ಗಂಗಮ್ಮನ ದೇಗುಲದ ಮುಂದೆಯೇ ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ಹತ್ಯೆ; ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಚ್ಚಿ ಕೊಲೆ

| Updated By: ಆಯೇಷಾ ಬಾನು

Updated on: Jun 07, 2022 | 1:42 PM

ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗ ಮುಳಬಾಗಿಲು ನಗರಸಭೆ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಜಗನ್ ಮೋಹನ್ ಮೇಲೆ ದಾಳಿ ನಡೆಸಿ ಕೊಲೆ ಮಾಡಲಾಗಿದೆ.

ಗಂಗಮ್ಮನ ದೇಗುಲದ ಮುಂದೆಯೇ ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ಹತ್ಯೆ; ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಚ್ಚಿ ಕೊಲೆ
ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್
Follow us on

ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ನಗರಸಭೆ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಜಗನ್ ಮೋಹನ್ ಹತ್ಯೆ ನಡೆದಿದೆ. ಇಂದು ಬೆಳಿಗ್ಗೆ ಮುತ್ಯಾಲಪೇಟೆಯ ಗಂಗಮ್ಮ ದೇವಾಲಯಕ್ಕೆ ಹೋಗುವಾಗ ಅಪರಿಚಿತ ಗುಂಪೊಂದು ಜಗನ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಜಗನ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಾಣ ಬಿಟ್ಟಿದ್ದಾರೆ. ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗ ಮೋಹನ್ ಮೇಲೆ ನಡೆದ ದಾಳಿಯಿಂದ ಕೋಲಾರ ಬೆಚ್ಚಿಬಿದ್ದಿದೆ. ಮುಳಬಾಗಿಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕೊಲೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದೆ. ಈ ದೃಶ್ಯದಲ್ಲಿ ಆರೋಪಿಗಳು ಕೊಲೆ ಮಾಡಿ ಪರಾರಿಯಾಗುವ ದೃಶ್ಯಗಳು ಸೆರೆಯಾಗಿದೆ. ಕೋಲಾರದ ಮೆಡಿಕಲ್ ಕಾಲೇಜು ಶವಾಗಾರದಲ್ಲಿ ಜಗನ್ ಮೋಹನ್ ಮೃತ ದೇಹ ಇರಿಸಲಾಗಿದೆ. ಶವಾಗಾರದ ಬಳಿ ರಾಜಕೀಯ ಮುಖಂಡರು, ಕಾಂಗ್ರೆಸ್ ಹಾಗೂ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಸೇರಿ ಹಲವು ಮುಖಂಡರು ಜಮಾಯಿಸಿದ್ದಾರೆ. ಕೊಲೆ ನಡೆದ ಸ್ಥಳಕ್ಕೆ ಕೋಲಾರ ಎಸ್ಪಿ ದೇವರಾಜ್ ಭೇಟಿ ನೀಡಿ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಸ್ಥಳೀಯರ ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹತ್ಯೆಯಾದ ಜಗನ್ ಮೋಹನ್ ಪುತ್ರ ಮಿಥುನ್ ಸಾಯಿಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ತಂದೆ ಜಗನ್ ಮೋಹನ್ ರೆಡ್ಡಿ ಯಾರಿಗೂ ಅನ್ಯಾಯಮಾಡಿಲ್ಲ. ನಮ್ಮ ತಂದೆ ಹತ್ತಾರು ಜನರಿಗೆ ಸಹಾಯ ಮಾಡುತ್ತಿದ್ದರು. ನಮ್ಮ ತಂದೆ ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆ ಕೊಡಿಸಬೇಕು. ನಮ್ಮ ತಂದೆ ಯಾರಿಗೂ ಮೋಸ ಮಾಡಿಲ್ಲ, ಜನರಿಗೋಸ್ಕರ ಬದುಕಿದ್ರು. ಎಂದಿನಂತೆಯೇ ಗಂಗಮ್ಮ ದೇವಸ್ಥಾನದ ಬಾಗಿಲು ತೆಗೆಯುತ್ತಿದ್ದರು. ದೇವಸ್ಥಾನದ ಬಾಗಿಲು ತೆಗೆಯಲು ಹೋದಾಗ ಕೊಲೆ ಮಾಡಿದ್ದಾರೆ. ನಮ್ಮ ತಂದೆ ಕೊಂದವರನ್ನು ಪೊಲೀಸರು ಹಿಡಿದು ಶಿಕ್ಷೆ ಕೊಡಿಸಬೇಕು ಎಂದು ಹತ್ಯೆಯಾದ ಜಗನ್ ಮೋಹನ್ ಪುತ್ರ ಮಿಥುನ್ ಸಾಯಿಕೃಷ್ಣ ಕಣ್ಣೀರು ಹಾಕಿದ್ದಾರೆ.

Published On - 7:32 am, Tue, 7 June 22