AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Niranjan Vanalli: ಬೆಂಗಳೂರು ಉತ್ತರ ವಿವಿ ಕುಲಪತಿಯಾಗಿ ನಿರಂಜನ್ ವಾನಳ್ಳಿ ನೇಮಕ

ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥರಾಗಿರುವ ಪ್ರೊಫೆಸರ್ ನಿರಂಜನ ವಾನಳ್ಳಿ ಅವರನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕ ಮಾಡಿ ರಾಜಭವನದಿಂದ ಅಧಿಸೂಚನೆ ಹೊರಡಿಸಲಾಗಿದೆ.

Niranjan Vanalli: ಬೆಂಗಳೂರು ಉತ್ತರ ವಿವಿ ಕುಲಪತಿಯಾಗಿ ನಿರಂಜನ್ ವಾನಳ್ಳಿ ನೇಮಕ
ನಿರಂಜನ್ ವಾನಳ್ಳಿ
TV9 Web
| Edited By: |

Updated on: Nov 30, 2021 | 10:00 PM

Share

ಕೋಲಾರ: ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಕುಲಪತಿಯಾಗಿ ಪ್ರೊ. ನಿರಂಜನ್ ವಾನಳ್ಳಿ ನೇಮಕಗೊಂಡಿದ್ದಾರೆ. 4 ವರ್ಷಗಳ ಅವಧಿಗೆ ವಿಸಿಯಾಗಿ ನಿರಂಜನ್ ವಾನಳ್ಳಿ ನೇಮಕವಾಗಿದ್ದಾರೆ. ಕುಲಪತಿಯಾಗಿ ನೇಮಕಗೊಳಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಮೈಸೂರು ವಿಶ್ವ ವಿದ್ಯಾಲಯದ ಸಂವಹನ ವಿಭಾಗದ ಮುಖ್ಯಸ್ಥ ನಿರಂಜನ್ ವಾನಳ್ಳಿ, ಕಳೆದ 8 ತಿಂಗಳಿಂದ ಖಾಲಿಯಿದ್ದ ಉತ್ತರ ವಿವಿಯ ವಿಸಿ ಹುದ್ದೆ ಅಲಂಕರಿಸಿದ್ದಾರೆ. ಸಿದ್ದರಾಮಯ್ಯ ಆಪ್ತ ಪ್ರೊಫೆಸರ್‌ ಬಿ.ಕೆ. ರವಿಗೆ ವಿಸಿ ಸ್ಥಾನ ಕೈತಪ್ಪಿದೆ.

ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥರಾಗಿರುವ ಪ್ರೊಫೆಸರ್ ನಿರಂಜನ ವಾನಳ್ಳಿ ಅವರನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕ ಮಾಡಿ ರಾಜಭವನದಿಂದ ಅಧಿಸೂಚನೆ ಹೊರಡಿಸಲಾಗಿದೆ. ಅಧಿಕಾರ ವಹಿಸಿಕೊಂಡ ದಿನದಿಂದ 4 ವರ್ಷಗಳ ಅವಧಿ ಅಥವಾ ಅವರಿಗೆ 67 ವರ್ಷ ತುಂಬುವವರೆಗೆ ಯಾವುದು ಬೇಗ ಮುಗಿಯುತ್ತದೆಯೋ ಅಲ್ಲಿಯವರೆಗೂ ಅವರು ಅಧಿಕಾರದಲ್ಲಿರಲಿದ್ದಾರೆ.

ಕೋಲಾರದಲ್ಲಿನ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಮೊದಲ ಕುಲಪತಿಯಾಗಿ ಪ್ರೊ.ಟಿ.ಡಿ.ಕೆಂಪರಾಜು 26 ಜುಲೈ, 2017 ರಲ್ಲಿ ನೇಮಕಗೊಂಡಿದ್ದರು. ಅವರ 4 ವರ್ಷಗಳ ಅವಧಿ 25 ಜುಲೈ, 2021 ರಲ್ಲಿ ಪೂರ್ಣಗೊಂಡಿತ್ತು. ಬಳಿಕ ಹಿರಿಯ ಡೀನ್ ಡಾ.ಡಿ. ಕುಮುದಾ ಅವರನ್ನು ಪ್ರಭಾರ ಕುಲಪತಿಯನ್ನಾಗಿ ನೇಮಕ ಮಾಡಲಾಗಿತ್ತು. ಇದೀಗ ಕುಲಪತಿ ಶೋಧನಾ ಸಮಿತಿ ಶಿಫಾರಸ್ಸಿನ ಆಧಾರದ ಮೇರೆಗೆ ಪ್ರಾಧ್ಯಾಪಕ ಪ್ರೊ. ನಿರಂಜನ ವಾನಳ್ಳಿ ಅವರನ್ನು ನೂತನ ಕುಲಪತಿಯಾಗಿ ನೇಮಕ ಮಾಡಿ, ಕುಲಾಧಿಪತಿಗಳೂ ಆದ ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಮೈಸೂರು ವಿಶ್ವ ವಿದ್ಯಾಲಯದ 101ನೇ ಘಟಿಕೋತ್ಸವದ ಬಗ್ಗೆ ಕುಲಪತಿ ಪ್ರೊ. ಜಿ ಹೇಮಂತ್ ಕುಮಾರ್ ಮಾಹಿತಿ

ಇದನ್ನೂ ಓದಿ: Cyber Crime: ಸಹಾಯ ಕೇಳಿ ರಾಜ್ಯಪಾಲರ ಹೆಸರಿನಲ್ಲಿ KSOU ಕುಲಪತಿಗೆ ನಕಲಿ ಇ-ಮೇಲ್ ರವಾನೆ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ