ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆ: ಮರು ಎಣಿಕೆಯಲ್ಲೂ ‘ಕೈ’ ನಾಯಕನದ್ದೇ ಮೇಲುಗೈ

ಮಾಲೂರು ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಗೆಲುವು ಖಚಿತವಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ನಡೆದ ಮರು ಎಣಿಕೆಯಲ್ಲಿ ನಂಜೇಗೌಡರು 250 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡರನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ನಂಜೇಗೌಡರ ಮಾಲೂರು ಶಾಸಕ ಸ್ಥಾನ ಭದ್ರವಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆ: ಮರು ಎಣಿಕೆಯಲ್ಲೂ ಕೈ ನಾಯಕನದ್ದೇ ಮೇಲುಗೈ
ಶಾಸಕ ನಂಜೇಗೌಡ
Image Credit source: Google

Updated on: Feb 05, 2026 | 3:57 PM

ಕೋಲಾರ, ಫೆಬ್ರವರಿ 05: ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರುಎಣಿಕೆ ಕಾರ್ಯದಲ್ಲಿಯೂ ಕಾಂಗ್ರೆಸ್​​ನ ಹಾಲಿ ಶಾಸಕ ಕೆ.ವೈ. ನಂಜೇಗೌಡ ಮೇಲುಗೈ ಸಾಧಿಸಿದ್ದಾರೆ. ಮರುಎಣಿಕೆ ನಡೆಸಿ ಸುಪ್ರೀಂಕೋರ್ಟ್​ಗೆ ಅಧಿಕಾರಿಗಳು ಸಲ್ಲಿಸಿದ್ದ ಮಾಹಿತಿಯೀಗ ಬಹಿರಂಗಗೊಂಡಿದ್ದು ಮರು ಎಣಿಕೆಯಲ್ಲಿ ಕಾಂಗ್ರೆಸ್​ನ ನಂಜೇಗೌಡಗೆ 50,957 ಮತಗಳು ಬಂದಿದ್ದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಜುನಾಥಗೌಡಗೆ 50,707  ಮತಗಳು ಬಂದಿವೆ. ಹೀಗಾಗಿ ನಂಜೇಗೌಡ ಅವರೇ ಮಾಲೂರು ಕ್ಷೇತ್ರದ ಶಾಸಕರಾಗಿ ಮುಂದುವರಿಯುತ್ತಾರೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ವಿರುದ್ಧ ಕಾಂಗ್ರೆಸ್​​ನ ಕೆ.ವೈ.ನಂಜೇಗೌಡ 248 ಮತಗಳ ಅಂತರದಲ್ಲಿ ಗೆದ್ದಿದ್ದರು. ಆದ್ರೆ, ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿದ್ದ ಮಂಜುನಾಥ್ ಗೌಡ ನಂಜೇಗೌಡ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಕೋರ್ಟ್​​ ಮೆಟ್ಟಿಲೇರಿದ್ದರು. ಆ ಬಳಿಕ ಕೋರ್ಟ್​​ ಸೂಚನೆಯಂತೆ ಕೋಲಾರದ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ನವೆಂಬರ್ 11ರಂದು ಒಟ್ಟು 18 ಸುತ್ತು ಮರುಮತ ಎಣಿಕೆ ಕಾರ್ಯ ನಡೆದಿತ್ತು. ಬಳಿಕ ಫಲಿತಾಂಶವನ್ನು ಚುನಾವಣಾ ಆಯೋಗ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ಇದನ್ನೂ ಓದಿ: ಮಾಲೂರು ಕ್ಷೇತ್ರದ ಮರುಮತ ಎಣಿಕೆ ಕಾರ್ಯ ಅಂತ್ಯ; ಆದರೂ ತೃಪ್ತಿಯಾಗಿಲ್ಲ ಎಂದ ಬಿಜೆಪಿ ಪರಾಜಿತ ಅಭ್ಯರ್ಥಿ

ಆದರೆ ಮಾಜಿ ಶಾಸಕ ಮಂಜುನಾಥಗೌಡ ಮರು ಎಣಿಕೆಯ ಬಗ್ಗೆಯೂ ಅಸಮಾಧಾನ ಹೊರಹಾಕಿದ್ದರು. ಇನ್ನೂ ಕೆಲವೊಂದು ಪ್ರಶ್ನೆಗಳಿಗೆ ನನಗೆ ಉತ್ತರ ಸಿಕ್ಕಿಲ್ಲ. ಅಧಿಕಾರಿಗಳ ಪ್ರೊಸಿಜರ್ ಲ್ಯಾಪ್ಸ್ ಇದೆ. ಸಂಪೂರ್ಣ ವಿವಿ ಪ್ಯಾಟ್ ಗಳನ್ನು ಎಣಿಸಬೇಕಿತ್ತು. ಆದರೆ ಕೇವಲ ಐದು ವಿವಿ ಪ್ಯಾಟ್ ಮಾತ್ರ ಎಣಿಕೆ ಮಾಡಲಾಗಿದೆ. ಚುನಾವಣೆ ಮರುಎಣಿಕೆ ವಿರುದ್ದ ನನ್ನ ಕಾನೂನು ಹೋರಾಟ ಮುಂದುವರೆಯಲಿದೆ. ಸುಪ್ರೀಂ ಕೋರ್ಟ್ ಅರ್ಜಿದಾರರ ಮನವಿಯನ್ನು ಪರಿಗಣಿಸಿ ಎಂದು ಹೇಳಿತ್ತು. ಆದರೆ ನನ್ನ ಕೆಲವೊಂದು ಮನವಿಗೆ ಪ್ರಾಧಾನ್ಯತೆ ಸಿಕ್ಕಿಲ್ಲ ಎಂದು ಆರೋಪಿಸಿದ್ದರು. ಇತ್ತ ನಂಜೇಗೌಡ ಮಾತ್ರ ಮರು ಎಣಿಕೆಯಲ್ಲಿಯೂ ತಾವೇ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:56 pm, Thu, 5 February 26

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Loading...
Unable to load recommendations.
Follow Us