ಕೋಲಾರ, (ಆಗಸ್ಟ್ 07): ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದು,, ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ವಧು ಮೃತಪಟ್ಟಿದ್ದರೆ, ವರನ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿದೆ. ವಧು ಲಿಖಿತ ಶ್ರೀ ಹಾಗೂ ನವೀನ್ ಇಂದು (ಆಗಸ್ಟ್ 07) ಸಪ್ತಪದಿ ತುಳಿದಿದ್ದಾರೆ. ಆದ್ರೆ, ಅದೇನಾಯ್ತೋ ಏನೋ ರೂಮ್ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಧು ಲಿಖಿತ ಶ್ರೀ ಸಾವನ್ನಪ್ಪಿದ್ದಾಳೆ.
ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಚಂಬರಸನಹಳ್ಳಿ ಗ್ರಾಮದಲ್ಲಿ ಇಂದು(ಆಗಸ್ಟ್ 07) ವಧು ಲಿಖಿತ ಶ್ರೀ ಹಾಗೂ ನವೀನ್ ಅದ್ಧೂರಿಯಾಗಿ ಮದುವೆ ಆಗಿದೆ. ಬಳಿಕ ರೂಮ್ಗೆ ತೆರಳಿದ ಜೋಡಿ ಅದೇನಾಯ್ತೋ ಏನೋ ಏಕಾಏಕಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಇಬ್ಬರನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ದುರದೃಷ್ಟವಶಾತ್ ವಧು ಲಿಖಿತ ಶ್ರೀ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇನ್ನು ಗಂಭೀತವಾಗಿ ಗಾಯಗೊಂಡಿರುವ ವರ ನವೀನ್ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ಕೋಲಾರ: ಮರಕ್ಕೆ ಆಡಿ ಕಾರು ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು, ಓರ್ವ ಬಚಾವ್
ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಚಂಬರಸನಹಳ್ಳಿ ಗ್ರಾಮದ ನವೀನ್ ಕೆಲವು ವರ್ಷಗಳಿಂದ ಆಂಧ್ರಪ್ರದೇಶದ ಬೈನಪಲ್ಲಿ ಗ್ರಾಮದ ಲಿಖಿತಶ್ರೀಯನ್ನು ಪ್ರೀತಿಸುತ್ತಿದ್ದ. ಇಬ್ಬರೂ ಸೇರಿ ಕಷ್ಟಪಟ್ಟು ಮನೆಯವರನ್ನು ಒಪ್ಪಿಸಿ ಗ್ರಾಮದಲ್ಲಿ ಸರಳವಾಗಿ ಮದುವೆಯನ್ನೂ ಮಾಡಿಕೊಂಡಿದ್ದಾರೆ. ಬೆಳಗ್ಗೆ ಮದುವೆಯಾದ ಜೋಡಿ ಎಲ್ಲ ಮದುವೆ ಶಾಸ್ತ್ರಗಳು ಮುಕ್ತಾಯಗೊಂಡ ನಂತರ ಒಂದು ಕೋಣೆಯಲ್ಲಿ ಹೋಗಿದ್ದಾರೆ. ಕೆಲ ಹೊತ್ತಿನ ನಂತರ ಕೊಠಡಿಯಲ್ಲಿದ್ದ ಹುಡುಗ ಹುಡುಗಿ ಹೊಡೆದಾಡಿಕೊಂಡಿದ್ದಾರೆ.
ಮದ್ವೆಯಾಗಿ ಇನ್ನೇನು ಸುಖವಾಗಿ ಸಂಸಾರ ಸಾಗಿಸಬೇಕಿದ್ದ ವಧು ದುರಂತ ಅಂತ್ಯಕಂಡಿದ್ದರೆ, ವರ ನವೀನ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದಾನೆ. ಆದ್ರೆ, ಯಾವ ಕಾರಣಕ್ಕೆ ಜೀವ ಹೋಗುವಾಗೆ ಹೊಡೆದುಕೊಂಡರು ಎನ್ನುವುದು ತಿಳಿದುಬಂದಿಲ್ಲ. ಸದ್ಯ ವಿಷಯ ತಿಳಿದು ಸ್ಥಳಕ್ಕೆ ಅಂಡರ್ ಸನ್ ಪೇಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಅದೇನೆ ಇರಲಿ ಗಲಾಟೆಗಳು ಇದ್ದರೆ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಆದ್ರೆ, ಪ್ರಾಣ ಹೋಗುವಾಗೇ ಹೊಡೆದಾಡಿಕೊಂಡಿರುವುದು ವಿಪರ್ಯಾಸವೇ ಸರಿ. ಮದುವೆ ಸಂಭ್ರಮದಲ್ಲಿದ್ದ ಎರಡೂ ಕುಟುಂಬಗಳಲ್ಲಿ ಈ ದುರಂತದಿಂದಾಗಿ ಸೂತಕದ ಛಾಯೆ ಆವರಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:55 pm, Wed, 7 August 24