AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕೋಲಾರ ಜಿ.ಪಂ ನರೇಗಾ ಇಂಜಿನಿಯರ್

ಕೋಲಾರ ಜಿಲ್ಲಾ ಪಂಚಾಯತ್‌ನ ನರೇಗಾ ವಿಭಾಗದ ಇಂಜಿನಿಯರ್ ಕೃಷ್ಣಮೂರ್ತಿ ಮತ್ತು ಸಹಾಯಕ ಹುಸೇನ್ ಅಲಿ, ಕಾಮಗಾರಿ ಬಿಲ್ ಮಂಜೂರು ಮಾಡಲು 4 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಗುತ್ತಿಗೆದಾರರ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, 2 ಲಕ್ಷ ಲಂಚ ಪಡೆಯುವಾಗ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕೋಲಾರ ಜಿ.ಪಂ ನರೇಗಾ ಇಂಜಿನಿಯರ್
ನರೇಗಾ ಲಂಚ, ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Jul 21, 2026 | 10:07 PM

Share

ಕೋಲಾರ ಜು. 21: ನರೇಗಾ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದ್ದ ಕಾಮಗಾರಿಗಳ ಬಿಲ್ ಮಂಜೂರು ಮಾಡಲು ಬೃಹತ್ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕೋಲಾರ ಜಿಲ್ಲಾ ಪಂಚಾಯತ್‌ನ ನರೇಗಾ ವಿಭಾಗದ ಜೂನಿಯರ್ ಇಂಜಿನಿಯರ್ ಹಾಗೂ ಆತನ ಸಹಾಯಕ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕೋಲಾರ ಜಿಲ್ಲಾ ಪಂಚಾಯತ್ ನರೇಗಾ ಕಾಮಗಾರಿಯ ತಾಂತ್ರಿಕ ಇಂಜಿನಿಯರ್ ಕೃಷ್ಣಮೂರ್ತಿ ಹಾಗೂ ಅವರ ಸಹಾಯಕ ಹುಸೇನ್ ಅಲಿ ಲೋಕಾಯುಕ್ತ ದಾಳಿಯಲ್ಲಿ ಬಂಧನಕ್ಕೊಳಗಾದ ಭ್ರಷ್ಟ ಅಧಿಕಾರಿಗಳಾಗಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಡಿಯನೂರು ಗ್ರಾಮದ ಗುತ್ತಿಗೆದಾರ ಕೃಷ್ಣಮೂರ್ತಿ ಅವರು ನರೇಗಾ ಯೋಜನೆಯಡಿ ನೆರವೇರಿಸಿದ್ದ ಕಾಮಗಾರಿಗಳ ಬಿಲ್ ಮಂಜೂರು ಮಾಡಲು ಇಂಜಿನಿಯರ್ ಕೃಷ್ಣಮೂರ್ತಿ ಹಾಗೂ ಸಹಾಯಕ ಹುಸೇನ್ ಅಲಿ ಬರೋಬ್ಬರಿ 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಲಂಚ ನೀಡಲು ಇಷ್ಟವಿಲ್ಲದ ಗುತ್ತಿಗೆದಾರ ಕೃಷ್ಣಮೂರ್ತಿಯವರು ಈ ಕುರಿತು ಕೋಲಾರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಮಂಗಳವಾರ ಕೋಲಾರ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುತ್ತಿಗೆದಾರನಿಂದ ಮುಂಗಡವಾಗಿ 2 ಲಕ್ಷ ರೂಪಾಯಿ ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಸಿಬ್ಬಂದಿ ದಾಳಿ ನಡೆಸಿ, ಇಬ್ಬರನ್ನೂ ಹಣದ ಸಮೇತ ರೆಡ್ ಹ್ಯಾಂಡ್‌ ಆಗಿ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಬಡವರ ಹೊಟ್ಟೆಗೆ ಕನ್ನ ಹಾಕಿದ ಮಾಜಿ ಜಿ.ಪಂ ಸದಸ್ಯನ ಮಗ: ಯಾದಗಿರಿಯಲ್ಲಿ ಬಟಾ ಬಯಲಾಯ್ತು ಅಕ್ರಮ ಅಕ್ಕಿ ದಂಧೆ

ಲೋಕಾಯುಕ್ತ ಇನ್ಸ್‌ಪೆಕ್ಟರ್ ರೇಣುಕಾ ಅವರ ನೇತೃತ್ವದಲ್ಲಿ ನಡೆಸಲಾದ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಲಂಚದ ಹಣವನ್ನು ಜಪ್ತಿ ಮಾಡಲಾಗಿದ್ದು, ಭ್ರಷ್ಟ ಅಧಿಕಾರಿ ಕೃಷ್ಣಮೂರ್ತಿ ಹಾಗೂ ಅವರ ಸಹಾಯಕ ಹುಸೇನ್ ಅಲಿ ಅವರನ್ನು ಬಂಧಿಸಲಾಗಿದೆ. ಇಬ್ಬರ ವಿರುದ್ಧವೂ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ