ತಾಲ್ಲೂಕು ಕಚೇರಿಗೆ ಅಲೆ ಅಲೆದು ಸುಸ್ತಾದ ಅಜ್ಜಿ ಶ್ರೀನಿವಾಸಪುರ ತಹಶೀಲ್ದಾರ್ ಕಚೇರಿ ಬಾಗಿಲಲ್ಲಿ ಮಲಗಿ ಪ್ರತಿಭಟನೆ!

| Updated By: ಸಾಧು ಶ್ರೀನಾಥ್​

Updated on: Jul 08, 2022 | 6:51 PM

ಜಿಲ್ಲೆಯಲ್ಲಿ ಇದು ಎರಡನೇ ಘಟನೆಯಾಗಿದೆ. ಇತ್ತೀಚೆಗಷ್ಟೇ ಕೋಲಾರ ತಾಲ್ಲೂಕು ಕಚೇರಿಯಲ್ಲಿ ಕೆಲಸ ವಿಳಂಬ ಖಂಡಿಸಿ ಕಚೇರಿಯಲ್ಲೇ ಡಿಸೇಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಇದರ ಬೆನ್ನಲ್ಲೇ ಇಂದು ಅಜ್ಜಿಯೊಬ್ಬರು ಬಂದು ವಿನೂತನ ಪ್ರತಿಭಟನೆ ಮಾಡಿ ತಾಲ್ಲೂಕು ಕಚೇರಿ ಕಾರ್ಯವೈಖರಿ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ತಾಲ್ಲೂಕು ಕಚೇರಿಗೆ ಅಲೆ ಅಲೆದು ಸುಸ್ತಾದ ಅಜ್ಜಿ ಶ್ರೀನಿವಾಸಪುರ ತಹಶೀಲ್ದಾರ್ ಕಚೇರಿ ಬಾಗಿಲಲ್ಲಿ ಮಲಗಿ ಪ್ರತಿಭಟನೆ!
ತಾಲ್ಲೂಕು ಕಚೇರಿಗೆ ಅಲೆ ಅಲೆದು ಸುಸ್ತಾದ ಅಜ್ಜಿ ಶ್ರೀನಿವಾಸಪುರ ತಹಶೀಲ್ದಾರ್ ಕಚೇರಿ ಬಾಗಿಲಲ್ಲಿ ಮಲಗಿ ಪ್ರತಿಭಟನೆ!
Follow us on

ಖಾತೆ ಬದಲಾವಣೆಗಾಗಿ ತಾಲ್ಲೂಕು ಕಚೇರಿಗೆ ಅಲೆದು ಅಲೆದು ಸುಸ್ತಾದ ಅಜ್ಜಿಯೊಬ್ಬರು ಶ್ರೀನಿವಾಸಪುರ ತಹಶೀಲ್ದಾರ್ ಕಚೇರಿ ಬಾಗಿಲಲ್ಲಿ ಮಲಗಿ ಪ್ರತಿಭಟನೆ ಮಾಡಿದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ಖಾತೆ ಬದಲಾವಣೆ ವಿಚಾರ ಸಂಬಂದ ಅಧಿಕಾರಿಗಳು ಅನಗತ್ಯ ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೇಸತ್ತ ಅಜ್ಜಿ ತಾಲ್ಲೂಕು ಕಚೇರಿಯಲ್ಲೆ ಬಿಡಾರ ಹೂಡಿದ್ದಾರೆ.

ಶ್ರೀನಿವಾಸಪುರ ತಾಲ್ಲೂಕಿನ ಹೊದಲಿ ಗ್ರಾಮದ ನರಸಮ್ಮ ತಾಲ್ಲೂಕು ಕಚೇರಿಯಲ್ಲಿ ಬಂದು ಮಲಗಿರುವ ಅಜ್ಜಿ. ಅಜ್ಜಿ ಹಾಗೂ ಅವರ ಸಂಬಂಧಿಕರು ತಹಶೀಲ್ದಾರ್ ಶರೀನ್ ತಾಜ್ ಅವರಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಕೊನೆಗೆ ಇಂದು ತಾಲ್ಲೂಕು ಕಚೇರಿಗೆ ಭೇಟಿ ನೀಡಿದ ಕೋಲಾರ ಉಪ ವಿಭಾಗಾಧಿಕಾರಿ ಆನಂದ್ ಪ್ರಕಾಶ್ ಮೀನಾಗೆ ಮನವಿ ನೀಡಿ ತಹಶೀಲ್ದಾರ್ ಶರೀನ್ ತಾಜ್ ಹಾಗೂ ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಕೊನೆಗೆ ಒಂದು ತಿಂಗಳ ಕಾಲಾವಕಾಶ ಪಡೆದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಟ್ಟು ವಾಪಸ್ಸಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಇದು ಎರಡನೇ ಘಟನೆಯಾಗಿದೆ. ಇತ್ತೀಚೆಗಷ್ಟೇ ಕೋಲಾರ ತಾಲ್ಲೂಕು ಕಚೇರಿಯಲ್ಲಿ ಕೆಲಸ ವಿಳಂಬ ಖಂಡಿಸಿ ಕಚೇರಿಯಲ್ಲೇ ಡಿಸೇಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಇದರ ಬೆನ್ನಲ್ಲೇ ಇಂದು ಅಜ್ಜಿಯೊಬ್ಬರು ಬಂದು ವಿನೂತನ ಪ್ರತಿಭಟನೆ ಮಾಡಿ ತಾಲ್ಲೂಕು ಕಚೇರಿ ಕಾರ್ಯವೈಖರಿ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

– ರಾಜೇಂದ್ರ ಸಿಂಹ