ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಮಗು ಬಿಟ್ಟು ಹೋದ ವ್ಯಕ್ತಿ: ತಾಯಿ ಪತ್ತೆ, ತಂದೆ ನಿಗೂಢ
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಒಂದು ನವಜಾತ ಶಿಶುವನ್ನು ಬಿಟ್ಟು ಪರಾರಿಯಾದ ವ್ಯಕ್ತಿಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶಿಶುವಿನ ತಾಯಿಯನ್ನು ಪತ್ತೆಹಚ್ಚಲಾಗಿದ್ದರೂ, ತಂದೆಯ ಮಾಹಿತಿಯನ್ನು ನೀಡಲು ಅವರು ನಿರಾಕರಿಸಿದ್ದಾರೆ. ಮಕ್ಕಳ ರಕ್ಷಣಾ ಘಟಕವು ಡಿಎನ್‌ಎ ಪರೀಕ್ಷೆಗೆ ಮುಂದಾಗಿದೆ. ತಂದೆಯ ಗುರುತು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕೋಲಾರ, ಜೂನ್ 10: ಮಗುವಿನ ತಾಯಿ ಸತ್ತಿದ್ದಾಳೆ, ತಂದೆ ಜೈಲಲ್ಲಿದ್ದಾನೆಂದು ಹೇಳಿ ವ್ಯಕ್ತಿಯೋರ್ವ ನವಜಾತ ಶಿಶುವನ್ನು ಕೋಲಾರ ಜಿಲ್ಲಾಸ್ಪತ್ರೆಗೆ (Kolar District Hospital) ದಾಖಲಿಸಿ ಪರಾರಿಯಾಗಿದ್ದಾನೆ. ಈ ಸಂಬಂಧ ಕೋಲಾರ ಜಿಲ್ಲಾಸ್ಪತ್ರೆ ಸಿಬ್ಬಂದಿ ಕೋಲಾರ (Kolar) ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಮಗುವನ್ನು ಮಕ್ಕಳ ರಕ್ಷಣಾ ಘಟಕದ ವಶಕ್ಕೆ ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಮಗುವಿನ ತಾಯಿಯನ್ನು ಪತ್ತೆಹಚ್ಚಿದ್ದಾರೆ.
ಮಗುವಿನ ತಾಯಿಯನ್ನು ವಿಚಾರಣೆ ನಡೆಸಿದಾಗ, ತಂದೆಯ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣಾ ಘಟಕ ಡಿಎನ್‌ಎ ಪರೀಕ್ಷೆಗೆ ಮುಂದಾಗಿದೆ. ಸದ್ಯ ಮಗು ಹಾಗೂ ತಾಯಿ ಇಬ್ಬರೂ ಮಕ್ಕಳ ರಕ್ಷಣಾ ಘಟಕದ ವಶದಲ್ಲಿದ್ದು ತಂದೆ ಯಾರೆಂದು ಮಾಹಿತಿ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ
ಕೋಲಾರ ಜಿಲ್ಲಾಧಿಕಾರಿ ಕಚೇರಿ ಮತ್ತು ನಂಗಲಿ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿದ್ದಾರೆ. ನಂಗಲಿ ಠಾಣೆ ಪಿಎಸ್‌ಐ ಅರ್ಜುನ್‌ಗೌಡ ಮತ್ತು ಪೇದೆ ಸುರೇಶ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಪೊಲೀಸ್ ಅಧಿಕಾರಿಗಳು ಬಾರ್ ಮಾಲೀಕ ಪ್ರಶಾಂತ್ ಎಂಬುವರಿಂದ ತಿಂಗಳ ಮಾಮೂಲಿ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ಇನ್ನು, ಕೋಲಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶಿರಸ್ತೇದಾರ್ ಚಂದ್ರಪ್ಪ, ಎಫ್‌ಡಿಎ ಅಜಯ್, ಅಜಯ್ ಸಹಾಯಕ ಮುನಿರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೂವರು ಅಧಿಕಾರಿಗಳು ಭೂ ಪರಿವರ್ತನೆಗಾಗಿ ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಮೂವರನ್ನೂ ವಶಕ್ಕೆ ಪಡೆದಿದ್ದಾರೆ. ಅಧಿಕಾರಿಗಳನ್ನು ವಿಚಾರಣೆ ಒಳಪಡಿಸಿದ್ದಾರೆ. ಕೋಲಾರ ಲೋಕಾಯುಕ್ತ ಎಸ್‌ಪಿ ಧನಂಜಯ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:08 pm, Tue, 10 June 25