ತಿರುಪತಿಯಿಂದ ಬರುತ್ತಿದ್ದ ಖಾಸಗಿ ಬಸ್​ನಲ್ಲಿ 80 ಕೆಜಿ ಗಾಂಜಾ ವಶ

ಕೋಲಾರ: ಆಂಧ್ರದ ತಿರುಪತಿಯಿಂದ ತುಮಕೂರಿಗೆ ಬರುತ್ತಿದ್ದ ಖಾಸಗಿ ಬಸ್​ನಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ವಡ್ಡರಳ್ಳಿ ಬಳಿ ಮಾದಕ ವಸ್ತು ನಿಗ್ರಹ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ, ಖಾಸಗಿ ಬಸ್‌ನಲ್ಲಿ ಸಂಚರಿಸುತ್ತಿದ್ದ ನಾಲ್ವರೂ ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳಿಂದ 80 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆಂಧ್ರದ ಪುಂಗನೂರಿನ ಬಿ.ಸಿ.ಕಾಲೋನಿಯ ರೆಡ್ಡಮ್ಮ ಸೇರಿ ನಾಲ್ವರನ್ನ ಬಂಧಿಸಲಾಗಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾದಕ ವಸ್ತು ನಿಗ್ರಹ […]

ತಿರುಪತಿಯಿಂದ ಬರುತ್ತಿದ್ದ ಖಾಸಗಿ ಬಸ್​ನಲ್ಲಿ 80 ಕೆಜಿ ಗಾಂಜಾ ವಶ
ಸಾಧು ಶ್ರೀನಾಥ್​

Updated on: Nov 27, 2019 | 3:46 PM

ಕೋಲಾರ: ಆಂಧ್ರದ ತಿರುಪತಿಯಿಂದ ತುಮಕೂರಿಗೆ ಬರುತ್ತಿದ್ದ ಖಾಸಗಿ ಬಸ್​ನಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ವಡ್ಡರಳ್ಳಿ ಬಳಿ ಮಾದಕ ವಸ್ತು ನಿಗ್ರಹ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ, ಖಾಸಗಿ ಬಸ್‌ನಲ್ಲಿ ಸಂಚರಿಸುತ್ತಿದ್ದ ನಾಲ್ವರೂ ಆರೋಪಿಗಳನ್ನ ಬಂಧಿಸಿದ್ದಾರೆ.

ಆರೋಪಿಗಳಿಂದ 80 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆಂಧ್ರದ ಪುಂಗನೂರಿನ ಬಿ.ಸಿ.ಕಾಲೋನಿಯ ರೆಡ್ಡಮ್ಮ ಸೇರಿ ನಾಲ್ವರನ್ನ ಬಂಧಿಸಲಾಗಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾದಕ ವಸ್ತು ನಿಗ್ರಹ ದಳದ ಪೊಲೀಸರು ತಿಳಿಸಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us