ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ: ವಧು ದುರಂತ ಸಾವು

ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಡಿಕೊಂಡಿದ್ದು, ಗಲಾಟೆಯಲ್ಲಿ ತೀವ್ರ ಗಾಯಗೊಂಡಿದ್ದ ನವ ವಧು ದುರಂತ ಸಾವು ಕಂಡಿದ್ದಾಳೆ. ಇನ್ನು ಗಾಯಗೊಂಡಿರುವ ವರನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಘಟನೆ ನಡೆದಿದ್ದು ಬೇರೆ ದೇಶ, ರಾಜ್ಯದಲ್ಲಿ ಅಲ್ಲ. ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ: ವಧು ದುರಂತ ಸಾವು
ಲಿಖಿತ ಶ್ರೀ ಹಾಗೂ ನವೀನ್
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ರಮೇಶ್ ಬಿ. ಜವಳಗೇರಾ

Updated on:Aug 07, 2024 | 8:58 PM

ಕೋಲಾರ, (ಆಗಸ್ಟ್​ 07): ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದು,, ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ವಧು ಮೃತಪಟ್ಟಿದ್ದರೆ, ವರನ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್​​ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿದೆ. ವಧು ಲಿಖಿತ ಶ್ರೀ ಹಾಗೂ ನವೀನ್ ಇಂದು (ಆಗಸ್ಟ್​​ 07) ಸಪ್ತಪದಿ ತುಳಿದಿದ್ದಾರೆ. ಆದ್ರೆ, ಅದೇನಾಯ್ತೋ ಏನೋ ರೂಮ್​ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಧು ಲಿಖಿತ ಶ್ರೀ ಸಾವನ್ನಪ್ಪಿದ್ದಾಳೆ.

ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಚಂಬರಸನಹಳ್ಳಿ ಗ್ರಾಮದಲ್ಲಿ ಇಂದು(ಆಗಸ್ಟ್​ 07) ವಧು ಲಿಖಿತ ಶ್ರೀ ಹಾಗೂ ನವೀನ್ ಅದ್ಧೂರಿಯಾಗಿ ಮದುವೆ ಆಗಿದೆ. ಬಳಿಕ ರೂಮ್​​ಗೆ ತೆರಳಿದ ಜೋಡಿ ಅದೇನಾಯ್ತೋ ಏನೋ ಏಕಾಏಕಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಇಬ್ಬರನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ದುರದೃಷ್ಟವಶಾತ್​ ವಧು ಲಿಖಿತ ಶ್ರೀ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇನ್ನು ಗಂಭೀತವಾಗಿ ಗಾಯಗೊಂಡಿರುವ ವರ ನವೀನ್​ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಕೋಲಾರ: ಮರಕ್ಕೆ ಆಡಿ ಕಾರು ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು, ಓರ್ವ ಬಚಾವ್

ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಚಂಬರಸನಹಳ್ಳಿ ಗ್ರಾಮದ ನವೀನ್ ಕೆಲವು ವರ್ಷಗಳಿಂದ ಆಂಧ್ರಪ್ರದೇಶದ ಬೈನಪಲ್ಲಿ ಗ್ರಾಮದ ಲಿಖಿತಶ್ರೀಯನ್ನು ಪ್ರೀತಿಸುತ್ತಿದ್ದ. ಇಬ್ಬರೂ ಸೇರಿ ಕಷ್ಟಪಟ್ಟು ಮನೆಯವರನ್ನು ಒಪ್ಪಿಸಿ ಗ್ರಾಮದಲ್ಲಿ ಸರಳವಾಗಿ ಮದುವೆಯನ್ನೂ ಮಾಡಿಕೊಂಡಿದ್ದಾರೆ. ಬೆಳಗ್ಗೆ ಮದುವೆಯಾದ ಜೋಡಿ ಎಲ್ಲ ಮದುವೆ ಶಾಸ್ತ್ರಗಳು ಮುಕ್ತಾಯಗೊಂಡ ನಂತರ ಒಂದು ಕೋಣೆಯಲ್ಲಿ ಹೋಗಿದ್ದಾರೆ. ಕೆಲ ಹೊತ್ತಿನ ನಂತರ ಕೊಠಡಿಯಲ್ಲಿದ್ದ ಹುಡುಗ ಹುಡುಗಿ ‌ಹೊಡೆದಾಡಿಕೊಂಡಿದ್ದಾರೆ.

ಮದ್ವೆಯಾಗಿ ಇನ್ನೇನು ಸುಖವಾಗಿ ಸಂಸಾರ ಸಾಗಿಸಬೇಕಿದ್ದ ವಧು ದುರಂತ ಅಂತ್ಯಕಂಡಿದ್ದರೆ, ವರ ನವೀನ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದಾನೆ. ಆದ್ರೆ,  ಯಾವ ಕಾರಣಕ್ಕೆ ಜೀವ ಹೋಗುವಾಗೆ ಹೊಡೆದುಕೊಂಡರು ಎನ್ನುವುದು ತಿಳಿದುಬಂದಿಲ್ಲ. ಸದ್ಯ ವಿಷಯ ತಿಳಿದು ಸ್ಥಳಕ್ಕೆ ಅಂಡರ್ ಸನ್ ಪೇಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಅದೇನೆ ಇರಲಿ ಗಲಾಟೆಗಳು ಇದ್ದರೆ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಆದ್ರೆ, ಪ್ರಾಣ ಹೋಗುವಾಗೇ ಹೊಡೆದಾಡಿಕೊಂಡಿರುವುದು ವಿಪರ್ಯಾಸವೇ ಸರಿ. ಮದುವೆ ಸಂಭ್ರಮದಲ್ಲಿದ್ದ ಎರಡೂ ಕುಟುಂಬಗಳಲ್ಲಿ ಈ ದುರಂತದಿಂದಾಗಿ ಸೂತಕದ ಛಾಯೆ ಆವರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:55 pm, Wed, 7 August 24

ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ