ಕೋಲಾರ: ಟಿಪ್ಪರ್ ಡಿಕ್ಕಿ, ಬೈಕ್​ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

ಪ್ರತ್ಯೇಕ ಘಟನೆ: ಟಿಪ್ಪರ್ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಲೂರು ತಾಲೂಕಿನ ಭುವನಹಳ್ಳಿ ಗೇಟ್ ಬಳಿ ನಡೆದರೆ, ಇತ್ತ ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಶಿರಾ ಪಟ್ಟಣದ ಶಿವಾಜಿನಗರದಲ್ಲಿ‌ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿದ್ದು, ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಕೋಲಾರ: ಟಿಪ್ಪರ್ ಡಿಕ್ಕಿ, ಬೈಕ್​ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ
ಬೈಕ್​ ಅಪಘಾತ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 06, 2024 | 11:02 PM

ಕೋಲಾರ, ಮಾ.06: ಮಾಲೂರು ತಾಲೂಕಿನ ಭುವನಹಳ್ಳಿ ಗೇಟ್ ಬಳಿ ಟಿಪ್ಪರ್ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಾಲೂರು(Malur) ತಾಲೂಕಿನ ಮಿಟ್ಟಗಾನಹಳ್ಳಿ ನಿವಾಸಿಗಳಾದ ಸಂತೋಷ್ ಮತ್ತು ಸುಮನ್ ಮೃತ ರ್ದುದೈವಿಗಳು. ಇವರು ಆಲ್ ಕಾರ್ಗೋ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಘಟನೆ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಟಿಪ್ಪರ್ ಸಮೇತ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಭೀಕರ ಬೈಕ್​ ಅಪಘಾತ; ಓರ್ವ ಸಾವು, ಮತ್ತೊಬ್ಬನಿಗೆ ಗಾಯ

ತುಮಕೂರು: ಶಿರಾ ಪಟ್ಟಣದ ಶಿವಾಜಿನಗರದಲ್ಲಿ‌ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿದ್ದು, ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಸುಕನ್(31) ಮೃತ ರ್ದುದೈವಿ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು, ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಇವರು ಗೋವಾದಿಂದ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ಕುರಿತು ಶಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಬೀದರ್​​ನಲ್ಲಿ ಭೀಕರ ರಸ್ತೆ ಅಪಘಾತ; ಟ್ರಕ್-ಟಾಟಾ ಎಸ್ ಡಿಕ್ಕಿಯಾಗಿ ನಾಲ್ವರು ಸಾವು

ಎಲೆಕ್ಟ್ರಿಕ್ ಶೋರೂಮ್​ನಲ್ಲಿ ಬೆಂಕಿ ಅವಘಡ

ಬೆಂಗಳೂರು: ನಗರದ ಚಿಕ್ಕಪೇಟೆಯ ಅಭಿನಯ ಥಿಯೇಟರ್ ಬಳಿ ಎಲೆಕ್ಟ್ರಿಕ್ ಶೋರೂಮ್​ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನ ದೌಡಾಯಿಸಿದ್ದು, ಬೆಂಕಿ ನಂದಿಸುತ್ತಿದ್ದಾರೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಈ ಘಟನೆ ಸಿಟಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಖಾಸಗಿ ಶಾಲಾ ವಾಹನ, ಬೈಕ್​ ನಡುವೆ ಅಪಘಾತ; ಸವಾರನಿಗೆ ಗಾಯ

ಕೋಲಾರ: ಶ್ರೀನಿವಾಸಪುರ ತಾಲೂಕಿನ ಕದಿರೋಳ್ಳಗಡ್ಡ ಗ್ರಾಮದ ಬಳಿ ಖಾಸಗಿ ಶಾಲಾ ವಾಹನ ಡಿಕ್ಕಿಯಾಗಿ ಬೈಕ್​ ಸವಾರನಿಗೆ ಗಾಯವಾದ ಘಟನೆ ನಡೆದಿದೆ. ಅಪಘಾತದಲ್ಲಿ ಗೌನಿಪಲ್ಲಿಯ ರಶೀದ್ ಖಾನ್​ಗೆ ಗಾಯವಾಗಿದ್ದು, ಕೂಡಲೇ ಸ್ಥಳೀಯರು ಸಹಾಯದೊಂದಿಗೆ ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಾಹನದಲ್ಲಿ ಮಕ್ಕಳಿರದ ಕಾರಣ ಅನಾಹುತ ತಪ್ಪಿದೆ. ಈ ಕುರಿತು ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:57 pm, Wed, 6 March 24