ಸರ್ಕಾರಿ ಶಾಲೆ ಕೊಠಡಿಯಲ್ಲಿ ನಮಾಜ್ ಮಾಡಿದ ಪ್ರಕರಣ; ಶಾಲಾ ಮುಖ್ಯ ಶಿಕ್ಷಕಿ ಉಮಾದೇವಿ ಅಮಾನತು

ಶಾಲಾ ಕೊಠಡಿಯಲ್ಲಿ ನಮಾಜ್ ಮಾಡಲು ಅನುವು ಮಾಡಿಕೊಟ್ಟ ಆರೋಪದ ಹಿನ್ನೆಲೆ ಸ್ಥಳೀಯರು ಸೇರಿದಂತೆ ಹಿಂದೂ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಅದರಂತೆ ಬಿಇಓ ಗಿರಿಜೇಶ್ವರಿ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ನೀಡಿದ್ದಾರೆ.

ಸರ್ಕಾರಿ ಶಾಲೆ ಕೊಠಡಿಯಲ್ಲಿ ನಮಾಜ್ ಮಾಡಿದ ಪ್ರಕರಣ; ಶಾಲಾ ಮುಖ್ಯ ಶಿಕ್ಷಕಿ ಉಮಾದೇವಿ ಅಮಾನತು
ಶಾಲಾ ಮುಖ್ಯ ಶಿಕ್ಷಕಿ ಉಮಾದೇವಿ
Edited By:

Updated on: Jan 25, 2022 | 7:44 PM

ಕೋಲಾರ: ಸರ್ಕಾರಿ ಶಾಲೆ ಕೊಠಡಿಯಲ್ಲಿ ನಮಾಜ್(Namaz) ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲಾ ಮುಖ್ಯ ಶಿಕ್ಷಕಿ ಉಮಾದೇವಿಯನ್ನು ಅಮಾನತು (Suspend) ಮಾಡಲಾಗಿದೆ. ಮುಳಬಾಗಲು ಕ್ಷೇತ್ರ ಶಿಕ್ಷಣಾಧಿಕಾರಿ(BEO) ಗಿರಿಜೇಶ್ವರಿ ಅಮಾನತು ಮಾಡಿ ಆದೇಶ ನೀಡಿದ್ದಾರೆ. ಕೋಲಾರದ ಮುಳಬಾಗಲು ಪಟ್ಟಣದ ಬಳೆಚಂಗಪ್ಪ ಸರ್ಕಾರಿ ಶಾಲೆಯ ಕೊಠಡಿಯಲ್ಲಿ ಜನವರಿ 21 ರಂದು ವಿದ್ಯಾರ್ಥಿಗಳು ನಮಾಜ್​ ಮಾಡಿದ್ದು, ವಿವಾದಕ್ಕೆ ಕಾರಣವಾಗಿತ್ತು.

ಶಾಲಾ ಕೊಠಡಿಯಲ್ಲಿ ನಮಾಜ್ ಮಾಡಲು ಅನುವು ಮಾಡಿಕೊಟ್ಟ ಆರೋಪದ ಹಿನ್ನೆಲೆ ಸ್ಥಳೀಯರು ಸೇರಿದಂತೆ ಹಿಂದೂ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಅದರಂತೆ ಬಿಇಓ ಗಿರಿಜೇಶ್ವರಿ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ನೀಡಿದ್ದಾರೆ.

ನಮಾಜ್​ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಶನಿವಾರ (ಜನವಿರಿ 21) ಬೆಳಿಗ್ಗೆ ಹತ್ತಾರು ಜನ ಹಿಂದೂ ಸಂಘಟನೆ ಕಾರ್ಯಕರ್ತರು ಬಳೆನಂಜಪ್ಪ ಸರ್ಕಾರಿ ಶಾಲೆಗೆ ಭೇಟಿಕೊಟ್ಟು ಸರ್ವಧರ್ಮ ಸಮನ್ವಯ ಸಾರಬೇಕಿದ್ದ ಸ್ಥಳದಲ್ಲಿ ಈ ರೀತಿ ಪ್ರಾರ್ಥನೆ ಮಾಡಿರುವುದು ತಪ್ಪು ಎಂದು ಪ್ರತಿಭಟನೆ ಮಾಡಿದ್ದಾರೆ. ಅಲ್ಲದೆ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ಉಮಾದೇವಿ ಅವರ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆ.

ಮುಖ್ಯ ಶಿಕ್ಷಕಿ ಅವರ ಕಚೇರಿಗೆ ಬಂದ ಹತ್ತಾರು ಕಾರ್ಯಕರ್ತರು ನಮಾಜ್​ ಮಾಡಲು ಅವಕಾಶ ಮಾಡಿಕೊಟ್ಟ ಮುಖ್ಯಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಸ್ಥಳಕ್ಕೆ ಬಂದ ಡಿವೈಎಸ್​ಪಿ ಗಿರಿ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿ ನಂತರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿ ಕಳಿಸಿದ್ದಾರೆ.

ಬಿಇಓ ಗಿರಿಜೇಶ್ವರಿ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ನೀಡಿದ್ದಾರೆ.

ವಿಡಿಯೋದಲ್ಲಿ ಏನಿದೆ?

ಸರ್ಕಾರಿ ಶಾಲೆಯ ಕೊಠಡಿಯಲ್ಲಿ ನಮಾಜ್​ ಮಾಡುತ್ತಿದ್ದ ವಿಡಿಯೋ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ವಿವಾದ ಸೃಷ್ಟಿಯಾಯಿತು. ಈ ವಿಷಯವಾಗಿ ಪರ ವಿರೋಧ ಚರ್ಚೆಗಳು ನಡೆಯುತ್ತಿದ್ದವು. ವೈರಲ್​ ಆದ ವಿಡಿಯೋದಲ್ಲಿ ಬಳೆನಂಜಪ್ಪ ಸರ್ಕಾರಿ ಶಾಲೆ ಬೋರ್ಡ್​ ಹಾಗೂ ಅದೇ ಶಾಲೆಯ ಕೊಠಡಿಯೊಳಗೆ ಸುಮಾರು 15 ರಿಂದ 20 ಜನ ಮುಸ್ಲಿಂ ಸಮುದಾಯಕ್ಕೆ ಸೇರಿದ ಮಕ್ಕಳು ನಮಾಜ್​ ಮಾಡುತ್ತಿದ್ದು, ನಂತರ ಅಲ್ಲಿದ್ದ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ನಮಾಜ್​ ಮಾಡುವುದಕ್ಕೆ ಯಾರು ಅನುಮತಿ ಕೊಟ್ಟಿದ್ದು ಎಂದು ಮಾತನಾಡಿಸಲಾಗಿದೆ. ಆಗ ಅಲ್ಲಿದ್ದ ಒಬ್ಬ ವಿದ್ಯಾರ್ಥಿ ನಮ್ಮ ಶಾಲೆಯ ಮುಖ್ಯಶಿಕ್ಷಕಿ ಉಮಾದೇವಿ ಅನುಮಾತಿ ನೀಡಿದ್ದಾರೆ ಎಂದು ಹೇಳಿರುವುದು ಇದೆ.

ಇದನ್ನೂ ಓದಿ:

ಕೋಲಾರ: ವಿವಾದಕ್ಕೆ ಕಾರಣವಾಯ್ತು ಸರ್ಕಾರಿ ಶಾಲಾ ಕೊಠಡಿಯಲ್ಲಿ ಮಾಡಿದ ನಮಾಜ್​!

ಧಾರವಾಡ: ಕೊರೊನಾ ನಂತರ ಖಾಸಗಿ ಶಾಲೆಗಳಲ್ಲಿ ಹಾಜರಾತಿ ಇಳಿಕೆ, ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಳ!

Published On - 7:27 pm, Tue, 25 January 22