ಕೋಲಾರದಲ್ಲಿ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ, ಅತ್ಯಾಚಾರ ಶಂಕೆ; ಆರೋಪಿ ಪತ್ತೆಗೆ ತಂಡ ರಚನೆ

| Updated By: ಆಯೇಷಾ ಬಾನು

Updated on: Mar 05, 2024 | 8:53 AM

ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ನಾಗಶೆಟ್ಟಿಹಳ್ಳಿಯಲ್ಲಿ ಮಹಿಳೆಯ ಕೊಲೆಯಾಗಿದೆ. ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಇನ್ನು ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಪತ್ತೆಗೆ ಪೊಲೀಸರು ತಂಡ ರಚನೆ ಮಾಡಿದ್ದಾರೆ.

ಕೋಲಾರದಲ್ಲಿ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ, ಅತ್ಯಾಚಾರ ಶಂಕೆ; ಆರೋಪಿ ಪತ್ತೆಗೆ ತಂಡ ರಚನೆ
ಘಟನಾ ಸ್ಥಳದಲ್ಲಿ ನೆರೆದಿರುವ ಪೊಲೀಸರು
Follow us on

ಕೋಲಾರ, ಮಾರ್ಚ್​.05: ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ (Murder) ಮಾಡಲಾಗಿದ್ದು ಅತ್ಯಾಚಾರ ಶಂಕೆ ವ್ಯಕ್ತವಾಗಿದೆ. ಕೋಲಾರ ಜಿಲ್ಲೆ ಕೆಜಿಎಫ್ (KGF) ತಾಲೂಕಿನ ನಾಗಶೆಟ್ಟಿಹಳ್ಳಿಯಲ್ಲಿ ಕೆಜಿಎಫ್ ತಾಲೂಕಿನ ಐಪಲ್ಲಿ ಗ್ರಾಮದ 28 ವರ್ಷದ ಮಹಿಳೆ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಕೆಜಿಎಫ್ ಎಸ್​ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕೆಜಿಎಫ್ ಆಸ್ಪತ್ರೆಗೆ ಶವ ಸ್ಥಳಾಂತರ ಮಾಡಲಾಗಿದೆ. ಆರೋಪಿ ಪತ್ತೆಗಾಗಿ ತಂಡ ರಚನೆ ಮಾಡಲಾಗಿದೆ. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೀದರ್‌ ಜಿಲ್ಲೆಯ ವಿವಿಧೆಡೆ ಕಂಪಿಸಿದ ಭೂಮಿ

ಬೀದರ್​ ಜಿಲ್ಲೆಯ ಹಲವೆಡೆ ನಿನ್ನೆ ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದೆ. ಬೀದರ್ ತಾಲೂಕಿನ ರಾತ್ರಿ 7.40ರ ಸುಮಾರಿಗೆ ಇಸ್ಲಾಂಪುರ ಯರನಳ್ಳಿಯಲ್ಲಿ ಭೂಮಿ ಕಂಪಿಸಿದೆ. ಕಂಪನದ ತೀವ್ರತೆ 1.85ರಷ್ಟು ದಾಖಲಾಗಿದೆ. ಬಸವಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ 2.6ರಷ್ಟು ತೀವ್ರತೆ ದಾಖಲಾಗಿದೆ. ಬಸವಕಲ್ಯಾಣ ತಾಲೂಕಿನ ಯರಬಾಗನಲ್ಲಿ 3.2ರಷ್ಟು ತೀವ್ರತೆ ದಾಖಲಾಗಿದೆ.

ಇದನ್ನೂ ಓದಿ: ಇನ್ನು ಮುಂದೆ ಮೈಸೂರಿನ ಈ 31 ಕೇಂದ್ರಗಳಲ್ಲಿ ಸಿಗಲಿದೆ ಹಾವು ಕಡಿತಕ್ಕೆ ಚಿಕಿತ್ಸೆ

ಚಿಕ್ಕಮಗಳೂರಲ್ಲಿ ಮಂಗನ ಕಾಯಿಲೆಗೆ 3ನೇ ಬಲಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 71 ವರ್ಷದ ವೃದ್ಧ ಬಲಿಯಾಗಿದ್ದಾರೆ. ಎನ್.ಆರ್.ಪುರ ತಾಲೂಕಿನ ಮೇಲ್ಪಾಲ ಗ್ರಾಮದ ಬಸವ ಪೂಜಾರಿ ಮೃತ ದುರ್ದೈವಿ. ಕಳೆದ 3 ದಿನದ ಹಿಂದೆ ವೃದ್ಧನಲ್ಲಿ KFD ಸೋಂಕು ಪತ್ತೆಯಾಗಿತ್ತು. ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಈವರೆಗೆ KFDಯಿಂದ ಮೃತಪಟ್ಟವರ ಸಂಖ್ಯೆ 3ಕ್ಕೆ ಹೆಚ್ಚಳವಾಗಿದೆ.

ಮರಕ್ಕೆ ಕಾರು ಡಿಕ್ಕಿ ಮಗು ಸೇರಿ ಐವರು ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಐವರು ಸಾವನಪ್ಪಿದ್ದಾರೆ. ಸ್ಥಳದಲ್ಲೇ ನಾಲ್ವರು ದುರ್ಮರಣಕ್ಕಿಡಾಗಿದ್ರೆ, ಆಸ್ಪತ್ರೆಯಲ್ಲಿ ಮಗು ಕೊನೆಯುಸಿರೆಳೆದಿದೆ. ಆಂಧ್ರದ ಮೆಹಬೂಬನಗರ ಜಿಲ್ಲೆಯ ಕೊತಕೋಟ ಬೈಪಾಸ್‌ನಲ್ಲಿ ಘಟನೆ ನಡೆದಿದೆ. ಬಳ್ಳಾರಿ ಮೂಲದ ಫಾತೀಮಾ(50), ಅಬ್ದುಲ್ ರೆಹಮಾನ್(30) ಮಾರಿಯಾ(32), ವಾಸೀಂ(01), ಬುಸ್ರಾ(02) ಮೃತ ದುರ್ದೈವಿಗಳಾಗಿದ್ದಾರೆ, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ