Kolar: ಮೊಬೈಲ್ ಫೋನ್ ಸಾಗಿಸುತ್ತಿದ್ದ ಲಾರಿ ದರೋಡೆ; 6 ಕೋಟಿ ಮೌಲ್ಯದ ಎಂಐ ಫೋನ್​ಗಳ ಕಳ್ಳತನ

Crime News: ತಮಿಳುನಾಡಿನ ಕಾಂಚಿಪುರಂನಿಂದ ಬೆಂಗಳೂರಿಗೆ ಮೊಬೈಲ್ ಲೋಡ್ ಬರುತ್ತಿತ್ತು. ಆಗ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇ ಘಟನೆ ನಡೆದಿದೆ. ಸುಮಾರು ಆರು ಕೋಟಿ ಮೌಲ್ಯದ ಮೊಬೈಲ್​ಗಳು ದರೋಡೆ ಆಗಿವೆ ಎಂದು ತಿಳಿದುಬಂದಿದೆ.

Kolar: ಮೊಬೈಲ್ ಫೋನ್ ಸಾಗಿಸುತ್ತಿದ್ದ ಲಾರಿ ದರೋಡೆ; 6 ಕೋಟಿ ಮೌಲ್ಯದ ಎಂಐ ಫೋನ್​ಗಳ ಕಳ್ಳತನ
ಕೋಲಾರದಲ್ಲಿ ಲಾರಿ ದರೋಡೆ
Follow us
TV9 Web
| Updated By: ganapathi bhat

Updated on:Aug 06, 2021 | 4:38 PM

ಕೋಲಾರ: ಮೊಬೈಲ್ ಫೋನ್ ಸಾಗಿಸುತ್ತಿದ್ದ ಲಾರಿ ದರೋಡೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗ್ರಾಮ ದೇವರಾಯಸಮುದ್ರ ಬಳಿಯ ರಾಷ್ಟ್ರೀಯ ಹೆದ್ದಾರೆ 75 ರಲ್ಲಿ ನಡೆದಿದೆ. ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ದರೋಡೆ ಆಗಿದೆ ಎಂದು ತಿಳಿದುಬಂದಿದೆ. ಎಂಐ ಕಂಪನಿಗೆ ಸೇರಿದ ಮೊಬೈಲ್ ಫೋನ್‌ಗಳ ದರೋಡೆ ಮಾಡಲಾಗಿದ್ದು, ಮೊಬೈಲ್​ನ್ನು ತಮಿಳುನಾಡಿನಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಕೃತ್ಯ ನಡೆದಿದೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತಮಿಳುನಾಡಿನ ಕಾಂಚಿಪುರಂನಿಂದ ಬೆಂಗಳೂರಿಗೆ ಮೊಬೈಲ್ ಲೋಡ್ ಬರುತ್ತಿತ್ತು. ಆಗ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇ ಘಟನೆ ನಡೆದಿದೆ. ಸುಮಾರು ಆರು ಕೋಟಿ ಮೌಲ್ಯದ ಮೊಬೈಲ್​ಗಳು ದರೋಡೆ ಆಗಿವೆ ಎಂದು ತಿಳಿದುಬಂದಿದೆ.

ಚಿಕ್ಕಮಗಳೂರು: ದರೋಡೆಕೋರರನ್ನು ಬಂಧಿಸಿದ ಪೊಲೀಸರಿಗೆ ಮೆಚ್ಚುಗೆ; 1 ಲಕ್ಷ ರೂ. ಬಹುಮಾನ ಹೈಟೆಕ್ ದರೋಡೆಕೋರರನ್ನು ಬಂಧಿಸಿದ ಪೊಲೀಸರಿಗೆ ಜುಲೈ 20ರಂದು ಡಿಜಿ ಐಜಿಪಿ ಪ್ರವೀಣ್ ಸೂದ್ ಬಹುಮಾನ ಘೋಷಿಸಿದ್ದರು. ಹೈಟೆಕ್ ದರೋಡೆಕೋರರನ್ನು ಬಂಧಿಸಿದ ಪೊಲೀಸರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇವರಿಗೆ 1 ಲಕ್ಷ ಬಹುಮಾನ ನೀಡಿ ಗೌರವಿಸಿದ್ದರು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪೊಲೀಸರ ಕಾರ್ಯಾಚರಣೆ ವೇಳೆ ಹೆದ್ದಾರಿಯಲ್ಲಿ ದರೋಡೆ ಮಾಡಲು ಯತ್ನಿಸುತ್ತಿದ್ದ ನಾಲ್ವರು ಹೈಟೆಕ್ ಕಳ್ಳರು ಸೆರೆ ಸಿಕ್ಕಿದ್ದರು. ಬಂಧಿತರಿಂದ 10 ಸಾವಿರ ನಗದು ಸೇರಿದಂತೆ 2 ರಿವಾಲ್ವರ್, 30 ಬುಲೆಟ್ಸ್, ಚಾಕು, ಬೈಕ್ ವಶಕ್ಕೆ ಪಡೆಯಲಾಗಿತ್ತು. ತನಿಖೆ ವೇಳೆ ಉತ್ತರ ಪ್ರದೇಶದಿಂದ ರಿವಾಲ್ವರ್ ಖರೀದಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿತ್ತು.

ಜೂಜಾಟದ ಅಡ್ಡೆಯನ್ನೇ ಟಾರ್ಗೆಟ್ ಮಾಡಿಕೊಂಡಿದ್ದ ನಾಲ್ವರ ಈ ತಂಡ, ಜೂಜಾಡುತ್ತಿದ್ದ ಸ್ಥಳಕ್ಕೆ ಹೋಗಿ ಗಾಳಿಯಲ್ಲಿ ಫೈರ್ ಮಾಡಿ ಹಣ ದೋಚುತ್ತಿದ್ದರು. ಅಲ್ಲದೆ ಗ್ಯಾಂಗ್ ವಾರ್ ನಡೆಸುವುದಕ್ಕೆ ಈ ತಂಡ ಹೊಂಚುಹಾಕಿತ್ತು. ಇನ್ನು ಕೆಲವು ದಿನಗಳ ಹಿಂದೆ ಹಾಸನದ ಸಮೀಪ ಯಾಚನಹಳ್ಳಿ ಚೇತನ್ ಮೇಲೆ ಫೈರ್ ಕೂಡ ಮಾಡಿದ್ದರು. ಸದ್ಯ ಮಂಡ್ಯದ ಶಿವಕುಮಾರ್, ಹೊಳೆನರಸೀಪುರದ ಕುಮಾರಸ್ವಾಮಿ, ಜಾರ್ಖಂಡ್ ಮೂಲದ ಅಜಯ್ ಕುಮಾರ್ ಸಿಂಗ್, ಮೂಡಿಗೆರೆಯ ಶಿವಕುಮಾರ್​ರನ್ನು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ: Shocking News: ಪೊಲೀಸರಂತೆ ಬಸ್ ನಿಲ್ಲಿಸಿ 1.2 ಕೋಟಿ ರೂ. ಕದ್ದೊಯ್ದ ಕಳ್ಳರು; ಸಿನಿಮಾ ಸ್ಟೈಲ್​ನಲ್ಲಿ ದರೋಡೆ!

ಎಟಿಎಂ ದರೋಡೆ ಕೇಸ್ ತನಿಖೆ ವೇಳೆ ಕಾರು ಕಳ್ಳತನ ಬೆಳಕಿಗೆ; 1.80 ಕೋಟಿ ರೂ ಮೌಲ್ಯದ 20 ಕಾರುಗಳ ಜಪ್ತಿ

(Mobile Theft Lorry Robbery in Kolar 6 Crore Loss estimated MI Mobile Phones Robbery)

Published On - 4:29 pm, Fri, 6 August 21

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ