ಕೋಲಾರ: ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ದೇವಾಲಯ, ಶೆಡ್ ನಿರ್ಮಾಣಕ್ಕೆ ಹಣ ವಸೂಲಿ
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇತ್ತೀಚೆಗೆ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಕ್ಲೀನ್ ಮಾಡಿಸಿದ ಪ್ರಕರಣ ಭಾರೀ ಸುದ್ದು ಮಾಡಿತ್ತು. ಇದರ ಬೆನ್ನಲ್ಲೇ ವಸತಿ ಶಾಲೆಯ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಅದೇನೆಂಬುದು ಇಲ್ಲಿದೆ ನೋಡಿ.
ಕೋಲಾರ, ಡಿ.19: ಜಿಲ್ಲೆಯ (Kolar) ಮಾಲೂರು ತಾಲೂಕಿನ ಯಲಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (Morarji Desai Residential School) ಇತ್ತೀಚೆಗೆ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಕ್ಲೀನ್ ಮಾಡಿಸಿದ ಪ್ರಕರಣ ಭಾರೀ ಸುದ್ದು ಮಾಡಿತ್ತು. ಇದರ ಬೆನ್ನಲ್ಲೇ ವಸತಿ ಶಾಲೆಯ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಶಾಲೆಯ ಆವರಣದಲ್ಲಿ ನಿರ್ಮಾಣ ಮಾಡುತ್ತಿದ್ದ ದೇವಾಲಯ ಹಾಗೂ ಪೋಷಕರು ತಂಗಲು ಶೆಡ್ ನಿರ್ಮಾಣಕ್ಕೆ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ.
ದೇವಾಲಯ ಹಾಗೂ ಪೋಷಕರು ತಂಗಲು ಶೆಡ್ ನಿರ್ಮಾಣಕ್ಕೆ ವಸತಿ ಶಾಲೆಯ ಪ್ರಾಂಶುಪಾಲೆ ಮತ್ತು ಶಿಕ್ಷಕರು ಬಲವಂತವಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳ ಪೋಷಕರಿಂದ ತಲಾ 500 ರೂಪಾಯಿಯನ್ನು ವಸೂಲಿ ಮಾಡಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಾಲೂರು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಗೆ ಕಿರುಕುಳ: ಬೆತ್ತಲೆ ವಿಡಿಯೋ ಚಿತ್ರೀಕರಣ, ವಿದ್ಯಾರ್ಥಿನಿ ಆರೋಪ
ಸಂಗ್ರಹ ಮಾಡಿದ ಹಣ ಹಂಚಿಕೊಳ್ಳುವ ವಿಚಾರದಲ್ಲೂ ಸಿಬ್ಬಂದಿ ನಡುವೆ ಜಗಳ ನಡೆದಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಶಿವಕುಮಾರ್ ನೀಡಿದ ದೂರಿನ ಅನ್ವಯ ಮಾಸ್ತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ನಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:03 am, Tue, 19 December 23