ಬೈಕ್ ಸವಾರನ ಮೇಲಿನ ದರ್ಪ ಪ್ರಕರಣ: ಮಾಲೂರು JMFC ಜಡ್ಜ್ ಗಾಯತ್ರಿ ಬೀದರ್‌ಗೆ ವರ್ಗಾವಣೆ
ಕೋಲಾರದ ಮಾಲೂರು ಜೆಎಂಎಫ್‌ಸಿ ನ್ಯಾಯಾಧೀಶೆ ಗಾಯತ್ರಿ ಅವರನ್ನು ಬೀದರ್‌ನ ಹುಮ್ನಾಬಾದ್‌ಗೆ ವರ್ಗಾಯಿಸಲಾಗಿದೆ. ಬೈಕ್ ಸವಾರನೊಂದಿಗೆ ದರ್ಪ ತೋರಿದ್ದಕ್ಕೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಈ ಘಟನೆ ವೈರಲ್ ಆಗಿದ್ದು, ನ್ಯಾಯಾಧೀಶೆ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚಿಸಿತ್ತು. ಇದರ ಬೆನ್ನಲ್ಲೇ ಇದೀಗ ವರ್ಗಾವಣೆ ಆದೇಶ ಹೊರಬಿದ್ದಿದ್ದು, ನ್ಯಾಯಾಂಗದ ವರ್ಚಸ್ಸಿಗೆ ಧಕ್ಕೆ ತಂದ ಪ್ರಕರಣಕ್ಕೆ ತೆರೆಬಿದ್ದಿದೆ.

ಬೆಂಗಳೂರು ಆ.6: ಬೈಕ್ ಸವಾರನ ಮೇಲೆ ದರ್ಪ ತೋರಿ, ಹೈಕೋರ್ಟ್‌ನಿಂದ ತರಾಟೆಗೆ ಒಳಗಾಗಿದ್ದ ಕೋಲಾರ ಜಿಲ್ಲೆಯ ಮಾಲೂರು ಜೆಎಂಎಫ್‌ಸಿ (JMFC) ನ್ಯಾಯಾಧೀಶೆ ಗಾಯತ್ರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಚಂದ್ರಶೇಖರ ರೆಡ್ಡಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಬೈಕ್ ಸವಾರ ವಿನಯ್ ಎಂಬಾತ ನ್ಯಾಯಾಧೀಶೆ ಗಾಯತ್ರಿ ಅವರ ಇನೋವಾ ಕಾರನ್ನು ಓವರ್‌ಟೇಕ್ ಮಾಡಿದ್ದಾನೆ ಎಂಬ ಕಾರಣಕ್ಕೆ ಆಕ್ರೋಶಗೊಂಡ ನ್ಯಾಯಾಧೀಶೆ ಬೈಕ್ ಸವಾರನ ಫಾಲೋ ಮಾಡಿಕೊಂಡು ಹೊಗಿ ಸಾರ್ವಜನಿಕವಾಗಿ ರಂಪಾಟ ನಡೆಸಿದ್ದರು. ಈ ಜಗಳದ ದೃಶ್ಯಾವಳಿಗಳು ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದವು. ಘಟನೆಯ ಬಳಿಕ ಬೈಕ್ ಸವಾರ ವಿನಯ್ ವಿರುದ್ಧ ಮಾಲೂರು ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲು ಮಾಡಲಾಗಿತ್ತು.
ತಮ್ಮ ವಿರುದ್ಧದ ನಕಲಿ ಪ್ರಕರಣ ರದ್ದುಗೊಳಿಸುವಂತೆ ಕೋರಿ ಬೈಕ್ ಸವಾರ ವಿನಯ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆದಿತ್ತು. ಪ್ರಕರಣವನ್ನು ತೀವ್ರವಾಗಿ ಪರಿಗಣಿಸಿದ ಪೀಠವು, ಎಫ್‌ಐಆರ್ ದಾಖಲಿಸಿದ್ದಕ್ಕೆ ತರಾಟೆಗೆ ತೆಗೆದುಕೊಂಡಿತ್ತಲ್ಲದೆ, ನ್ಯಾಯಾಧೀಶೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಿಜಿಸ್ಟ್ರಾರ್‌ಗೆ ಸೂಚನೆ ನೀಡಿದ್ದರು.
ಇದನ್ನೂ ಓದಿ: 120 ಕೋಟಿ ಮಠದ ಜಮೀನು ಕಬಳಿಕೆ ಕೇಸ್: ಕೊನೆಗೂ ಪೊಲೀಸರ ಮುಂದೆ ಹಾಜರಾದ ಕಿಂಗ್‌ಪಿನ್ ನರೇಶ್ ಗೌಡ
ಹೈಕೋರ್ಟ್ ನೀಡಿದ ನಿರ್ದೇಶನದ ಬೆನ್ನಲ್ಲೇ ಇದೀಗ ನ್ಯಾಯಾಧೀಶೆ ಗಾಯತ್ರಿ ಅವರನ್ನು ಹುಮ್ನಾಬಾದ್‌ಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




