ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತನ ಮೇಲೆ ಮಾರಣಾಂತಿಕೆ ಹಲ್ಲೆ, ಆಸ್ಪತ್ರೆಗೆ ದಾಖಲು
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತರಾಗಿರುವ ಮಾಜಿ ಜಿಲ್ಲಾಪಂಚಾಯ್ತಿ ಅಧ್ಯಕ್ಷ ಎಂ.ಶ್ರೀನಿವಾಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಹೊಗಳಗೆರೆ ಬಳಿ ಬಾರ್ ಕಟ್ಟಡ ಕಾಮಗಾರಿಗೆ ಹೋಗಿದ್ದ ವೇಳೆ ಆರು ಜನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ.

ಕೋಲಾರ, ಅ.23: ಜಿಲ್ಲೆಯ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಅನಿಲ್ ಕುಮಾರ್ ಅನ್ನೋ ಗ್ರಾಮ ಪಂಚಾಯ್ತಿ ಸದಸ್ಯನನ್ನ ಕೊಲೆ ಮಾಡಿ ಹಂತಕರು ಎಸ್ಕೇಪ್ ಆಗಿದ್ದರು. ಈ ಘಟನೆ ಮಾಸುವ ಮುನ್ನವೇ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ex-Speaker Ramesh Kumar) ಆಪ್ತರಾಗಿರುವ ಮಾಜಿ ಜಿಲ್ಲಾಪಂಚಾಯ್ತಿ ಅಧ್ಯಕ್ಷ ಎಂ.ಶ್ರೀನಿವಾಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.
ಶ್ರೀನಿವಾಸಪುರ ಪಟ್ಟಣದ ಹೊರವಲಯದ ಹೊಗಳಗೆರೆ ಬಳಿ ಆರು ಜನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ. ಹೊಗಳಗೆರೆ ಬಳಿ ಬಾರ್ ಕಟ್ಟಡ ಕಾಮಗಾರಿಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಹಲ್ಲೆಗೊಳಗಾದ ಶ್ರೀನಿವಾಸ್ ಅವರನ್ನು ಕೋಲಾರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ತುಮಕೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ; ಸ್ನೇಹಿತರಿಂದಲೇ ಕೊಲೆಯಾದ್ನಾ?
ಹಾಡಹಗಲೇ ಗ್ರಾಮ ಪಂಚಾಯ್ತಿ ಸದಸ್ಯ ಮರ್ಡರ್!
ಇತ್ತೀಚೆಗೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಭೀಕರ ಮರ್ಡರ್ ಆಗಿತ್ತು. ಅನಿಲ್ ಕುಮಾರ್ ಅನ್ನೋ ಗ್ರಾಮ ಪಂಚಾಯ್ತಿ ಸದಸ್ಯನನ್ನ ಕೊಲೆ ಮಾಡಿ ಹಂತಕರು ಎಸ್ಕೇಪ್ ಆಗಿದ್ದರು. ಮಾಲೂರು ತಾಲೂಕಿನ ಮೀಣಸಂದ್ರ ಗ್ರಾಮದ ಅನಿಲ್, ಜಯಮಂಗಲ ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದ. ಮಾಲೂರು ಶಾಸಕ ಕೆ.ವೈ ನಂಜೇಗೌಡ ಆಪ್ತನಾಗಿದ್ದ ಅನಿಲ್ ರಾಜಕೀಯದಲ್ಲಿ ಬೆಳೆಯುತ್ತಾ ಒಳ್ಳೆ ಹೆಸರು ಮಾಡಿದ್ದ. ಇದ್ರ ನಡುವೆ ರಾಜಕೀಯ ವಿರೋಧಿಗಳ ಕೋಪಕ್ಕೆ ಕಾರಣವಾಗಿದ್ದ. ಹೀಗಿದ್ದವನು ಅ.20ರಂದು ಹೆಣವಾಗಿದ್ದ. ಎಂದಿನಂತೆ ತನ್ನ ದ್ವಿಚಕ್ರ ವಾಹನದಲ್ಲಿ ಸಂಜೆ ನಾಲ್ಕು ಗಂಟೆ ಸುಮಾರಿಗೆ ಮಾಲೂರು ಪಟ್ಟಣದ ಕಡೆಗೆ ಅನಿಲ್ ಬರುವಾಗ ಹಿಂಬಾಲಿಸಿಕೊಂಡು ಬಂದ ಅಪರಿಚಿತರು ಮಚ್ಚಿನಿಂದ ಅನಿಲ್ ಮೇಲೆ ಅಟ್ಯಾಕ್ ಮಾಡಿ ಎಸ್ಕೇಪ್ ಆಗಿದ್ದರು
ಇನ್ನು ಅನಿಲ್ ಕುಟುಂಬ ಮತ್ತೊಂದು ಕುಟುಂಬದ ನಡುವೆ ಆಗಾಗ ಜಗಳ ಆಗ್ತಿತ್ತಂತೆ. ಮೊನ್ನೆ ನಡೆದ ಗಣೇಶ ಹಬ್ಬದ ದಿನ ಆರ್ಕೆಸ್ಟ್ರ ಆಯೋಜನೆ ಮಾಡಿದ್ದ ವೇಳೆ ಅನಿಲ್ ಹಾಗೂ ಗ್ರಾಮದ ಕೆಲವರ ನಡುವೆ ಗಲಾಟೆ ಆಗಿತ್ತಂತೆ. ಮತ್ತೊಂದು ವಿಚಾರ ಏನಂದ್ರೆ ಅನಿಲ್ ಕೊಲೆ ಆಗುವ ಕೆಲ ಹೊತ್ತಿನ ಹಿಂದೆಯಷ್ಟೇ ಸಾಕಷ್ಟು ವರ್ಷಗಳಿಂದ ಮಾತನಾಡದೆ ಇದ್ದ ಓರ್ವ ವ್ಯಕ್ತಿ ಅನಿಲ್ ಜೊತೆ ಆತ್ಮೀಯವಾಗಿ ಮಾತನಾಡಿದಾರೆ. ಹೀಗಾಗಿ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸ್ತಿರೋ ಪೊಲೀಸರು ಒಬ್ಬನನ್ನ ವಶಕ್ಕೆ ಪಡೆದಿದ್ದಾರೆ.
ಅನ್ಯ ಜಾತಿಯ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಅನಿಲ್‌ಗೆ ಒಬ್ಬಳು ಹೆಣ್ಣು ಮಗಳು ಸಹ ಇದ್ದಾಳೆ. ಅನಿಲ್‌ನ ಸಾವು ಇಡೀ ಕುಟುಂಬವೇ ಕಂಗಾಲಾಗುವಂತೆ ಮಾಡಿದೆ. ಅನಿಲ್ ಕೊಲೆ ಬಳಿಕ ಈಗ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆದಿದ್ದು ಜಿಲ್ಲೆಯಲ್ಲಿ ಆತಂಕ ಹೆಚ್ಚಿದಿದೆ.
ಕೋಲಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ