ತಿರುಪತಿಯಿಂದ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ 80 ಕೆಜಿ ಗಾಂಜಾ ವಶ
ಕೋಲಾರ: ಆಂಧ್ರದ ತಿರುಪತಿಯಿಂದ ತುಮಕೂರಿಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ವಡ್ಡರಳ್ಳಿ ಬಳಿ ಮಾದಕ ವಸ್ತು ನಿಗ್ರಹ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ, ಖಾಸಗಿ ಬಸ್‌ನಲ್ಲಿ ಸಂಚರಿಸುತ್ತಿದ್ದ ನಾಲ್ವರೂ ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳಿಂದ 80 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆಂಧ್ರದ ಪುಂಗನೂರಿನ ಬಿ.ಸಿ.ಕಾಲೋನಿಯ ರೆಡ್ಡಮ್ಮ ಸೇರಿ ನಾಲ್ವರನ್ನ ಬಂಧಿಸಲಾಗಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾದಕ ವಸ್ತು ನಿಗ್ರಹ […]
ಕೋಲಾರ: ಆಂಧ್ರದ ತಿರುಪತಿಯಿಂದ ತುಮಕೂರಿಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ವಡ್ಡರಳ್ಳಿ ಬಳಿ ಮಾದಕ ವಸ್ತು ನಿಗ್ರಹ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ, ಖಾಸಗಿ ಬಸ್‌ನಲ್ಲಿ ಸಂಚರಿಸುತ್ತಿದ್ದ ನಾಲ್ವರೂ ಆರೋಪಿಗಳನ್ನ ಬಂಧಿಸಿದ್ದಾರೆ.
ಆರೋಪಿಗಳಿಂದ 80 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆಂಧ್ರದ ಪುಂಗನೂರಿನ ಬಿ.ಸಿ.ಕಾಲೋನಿಯ ರೆಡ್ಡಮ್ಮ ಸೇರಿ ನಾಲ್ವರನ್ನ ಬಂಧಿಸಲಾಗಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾದಕ ವಸ್ತು ನಿಗ್ರಹ ದಳದ ಪೊಲೀಸರು ತಿಳಿಸಿದ್ದಾರೆ.