Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಸ್ನೇಹಿತರಿಂದಲೇ ಅಪ್ರಾಪ್ತ ಬಾಲಕನ ಹತ್ಯೆ; ಕಾಲೇಜು ಮಕ್ಕಳಿಗೆ ಕಾನೂನು ಜಾಗೃತಿ ಮೂಡಿಸಲು ಮುಂದಾದ ಪೊಲೀಸರು

ಅಪ್ರಾಪ್ತ ಬಾಲಕನನ್ನು ಅವರ ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿ ವಿಕೃತಿ ಮೆರೆದಿರುವ ಪ್ರಕರಣ, ಇದೀಗ ಕೋಲಾರ ಜನರನ್ನು ಬೆಚ್ಚಿ ಬೀಳಿಸಿದೆ. ಅಲ್ಲದೆ ಈ ಘಟನೆ ಖಂಡಿಸಿ ಸೇವ್ ಕೋಲಾರ, ಸೇವ್​ ಯೂತ್ಸ್​ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್​ ಇಲಾಖೆ ಹಾಗೂ ಜಿಲ್ಲಾಡಳಿತ ಈಗ ಅಲರ್ಟ್​ ಆಗಿದ್ದು, ಕಾನೂನು ಅರಿವು ಮೂಡಿಸಲು ಮುಂದಾಗಿದೆ.

ಕೋಲಾರದಲ್ಲಿ ಸ್ನೇಹಿತರಿಂದಲೇ ಅಪ್ರಾಪ್ತ ಬಾಲಕನ ಹತ್ಯೆ; ಕಾಲೇಜು ಮಕ್ಕಳಿಗೆ ಕಾನೂನು ಜಾಗೃತಿ ಮೂಡಿಸಲು ಮುಂದಾದ ಪೊಲೀಸರು
ಕೋಲಾರದಲ್ಲಿ ಕಾನೂನು ಜಾಗೃತಿ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 07, 2023 | 7:09 PM

ಕೋಲಾರ, ನ.07: ನಗರದಲ್ಲಿ ನವೆಂಬರ್​ 4 ರಂದು ನಡೆದ ಅಪ್ರಾಪ್ತ ಬಾಲಕನ ಬರ್ಬರ ಹತ್ಯೆ ಪ್ರಕರಣ, ಇಡೀ ಕೋಲಾರ(Kolar) ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದೆ. ಅಷ್ಟೇ ಅಲ್ಲದೆ ಜನರು ತಮ್ಮ ಮಕ್ಕಳನ್ನು ಶಾಲಾ-ಕಾಲೇಜಿಗೆ ಕಳಿಸಲು ಹೆದರುವ ಸ್ಥಿತಿ ನಿರ್ಮಾಣವಾಗಿದೆ. ಎಲ್ಲಿ ತಮ್ಮ ಮಕ್ಕಳು ಹಾದಿ ತಪ್ಪುತ್ತಾರೋ ಎನ್ನುವ ಭಯ ಶುರುವಾಗಿದೆ. ಅದಕ್ಕೆ ತಕ್ಕಂತೆ ಸಾಮಾಜಿಕ ಜಾಲತಾಣಗಳಲ್ಲಿ ಸೇವ್​ ಕೋಲಾರ(Save Kolar), ಸೇವ್ ಯೂತ್ಸ್(Save Youths)​ ಅಭಿಯಾನ ಆರಂಭಿಸಲಾಗಿದೆ. ಇದರಿಂದ ಎಚ್ಚೆತ್ತಿರುವ ಪೊಲೀಸ್​ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಇಂದು(ನ.07) ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹಾಗೂ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ.

ಅಕ್ರಮ ಚಟುವಟಿಕೆ ನಡೆಯದಂತೆ ಕ್ರಮ

ಕೋಲಾರದ ಎಸ್​ಡಿಸಿ ಕಾಲೇಜು ಸೇರಿದಂತೆ ವಿವಿಧೆಡೆ ಪೊಲೀಸ್ ಅಧಿಕಾರಿಗಳು, ವಿದ್ಯಾರ್ಥಿಗಳಿಗೆ ಕಾನೂನಿನ ಪಾಠ ಹೇಳುವ ಕೆಲಸ ಮಾಡುತ್ತಿದ್ದಾರೆ. ಇನ್ನು ಮಕ್ಕಳು ಕೂಡ ಪೊಲೀಸರ ಮಾತುಗಳನ್ನು ಕೇಳಿ ಕೊಂಚ ಜಾಗೃತರಾಗುತ್ತಿದ್ದಾರೆ. ಅಲ್ಲದೆ ಕೋಲಾರದಲ್ಲಿ ನಡೆದ ಕೊಲೆಯ ಪ್ರಕರಣದ ಆತಂಕದಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ಮುಂದೆ ಕಾಲೇಜಿನಲ್ಲಿ ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ ಕ್ರಮವಹಿಸಲು ಕಾಲೇಜು ಆಡಳಿತ ಮಂಡಳಿಗಳೂ ನಿಯಮ ರೂಪಿಸುತ್ತಿವೆ.
ಇನ್ನು ಕೋಲಾರದಲ್ಲಿ ಕಳೆದ ಮೂರು ತಿಂಗಳಿಂದ ನಡೆಯುತ್ತಿರುವ ಸರಣಿ ಕೊಲೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಕೂಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳಿಗೆ ಕಾರಣವೇನು ಎನ್ನುವುದನ್ನು ಕಲೆ ಹಾಕುತ್ತಿದ್ದಾರೆ. ಪ್ರಮುಖವಾಗಿ ಕೋಲಾರ ಜಿಲ್ಲೆಗೆ ಆಂಧ್ರ, ತಮಿಳುನಾಡಿನಿಂದ, ಬರುವ ಅಕ್ರಮ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಕಡಿವಾಣ ಹಾಕಲು ಕೋಲಾರ ಜಿಲ್ಲೆಯ ಗಡಿಭಾಗಗಳಲ್ಲಿ ಚೆಕ್​ ಪೋಸ್ಟ್​ಗಳನ್ನು ನಿರ್ಮಾಣ ಮಾಡಿ ತಪಾಸಣೆ ಮಾಡಲು ಸೂಚನೆ ನೀಡಿದ್ದಾರೆ. ಅಲ್ಲದೆ ಕಾಲೇಜು ಆಡಳಿತ ಮಂಡಳಿಗಳ ಸಭೆ ಕರೆದು ಜಿಲ್ಲೆಯ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹೇರ್ ಕಟ್​, ಬಟ್ಟೆ ಸೇರಿದಂತೆ ಎಲ್ಲವನ್ನು ಬದಲಾಯಿಸಬೇಕು. ಜೊತೆಗೆ ಮಕ್ಕಳ ಮೇಲೆ ಕಾಲೇಜು ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ನಿಗಾ ವಹಿಸಬೇಕು ಎಂದು ಸೂಚಿಸಿದ್ದಾರೆ.
ಅದರ ಜೊತೆಗೆ ಜಿಲ್ಲೆಯಲ್ಲಿ ಅಬಕಾರಿ ಇಲಾಖೆಗೂ ಸೂಚನೆ ನೀಡಿ ಬೆಳ್ಳಂಬೆಳಿಗ್ಗೆ ಬಾರ್​ ಬಾಗಿಲು ತೆರೆಯುವ ಹಾಗೂ ಚಿಲ್ಲರೆ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುವವರ ಮೇಲೆ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ಒಟ್ಟಾರೆ ಕೋಲಾರ ಜಿಲ್ಲೆಯಲ್ಲಿ ಮೇಲಿಂದ ಮೇಲೆ ನಡೆಯುತ್ತಿರುವ ಕೊಲೆ ಪ್ರಕರಣಗಳು ಜಿಲ್ಲೆಯ ನಾಗರೀಕರನ್ನು ಬೆಚ್ಚಿ ಬೀಳಿಸಿದ್ದು, ಸದ್ಯ ಈ ಸರಣಿ ಕೊಲೆಗಳಿಗೆ ಕಡಿವಾಣ ಹಾಕುವುದು ಹೇಗೆ ಎಂದು ತಲೆ ಕೆಡಿಸಿಕೊಂಡಿದ್ದಾರೆ. ಈ ಹಿನ್ನಲೆ ಜಿಲ್ಲೆಯಲ್ಲಿ ಜನರಿಗೆ, ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಮೂಲಕ ಎಚ್ಚರಿಕೆ ವಹಿಸುವ ಕೆಲಸಕ್ಕೆ ಮುಂದಾಗಿದ್ದು, ಇದು ಎಷ್ಟರ ಮಟ್ಟಿಗೆ ಸಾಕಾರಗೊಳ್ಳುತ್ತದೆ ಎಂಬುದನ್ನು ​ಕಾದು ನೋಡಬೇಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು