾರ್ಚನೆ ಮಾಡಲಾಗಿದ್ದು ಇದನ್ನು ಸಾವಿರಾರು ಜನರು ಕಣ್ತುಂಬಿಕೊಂಡಿದ್ದಾರೆ. ಭಾರತ್ ಮಾತಾಕಿ ಜೈ ಅನ್ನೋ ಘೋಷಣೆ ಮೂಲಕ ದೇಶ ಪ್ರೇಮವನ್ನು ಹಿಮ್ಮಡಿಗೊಳಿಸಿದ್ದಾರೆ. ದೇಶಕ್ಕೆ ಸ್ವತಂತ್ರ್ಯ ಬಂದು 75 ವರ್ಷಗಳು ಪೂರೈಸಿವೆ. ಈ ಹಿನ್ನೆಲೆ ದೇಶಾದ್ಯಂತ ಸ್ವತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಆದರೆ ಕೋಲಾರದಲ್ಲಿ ಮಾತ್ರ ಈ ಸಂಭ್ರಮ ದುಪ್ಪಟ್ಟಾಗಿತ್ತು. ಕಾರಣ ದೇಶದಲ್ಲೇ ಅತಿ ದೊಡ್ಡದಾದ ಬೃಹತ್ ತ್ರಿವರ್ಣ ಧ್ವಜವನ್ನು ಅನಾವರಣ ಮಾಡುವ ಮೂಲಕ ದಾಖಲೆ ಬರೆದಿದೆ.

ಜಿಲ್ಲಾಡಳಿತ ಕಾರ್ಯಕ್ರಮದಲ್ಲೇ ಬೃಹತ್ ತ್ರಿವರ್ಣಧ್ವಜ ಅನಾರವಣ ರೋಮಾಂಚನಗೊಂಡ ದೇಶಭಕ್ತರು

ಜಿಲ್ಲಾಡಳಿತದಿಂದ ಆಯೋಜನೆ ಮಾಡಲಾಗಿದ್ದ ಸ್ವತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ದೇಶದಲ್ಲೇ ಅತಿ ದೊಡ್ಡದಾದ ತ್ರಿವರ್ಣ ಧ್ವಜವನ್ನು ಅನಾವರಣ ಮಾಡುವ ಮೂಲಕ ಕಾರ್ಯಕ್ರಮದಲ್ಲಿ ನೆರೆದಿದ್ದ ಸಾವಿರಾರು ಜನರ ಮೈಜುಂ ಎನ್ನುವಂತೆ ರೋಮಾಂಚನ ಉಂಟುಮಾಡಿತ್ತು. ಕೋಲಾರ ಸಂಸದ ಮುನಿಸ್ವಾಮಿ ನೇತೃತ್ವದಲ್ಲಿ ನಿರ್ಮಾಣ ಮಾಡಿಸಿದ್ದ 13,000 ಮೀಟರ್ ಬಟ್ಟೆ ಬಳಸಿ1.30 ಲಕ್ಷ ಚದರಡಿಯ ಬೃಹತ್ತಾದ, 204 ಅಡಿ ಉದ್ದ ಹಾಗೂ 630 ಅಡಿ ಅಗಲದ 3300 ಕೆಜಿ ತೂಕದ ಬೃಹತ್ ತ್ರಿವರ್ಣಧ್ವಜವನ್ನು ಸ್ವತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು. 7 ಜನರ ತಂಡ ಸತತವಾಗಿ 8 ದಿನಗಳ ಕಾಲ ಹಗಲು ರಾತ್ರಿ ಶ್ರಮಿಸಿದರ ಫಲವಾಗಿ ಈ ಬೃಹತ್ ತ್ರಿವರ್ಣ ಧ್ವಜವನ್ನು ನಿರ್ಮಾಣ ಮಾಡಲು ಸಾಧ್ಯವಾಗಿದೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಸಂತಸ ವ್ಯಕ್ತಪಡಿಸಿದರು.

ಸೇನಾ ಹೆಲಿಕಾಪ್ಟರ್ನಿಂದ ತ್ರಿವರ್ಣಧ್ವಜಕ್ಕೆ ಪುಷ್ಪಾರ್ಚನೆ

ಇನ್ನು ಇಂಥ ಬೃಹತ್ ಧ್ವಜ ನಿರ್ಮಾಣ ಮಾಡಿರುವ ವಿಷಯ ತಿಳಿದ ರಕ್ಷಣಾ ಸಚಿವ ರಾಜನಾಥಸಿಂಗ್ ಬೃಹತ್ ಧ್ವಜಕ್ಕೆ ಪುಷ್ಪಾರ್ಚನೆ ಮಾಡಲು ಸೇನಾ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದ್ದರು. ರಕ್ಷಣಾ ಸಚಿವ ರಾಜನಾಥ್ಸಿಂಗ್ ಅವರು ಕಳಿಸಿದ್ದ ಸೇನಾ ಹೆಲಿಕಾಪ್ಟರ್ನಿಂದ ದೇಶದ ಬೃಹತ್ ತ್ರಿವರ್ಣ ಧ್ವಜಕ್ಕೆ ನೂರಾರು ಕೆಜಿ ಹೂವಿನ ಪುಷ್ಪಾರ್ಚನೆ ಮಾಡಲಾಯಿತು. ಈ ಅಭೂತ ಪೂರ್ವ ಕ್ಷಣ ನೋಡುತ್ತಿದ್ದ ಪ್ರತಿಯೊಬ್ಬ ದೇಶಭಕ್ತರಿಗೂ ಮೈ ರೋಮಾಂಚನಗೊಳ್ಳುವಂತೆ ಮಾಡಿತ್ತು. ಈ ಕ್ಷಣಗಳನ್ನು ಕಣ್ತುಂಬಿಕೊಂಡ ಪ್ರತಿಯೊಬ್ಬರ ಬಾಯಲ್ಲೂ ಭಾರತ್ ಮಾತಾಕಿ ಜೈ ಎನ್ನುವ ಘೋಷಣೆಗಳು ತಂತಾನೆ ಹೊರ ಹೊಮ್ಮುತ್ತಿದ್ದವು.

ಲಿಮ್ಕಾ ಬುಕ್ ಆಫ್ ರೆಕಾರ್ಡ್ ಸೇರಿದ ಬೃಹತ್ ಧ್ವಜದ ದಾಖಲೆ

ಇನ್ನು ಕೋಲಾರದಲ್ಲಿ ಇಂದು ಪ್ರದರ್ಶನ ಮಾಡಲಾದ ಈ ಬೃಹತ್ ಧ್ವಜ ದೇಶದಲ್ಲೇ ಅತಿದೊಡ್ಡದಾದ ಧ್ವಜ ಎಂದು ಹೇಳಲಾಗಿದೆ. ಸುಮಾರು 1.30 ಲಕ್ಷ ಚದರಡಿ ವಿಸ್ತೀರ್ಣದ, ಈ ಬೃಹತ್ ಧ್ವಜ ಲಿಮ್ಕಾ ಬುಕ್ ಆಫ್ ರೆಕಾರ್ಡ್ಗೆ ಸೇರಿದ್ದು ದಾಖಲೆ ಪುಟಗಳಲ್ಲಿ ಸೇರಿದೆ. ಇದು ಬೃಹತ್ ತ್ರಿವರ್ಭ ಧ್ವಜ ನಿರ್ಮಾಣ ಮಾಡಲು ಪ್ರಮುಖ ಪಾತ್ರ ವಹಿಸಿದ್ದ ಕೋಲಾರ ಸಂಸದ ಮುನಿಸ್ವಾಮಿ, ಹಾಗೂ ನಿರ್ಮಾಣ ಕಾರ್ಯದಲ್ಲಿ ಶ್ರಮ ವಹಿಸಿದ್ದ ಪ್ರದೀಪ್ ಹಾಗೂ ಅವರ ತಂಡ ಸಂತಸ ವ್ಯಕ್ತಪಡಿಸಿದೆ.

ಕ್ಲಾಕ್ ಟವರ್ನಲ್ಲೂ ಮೊದಲ ಬಾರಿಗೆ ಧ್ವಜಾರೋಹಣ

ಬೃಹತ್ ಧ್ವಜದ ಅನಾವರಣ ಮಾಡುವ ಮೂಲಕ ಒಂದು ದಾಖಲೆ ಬರೆದರೆ ಸ್ವತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ಕೋಲಾರ ನಗರದ ಕ್ಲಾಕ್ ಟವರ್ ಮೇಲೆ ಧ್ವಜಾರೋಹಣ ಮಾಡಲಾಯಿತು. ಕೋಲಾರ ಜಿಲ್ಲಾಧಿಕಾರಿ ವೆಂಕಟರಾಜಾ ಸೇರಿದಂತೆ ಜಿಲ್ಲೆಯ ಹಲವು ಅಧಿಕಾರಿಗಳು ಹಾಗೂ ಸಾವಿರಾರು ಶಾಲಾ ಮಕ್ಕಳು ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು, ಧ್ವಜಾರೋಹಣ ಮಾಡಿ ರಾಷ್ಟ್ರಗೀತೆ ಹಾಡಿದರು.

kolar tower

ಕ್ಲಾಕ್ ಟವರ್

ಜೀವನದಲ್ಲಿ ಮರೆಯಲಾಗದ ಕ್ಷಣ ಎಂದು ಸಚಿವ ಮುನಿರತ್ನ

ಇನ್ನು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡಿ ಸ್ವತಂತ್ರ್ಯೋತ್ಸವದ ಅಂಗವಾಗಿ ಅಭೂತಪೂರ್ವ ಪಥಸಂಚಲನಕ್ಕೆ ಚಾಲನೆ ನೀಡಿ ಧ್ವಜವಂದನೆ ಸ್ವೀಕರಿಸಿದರು. ನಂತರ ದೇಶದಲ್ಲೇ ಬೃಹತ್ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಲಾಯಿತು. ಈವೇಳೆ ಸಾವಿರಾರು ಜನರು ಬೃಹತ್ ಧ್ವಜವನ್ನು ಕಣ್ತುಂಬಿಕೊಂಡರು, ಅಲ್ಲದೆ ಧ್ವಜದ ಬಳಿ ನಿಂತು ಪೋಟೋ ತೆಗೆಸಿಕೊಂಡು ಖುಷಿಪಟ್ಟರು ಈ ವೇಳೆ ಮಾತನಾಡಿದ ಸಚಿವ ಮುನಿರತ್ನ ಇದು ಜೀವನದಲ್ಲಿ ಮರೆಯಲಾಗದ ಕ್ಷಣ ಎಂದು ಬಣ್ಣಿಸಿದರು.

ಒಟ್ಟಾರೆ ಸ್ವತಂತ್ರ್ಯೋತ್ಸವದ ಅಮೃತ ಮಹೋತ್ಸವ ಕೋಲಾರ ಜಿಲ್ಲೆಗೆ ಮರೆಯಲಾಗದ ಕ್ಷಣವಾಗಿ ಇಡೀ ದೇಶವೇ ಸ್ಮರಿಸುವಂತ ದಿನವಾಗಿ ದಾಖಲೆಯ ಪುಟಗಳಲ್ಲಿ ಉಳಿದುಕೊಂಡಿದೆ. ಇಂಥ ಕಾರ್ಯಕ್ರಮಗಳ ಮೂಲಕ ದೇಶದಲ್ಲಿ ದೇಶ ಭಕ್ತಿ ಎಲ್ಲರ ಎದೆಯಲ್ಲೂ ಮೇಳೈಸಲಿ ಆ ಮೂಲಕ ಭಾರತಾಂಭೆಗೆ ಪ್ರತಿಯೊಬ್ಬರೂ ಪೂಜಿಸುವಂತಾದರೆ ಕಾರ್ಯಕ್ರಮಕ್ಕೆ ಸಾರ್ಥಕತೆ ಸಿಕ್ಕಂತಾಗುತ್ತದೆ.

ವರದಿ: ರಾಜೇಂದ್ರಸಿಂಹ, ಟಿವಿ9 ಕೋಲಾರ

Published On - 6:06 pm, Mon, 15 August 22

ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ