ಕೋಲಾರ: ದತ್ತ ಮಾಲಧಾರಿಗಳಿದ್ದ ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ; ಮೂವರಿಗೆ ಗಾಯ

ಆರೋಪಿಗಳನ್ನು ಬಂಧಿಸುವ ಭರವಸೆ ಕೊಟ್ಟನಂತರ ಪ್ರತಿಭಟನೆ ಕೈಬಿಟ್ಟ ಪ್ರತಿಭಟನಾಕಾರರು ಬೇರೊಂದು ವಾಹನದಲ್ಲಿ ಹೊರಟರು. ಎಸ್​ಪಿ ಕಿಶೋರ್​ ಬಾಬು ಹಾಗೂ ಜಿಲ್ಲಾಧಿಕಾರಿ ಸೆಲ್ವಮಣಿ ನಗರದಲ್ಲಿ ರೌಂಡ್ಸ್ ಮಾಡಿ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಕೋಲಾರ ನಗರದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಕೋಲಾರ: ದತ್ತ ಮಾಲಧಾರಿಗಳಿದ್ದ ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ; ಮೂವರಿಗೆ ಗಾಯ
ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ;
Follow us
TV9 Web
| Updated By: preethi shettigar

Updated on:Nov 14, 2021 | 9:59 AM

ಕೋಲಾರ: ದತ್ತ ಮಾಲಾಧಾರಿಗಳು ಚಿಕ್ಕಮಗಳೂರಿನ ಬಾಬಾಬುಡ್ಡನಗಿರಿಯ ದತ್ತಪೀಠಕ್ಕೆ ಹೊರಟಿದ್ದರು. ಈ ವೇಳೆ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ (ನವೆಂಬರ್ 13) ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಕೋಲಾರದ ಶ್ರೀರಾಮ ಸೇನೆ ಕಾರ್ಯಕರ್ತರು ದತ್ತಮಾಲೆ ಧರಿಸಿ ದತ್ತಪೀಠಕ್ಕೆ ಒಂದು ಮಿನಿ ಬಸ್​ನಲ್ಲಿ ಹೊರಟಿದ್ದರು. ಬಸ್​ನಲ್ಲಿ ಜೈ ಶ್ರೀರಾಮ್ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿಕೊಂಡು ಹೋಗುತ್ತಿದ್ದರು. ಈ ವೇಳೆ ಕೋಲಾರದ ಕ್ಲಾಕ್ ಟವರ್ ಬಳಿಯ ವಿಶಾಲ್ ಮಾರ್ಟ್ ಎದುರು ಏಕಾಏಕಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ವಿಶಾಲ್ ಮಾರ್ಟ್ ಎದುರು ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ನಡೆದು, ವಸೀಂಬೇಗ್ ಎಂಬುವವರಿಗೆ ರೌಡಿ ಶೀಟರ್​ಗಳಾದ ಅಕ್ಬರ್, ಎಜಾಜ್ ಮತ್ತು ಜುಮ್ಮು ಎಂಬುವವರಿಂದ ಚಾಕು ಇರಿತವಾಗಿತ್ತು. ಈ ಸಂಬಂಧ ಮೂರು ಜನಕ್ಕೆ ಗಾಯಗಳಾಗಿ ಎಲ್ಲರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಸ್ಥಳದಲ್ಲಿ ಮಾತ್ರ ಜನರು ಗುಂಪು ಗುಂಪಾಗಿ ಹಾಗೆಯೇ ನಿಂತಿದ್ದರು. ಈ ವೇಳೆ ಘೋಷಣೆಗಳನ್ನು ಕೂಗುತ್ತಾ ದತ್ತಮಾಲಾಧಾರಿಗಳಿದ್ದ ಬಸ್ ಅದೇ ಮಾರ್ಗವಾಗಿ ತೆರಳುತ್ತಿತ್ತು. ಆಗ ಅಲ್ಲಿದ್ದ ಕೆಲವು ಕಿಡಿಗೇಡಿಗಳು ಇದ್ದಕ್ಕಿದಂತೆ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ ಬಸ್ ಅಡ್ಡಗಟ್ಟಿದ್ದಾರೆ.

ಈ ವೇಳೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ದತ್ತ ಮಾಲಾಧಾರಿಗಳಿದ್ದ ಬಸ್ ಅಲ್ಲಿಂದ ತಕ್ಷಣ ಹೊರಟಿತ್ತು. ಆದರೂ ಬಸ್​ನಲ್ಲಿದ್ದ ಮೂವರಿಗೆ ಗಾಯಗಳಾಗಿದೆ. ಇನ್ನು ವಿಷಯ ತಿಳಿದ ಕೋಲಾರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಯಂತ್ರಿಸಿದರಾದರೂ. ಶ್ರೀರಾಮ ಸೇನೆ ಕಾರ್ಯಕರ್ತರು ಹಾಗೂ ದತ್ತ ಮಾಲಾಧಾರಿಗಳು ಕೋಲಾರ ನಗರ ಠಾಣೆ ಎದುರು ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಿದರು.ಅಲ್ಲದೆ ಇಡೀ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಆರೋಪಿಗಳನ್ನು ಬಂಧಿಸುವ ಭರವಸೆ ಕೊಟ್ಟನಂತರ ಪ್ರತಿಭಟನೆ ಕೈಬಿಟ್ಟ ಪ್ರತಿಭಟನಾಕಾರರು ಬೇರೊಂದು ವಾಹನದಲ್ಲಿ ಹೊರಟರು. ಎಸ್​ಪಿ ಕಿಶೋರ್​ ಬಾಬು ಹಾಗೂ ಜಿಲ್ಲಾಧಿಕಾರಿ ಸೆಲ್ವಮಣಿ ನಗರದಲ್ಲಿ ರೌಂಡ್ಸ್ ಮಾಡಿ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಕೋಲಾರ ನಗರದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ದತ್ತ ಮಾಲಾಧಾರಿಗಳು ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ಪ್ರಕರಣ; 100 ಜನರ ವಿರುದ್ಧ ಎಫ್​ಐಆರ್​ ದಾಖಲು ಶ್ರೀರಾಮ ಸೇನೆ ಮುಖಂಡ ಅರುಣ್ ನೀಡಿರುವ ದೂರು ಆಧರಿಸಿ 100 ಜನರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯುತ್ತಿರುವ ದತ್ತಮಾಲ ಅಭಿಯಾನಕ್ಕೆ ತೆರಳುತ್ತಿದ್ದ 25 ಜನ ಬಸ್​ನಲ್ಲಿ ತೆರಳುತ್ತಿದ್ದರು ಈ ವೇಳೆ ಕಲ್ಲು ತೂರಾಟ ನಡೆದಿದೆ. ಪ್ರಕರಣ ಖಂಡಿಸಿ ತಡರಾತ್ರಿ ನಗರ ಪೊಲೀಸ್ ಠಾಣೆಯ ಮುಂಭಾಗ ಶ್ರೀರಾಮಸೇನೆ ಪ್ರತಿಭಟನೆ ನಡೆಸಿತ್ತು. ಪ್ರತಿಭಟನಕಾರರ ಮನವೊಲಿಸಿ ಭದ್ರತೆ ಒದಗಿಸಿ ಬಸ್​ನಲ್ಲಿ ದತ್ತಪೀಠಕ್ಕೆ ಪೊಲೀಸರು ಕಳುಹಿಸಿದ್ದರು. ಸದ್ಯ 100 ಜನರ ವಿರುದ್ಧ ಎಫ್​ಐಆರ್​ ದಾಖಲು ಮಾಡಿದ್ದು, ಕಿಡಿಗೇಡಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಆಟೋ ಚಾಲಕನನ್ನು ವಿವಸ್ತ್ರಗೊಳಿಸಿ, ಮೂತ್ರ ವಿಸರ್ಜನೆ ಮಾಡಿ ಹಲ್ಲೆ ಆರೋಪ; ವೈದ್ಯನನ್ನು ಬಂಧಿಸಿದ ಪೊಲೀಸ್

ಮಂಡ್ಯ: ಮತಗಟ್ಟೆ ಬಳಿ ನಿಂತಿದ್ದ ಗ್ರಾಮ ಪಂಚಾಯತಿ ಚುನಾವಣಾ ಅಭ್ಯರ್ಥಿ ಮೇಲೆ ಕಲ್ಲು ತೂರಾಟ

Published On - 9:17 am, Sun, 14 November 21

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ