AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವಿಗೆ ಬೆಂಬಲ ಬೆಲೆಗೆ ಬೆಳೆಗಾರರ ಪಟ್ಟು: ಸೋಮವಾರ ಸ್ತಬ್ಧವಾಗುತ್ತಾ ಕೋಲಾರ?

ಮಾವಿನ ಬೆಲೆ ಪಾತಾಳಕ್ಕೆ ಕುಸಿದ ಹಿನ್ನೆಲೆಯಲ್ಲಿ ಬೆಂಬಲ ಬೆಲೆಗೆ ಆಗ್ರಹಿಸಿ ಮಾವು ಬೆಳೆಗಾರರು ಜೂನ್ 22ರ ಸೋಮವಾರ ಕೋಲಾರ ಜಿಲ್ಲಾ ಬಂದ್‌ಗೆ ಕರೆ ನೀಡೋದಾಗಿ ಎಚ್ಚರಿಸಿದ್ದಾರೆ. ಸತತವಾಗಿ 4 ವಾರಗಳಿಂದ ಮಾವು ಬೆಲೆ ಪಾತಾಳಕ್ಕೆ ಕುಸಿದಿದ್ದು, ಸದ್ಯ ಮಾರುಕಟ್ಟೆಯಲ್ಲಿ ಒಂದು ಟನ್ ಮಾವು 3ರಿಂದ 4 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದೆ. ಹೀಗಾಗಿ ಆಂಧ್ರ ಮಾದರಿಯಲ್ಲಿ ತಕ್ಷಣವೇ ಪರಿಹಾರ ನೀಡುವಂತೆ ರೈತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಾವಿಗೆ ಬೆಂಬಲ ಬೆಲೆಗೆ ಬೆಳೆಗಾರರ ಪಟ್ಟು: ಸೋಮವಾರ ಸ್ತಬ್ಧವಾಗುತ್ತಾ ಕೋಲಾರ?
ಮಾವು ಬೆಳೆಗಾರರ ಆಕ್ರೋಶ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Jun 21, 2026 | 12:05 PM

Share

ಕೋಲಾರ, ಜೂನ್ ​​21: ಹಣ್ಣುಗಳ ರಾಜ ಮಾವಿಗೆ ಮಾರುಕಟ್ಟೆಯಲ್ಲಿ ದಿನೇ ದಿನೆ ಬೇಡಿಕೆ ಹಾಗೂ ಬೆಲೆ ಕುಸಿತದ ಪರಿಣಾಮ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಆಂಧ್ರ ಪ್ರದೇಶ ಮಾದರಿಯಲ್ಲಿ ರಾಜ್ಯ ಸರ್ಕಾರ ಬೆಂಬಲ ಬೆಲೆ ಘೋಷಿಸಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಬೇಡಿಕೆಗ ಸರ್ಕಾರ ಸ್ಪಂದಿಸದೇ ಇದ್ದಲ್ಲಿ ಜೂನ್​​ 22ರ ಸೋಮವಾರ ಶ್ರೀನಿವಾಸಪುರ ಸೇರಿದಂತೆ ಕೋಲಾರ ಜಿಲ್ಲಾ ಬಂದ್​​ಗೆ ಕರೆ ನೀಡುವ ಬಗ್ಗೆ ಮಾವು ಬೆಳೆಗಾರರು ಎಚ್ಚರಿಸಿದ್ದಾರೆ. ಮಂಡಿ ಮಾಲೀಕರು, ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಕೂಡ ಬಂದ್​​ಗೆ ಬೆಂಬಲ ಸೂಚಿಸೋದಾಗಿ ತಿಳಿಸಿದ್ದಾರೆ.

ಪಾತಾಳಕ್ಕೆ ಕುಸಿದ ದರ

ಸತತವಾಗಿ 4 ವಾರಗಳಿಂದ ಮಾವು ಬೆಲೆ ಪಾತಾಳಕ್ಕೆ ಕುಸಿದಿದ್ದು, ಸದ್ಯ ಮಾರುಕಟ್ಟೆಯಲ್ಲಿ ಒಂದು ಟನ್ ಮಾವು 3ರಿಂದ 4 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದೆ. ಆದರೆ ಟನ್​​ಗೆ ಕನಿಷ್ಠ 8 ಸಾವಿರ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಇಲ್ಲವೆ ನಷ್ಟ ಪರಿಹಾರ ಘೋಷಿಸಬೇಕು ಎಂಬುದು ಮಾವು ಬೆಳೆಗಾರರ ಪ್ರಮುಖ ಆಗ್ರಹವಾಗಿದೆ. ಜಿಲ್ಲೆಯ 45,565 ಹೆಕ್ಟೇರ್ ಪ್ರದೇಶದಲ್ಲಿ ಅಂದಾಜು 5,50,190 ಟನ್​ ಮಾವು ಬೆಳೆಯಲಾಗುತ್ತೆ. ಶ್ರೀನಿವಾಸಪುರ ತೋತಾಪುರಿ, ರಾಜಗಿರ, ಮಲ್ಲಿಕಾ, ಬಾದಾಮಿ, ಬೇನಿಶಾ, ರಸಪುರಿ, ನೀಲಂ, ದಶೇರಿ, ನೀಲಂ, ಸಕ್ಕರೆ ಗುತ್ತಿ ಸೇರಿ ಹಲವು ತಳಿ ಇವುಗಳಲ್ಲಿ ವಿಶೇಷವಾದುವು.

ಇದನ್ನೂ ಓದಿ: ಕೆಂಪು ಸುಂದರಿಗೆ ಮತ್ತೆ ಡಿಮ್ಯಾಂಡ್! ಟೊಮೆಟೊ ಬೆಳೆದ ರೈತರಿಗೆ ಜಾಕ್‌ಪಾಟ್

ಆಂಧ್ರದಲ್ಲಿ ಮಾವಿನ ಬೆಲೆ ಕುಸಿದಿರುವ ಬಗ್ಗೆ ಗಮನಹರಿಸಿರುವ ಅಲ್ಲಿನ ಸರ್ಕಾರವು ರೈತರಿಗೆ ಪ್ರತಿ ಕೆಜಿ ಮಾವಿಗೆ 4 ರೂ. ಬೆಂಬಲ ಬೆಲೆ ಘೋಷಿಸಿದೆ. ಅದರಂತೆ ಕರ್ನಾಟಕದಲ್ಲೂ ಮಾವಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೆಂಕುಬುದು ಬೆಳೆಗಾರರ ಒತ್ತಾಯವಾಗಿದೆ. ಈ ಬಗ್ಗೆ ಈಗಾಗಲೇ ಪ್ರಸ್ತಾವನೆಯೂ ಸಲ್ಲಿಕೆಯಾಗಿದ್ದು, ಒಂದು ವೇಳೆ ಸರ್ಕಾರ ಕೂಡಲೇ ಬೆಂಬಲ ಬೆಲೆ ಘೋಷಣೆ ಮಾಡದೆ ಹೋದಲ್ಲಿ ಸೋಮವಾರ ಕೋಲಾರ ಜಿಲ್ಲಾ ಬಂದ್ ಮಾಡುವುದಾಗಿ ರೈತ ಮುಖಂಡರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ