ಶ್ರೀರಾಮ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ ಪ್ರಕರಣ; 6 ಶಂಕಿತರನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭ್ಯ

ಪಟ್ಟಣದಲ್ಲಿ ಕಿಡಿಗೇಡಿಗಳು ನಿನ್ನೆ ರಾತ್ರಿ ಕಲ್ಲು ತೂರಾಟ ನಡೆಸಿದ್ದರು. ಕಾರುಗಳು, ಅಂಗಡಿಗಳು, ಸವಾರರ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಕಲ್ಲು ತೂರಾಟ ನಡೆಸಿ ಕಿಡಿಗೇಡಿಗಳು ಬೈಕ್​ಗೆ ಬೆಂಕಿ ಹಚ್ಚಿದ್ದರು. ಇದೇ ವೇಳೆ ವಿದ್ಯುತ್​ ಸಂಪರ್ಕ ಕೂಡ ಕಡಿತಗೊಂಡಿತ್ತು.

ಶ್ರೀರಾಮ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ ಪ್ರಕರಣ; 6 ಶಂಕಿತರನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭ್ಯ
ಶೋಭಾಯಾತ್ರೆ
Follow us
| Updated By: ganapathi bhat

Updated on:Apr 09, 2022 | 9:56 AM

ಕೋಲಾರ: ಶ್ರೀರಾಮ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ 6 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಟಿವಿ9ಗೆ ಉನ್ನತ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಮೊಬೈಲ್, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ತಡರಾತ್ರಿವರೆಗೂ ಮೊಬೈಲ್, ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ಮಾಡಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರ ತಲಾಶ್ ಮುಂದುವರಿದಿದೆ. ಘಟನೆಯ ಬಳಿಕ ಇದೀಗ ಕೋಲಾರ ಜಿಲ್ಲೆ ಮುಳಬಾಗಿಲು ಸಹಜ‌ ಸ್ಥಿತಿಗೆ ಮರಳುತ್ತಿದೆ. ಪಟ್ಟಣದಲ್ಲಿ ಕಿಡಿಗೇಡಿಗಳು ನಿನ್ನೆ ರಾತ್ರಿ ಕಲ್ಲು ತೂರಾಟ ನಡೆಸಿದ್ದರು. ಕಾರುಗಳು, ಅಂಗಡಿಗಳು, ಸವಾರರ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಕಲ್ಲು ತೂರಾಟ ನಡೆಸಿ ಕಿಡಿಗೇಡಿಗಳು ಬೈಕ್​ಗೆ ಬೆಂಕಿ ಹಚ್ಚಿದ್ದರು. ಇದೇ ವೇಳೆ ವಿದ್ಯುತ್​ ಸಂಪರ್ಕ ಕೂಡ ಕಡಿತಗೊಂಡಿತ್ತು.

ಘಟನಾ ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಎಸ್​ಪಿಯಿಂದ ಐಜಿಪಿ ಮಾಹಿತಿ ಪಡೆದಿದ್ದಾರೆ. ಪಟ್ಟಣದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಹೆಚ್ಚುವರಿಯಾಗಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಕಲ್ಲು ತೂರಾಟದ ವೇಳೆ ಪವರ್​ ಕಟ್ ಕುರಿತು ಪರಿಶೀಲನೆ ಮಾಡಲಾಗುತ್ತಿದೆ. ಎಲ್ಲವೂ ತನಿಖೆ ಹಂತದಲ್ಲಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ಬಳಿಕ ಕೇಂದ್ರ ವಲಯ ಐಜಿಪಿ ಎಂ. ಚಂದ್ರಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.

ಶೋಭಾಯಾತ್ರೆ ವೇಳೆ ಕಲ್ಲು ತೂರಾಟ ಪ್ರಕರಣ ಹಿನ್ನೆಲೆ ಕೋಲಾರ ಜಿಲ್ಲೆ ಮುಳುಬಾಗಿಲು ತಾಲೂಕಿನಲ್ಲಿ ಟೈಟ್​ ಸೆಕ್ಯೂರಿಟಿ ನೀಡಲಾಗಿದೆ. ಅಹಿತಕರ ಘಟನೆಗಳು ನಡೆಯಂತೆ ಪೊಲೀಸ್​ ಬಂದೋಬಸ್ತ್​ ಇದೆ. 6 DAR, 2 ಕೆಎಸ್​ಆರ್​ಪಿ ತುಕಡಿ, 6 ಪಿಐ, ಇಬ್ಬರು DySP ಹಾಗೂ ಕೋಲಾರ ಎಸ್​ಪಿ ಘಟನಾ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಕಲ್ಲು ತೂರಾಟ ಪ್ರಕರಣದಲ್ಲಿ ಲಾಠಿ ಚಾರ್ಜ್ ನಡೆದ ರಸ್ತೆಯಲ್ಲಿ ಅಂಗಡಿಗಳ ಗಾಜು ಪುಡಿ ಆಗಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಆಟೋ ಮೊಬೈಲ್ ಶಾಪ್, 2 ಕಾರುಗಳ ಗಾಜು ಪುಡಿಪುಡಿ ಆಗಿದೆ. ಮುಳಬಾಗಿಲು ಸೋಮೇಶ್ವರ ಪಾಳ್ಯ ರಸ್ತೆಯಲ್ಲಿರುವ ಮಳಿಗೆಗಳಿಗೆ ಕಲ್ಲೆಸೆದು ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ. ಇದೀಗ ಸಿಸಿಟಿವಿ ದೃಶ್ಯಗಳನ್ನು ಕಲೆ ಹಾಕುತ್ತಿರುವ ಪೊಲೀಸರು ಎಲ್ಲಾ ಆರೋಪಿಗಳನ್ನು ಪತ್ತೆಹಚ್ಚಲು ಕಾರ್ಯೋನ್ಮುಖರಾಗಿದ್ದಾರೆ.

ಇದನ್ನೂ ಓದಿ: ಶ್ರೀರಾಮ ಶೋಭಾಯಾತ್ರೆ ವೇಳೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ; ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಾಠಿ ಪ್ರಹಾರ

ಇದನ್ನೂ ಓದಿ: ಕರಗ ದರ್ಗಾಗೆ ಹೋಗುವ ಸಂಪ್ರದಾಯಕ್ಕೆ ತೀವ್ರ ವಿರೋಧ; 300 ವರ್ಷಗಳ ನಂಟನ್ನು ಮುರಿಯಲು ಮುಂದಾದ ಹಿಂದೂ ಪರ ಸಂಘಟನೆಗಳು

Published On - 8:02 am, Sat, 9 April 22

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ