ಕೋಲಾರ, ಮಾ.06: ಮಾಲೂರು ತಾಲೂಕಿನ ಭುವನಹಳ್ಳಿ ಗೇಟ್ ಬಳಿ ಟಿಪ್ಪರ್ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಾಲೂರು(Malur) ತಾಲೂಕಿನ ಮಿಟ್ಟಗಾನಹಳ್ಳಿ ನಿವಾಸಿಗಳಾದ ಸಂತೋಷ್ ಮತ್ತು ಸುಮನ್ ಮೃತ ರ್ದುದೈವಿಗಳು. ಇವರು ಆಲ್ ಕಾರ್ಗೋ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಘಟನೆ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಟಿಪ್ಪರ್ ಸಮೇತ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಮಕೂರು: ಶಿರಾ ಪಟ್ಟಣದ ಶಿವಾಜಿನಗರದಲ್ಲಿ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿದ್ದು, ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಸುಕನ್(31) ಮೃತ ರ್ದುದೈವಿ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು, ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಇವರು ಗೋವಾದಿಂದ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ಕುರಿತು ಶಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಬೀದರ್ನಲ್ಲಿ ಭೀಕರ ರಸ್ತೆ ಅಪಘಾತ; ಟ್ರಕ್-ಟಾಟಾ ಎಸ್ ಡಿಕ್ಕಿಯಾಗಿ ನಾಲ್ವರು ಸಾವು
ಬೆಂಗಳೂರು: ನಗರದ ಚಿಕ್ಕಪೇಟೆಯ ಅಭಿನಯ ಥಿಯೇಟರ್ ಬಳಿ ಎಲೆಕ್ಟ್ರಿಕ್ ಶೋರೂಮ್ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನ ದೌಡಾಯಿಸಿದ್ದು, ಬೆಂಕಿ ನಂದಿಸುತ್ತಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಈ ಘಟನೆ ಸಿಟಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೋಲಾರ: ಶ್ರೀನಿವಾಸಪುರ ತಾಲೂಕಿನ ಕದಿರೋಳ್ಳಗಡ್ಡ ಗ್ರಾಮದ ಬಳಿ ಖಾಸಗಿ ಶಾಲಾ ವಾಹನ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯವಾದ ಘಟನೆ ನಡೆದಿದೆ. ಅಪಘಾತದಲ್ಲಿ ಗೌನಿಪಲ್ಲಿಯ ರಶೀದ್ ಖಾನ್ಗೆ ಗಾಯವಾಗಿದ್ದು, ಕೂಡಲೇ ಸ್ಥಳೀಯರು ಸಹಾಯದೊಂದಿಗೆ ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಾಹನದಲ್ಲಿ ಮಕ್ಕಳಿರದ ಕಾರಣ ಅನಾಹುತ ತಪ್ಪಿದೆ. ಈ ಕುರಿತು ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:57 pm, Wed, 6 March 24